ನವೆಂಬರ್‌ 1ರಂದು ಪುನೀತ್‌ ರಾಜಕುಮಾರಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ: ಸಿಎಂ ಬೊಮ್ಮಾಯಿ

ಬೆಂಗಳೂರು: ಚಿತ್ರನಟ ಡಾ. ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿಯನ್ನು ನವೆಂಬರ್ 1 ರಂದು ಪ್ರದಾನ ಮಾಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಅವರು ಇಂದು, ಶುಕ್ರವಾರ ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನ ಕಲಾ ಸಂಘದ ವತಿಯಿಂದ ಲಾಲ್‍ಬಾಗ್ ಗಾಜಿನ ಮನೆಯಲ್ಲಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನ ಉದ್ಘಾಟಿಸಿ, ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಶಸ್ತಿ ನೀಡಲು ಸಿದ್ಧತೆಗೆ ಸಮಿತಿ ರಚಿಸಲಾಗುವುದು. ರಾಜಕುಮಾರ್ ಕುಟುಂಬದ ಸದಸ್ಯರು ಸಹ ಸಮಿತಿಯಲ್ಲಿ ಇರುತ್ತಾರೆ ಎಂದರು.

ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಅಧಿಕೃತ ಟ್ವಿಟರ್‌ ಖಾತೆಯಲ್ಲಿಯೂ ಮಾಹಿತಿ ಹಂಚಿಕೊಂಡಿದ್ದಾರೆ.ಪುನೀತ್‌ ರಾಜ್‌ಕುಮಾರ್‌ ಅವರು ಕಳೆದ ವರ್ಷ ಅಕ್ಟೋಬರ್‌ 29ರಂದು ಹೃದಯಾಘಾತದಿಂದ ನಿಧನರಾಗಿದ್ದರು.
ನಂತರ ಅಗಲಿದ ನಟನ ಸ್ಮರಣಾರ್ಥ ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರ್‌ನಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಆಯೋಜಿಸಿದ್ದ ‘ಪುನೀತ ನಮನ’ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿಯನ್ನು ಘೋಷಣೆ ಮಾಡಿದ್ದರು.

ಪ್ರಮುಖ ಸುದ್ದಿ :-   ಸಚಿವ ದಿನೇಶ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ' ಹೇಳಿಕೆ : ಬಿಜೆಪಿ ಶಾಸಕ ಯತ್ನಾಳ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement