ಬೆಳಗಾವಿ: ಮಗನ ಮೇಲೆ ಚಿರತೆ ದಾಳಿ ಮಾಡಿದ ಸುದ್ದಿ ಕೇಳಿ ಹೃದಯಾಘಾತದಿಂದ ತಾಯಿ ಸಾವು

posted in: ರಾಜ್ಯ | 0

ಬೆಳಗಾವಿ: ಮಗನ ಮೇಲೆ ಚಿರತೆ ದಾಳಿ ಸುದ್ದಿ ಕೇಳಿ ತಾಯಿ ಸಾವು ಹೃದಯಾಘಾತದಿಂದ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಬೆಳಗಾವಿ ತಾಲೂಕಿನ ಖನಗಾವಿ ಕೆ.ಎಚ್. ಗ್ರಾಮದಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಕಟ್ಟಡ ನಿರ್ಮಾಣ ಕಾಮಗಾರಿ ಮಾಡುತ್ತಿದ್ದ ಸಿದರಾಯಿ ಮಿರಜಕರ್‌ಗೆ ಎಂಬವರ ಮೇಲೆ ಇಂದು, ಶುಕ್ರವಾರ ಚಿರತೆ ದಾಳಿ ಮಾಡಿತ್ತು‌. ಕಟ್ಟಡ ಕಾರ್ಮಿಕನ ಬೆನ್ನಿಗೆ ಪರಚಿದ ಗಾಯವಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ವಾಪಸ್ ಆಗಿದ್ದರು. ಚಿರತೆ ದಾಳಿಯಿಂದ ಸಣ್ಣಪುಟ್ಟ ಗಾಯ ಆಗಿತ್ತು.

advertisement

ಮಗ ಸಿದರಾಯಿ ಮೇಲೆ ಚಿರತೆ ದಾಳಿ ಸುದ್ದಿ ಕೇಳಿ ತಾಯಿ ಶಾಂತಾ (65) ಅವರಿಗೆ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ.
ಇಂದು, ಶುಕ್ರವಾರ ಮಧ್ಯಾಹ್ನ ಜಾಧವ್ ನಗರದ ಮನೆಯೊಂದರ ಕಾಂಪೌಂಡ್‌ನಿಂದ ಹಾರಿ ಬಂದ ಚಿರತೆ ಕಟ್ಟಡ ನಿರ್ಮಾಣ ಕಾಮಗಾರಿ ಮಾಡುತ್ತಿದ್ದ ಖನಗಾವಿ ಕೆ.ಹೆಚ್‌. ಗ್ರಾಮದ ನಿವಾಸಿ ಸಿದರಾಯಿ ಲಕ್ಷ್ಮಣ ಮಿರಜಕರ್ (38 ವರ್ಷ) ಮೇಲೆ ದಾಳಿ ಮಾಡಿತ್ತು.
ಸಿದರಾಯಿ ಭುಜಕ್ಕೆ ಪರಚಿ ಮತ್ತೋರ್ವ ಕಾರ್ಮಿಕನ ಬೆನ್ನಟ್ಟಿದೆ. ನಂತರ ಜನ ಬೊಬ್ಬೆ ಹೊಡೆದಿದ್ದಾರೆ. ಆಗಗಾಬರಿಗೊಂಡು ಪೊದೆಯಲ್ಲಿ ಅವಿತುಕೊಂಡಿದೆ ಎಂದು ಮಾಹಿತಿ ಹೇಳಿದ್ದಾರೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಓದಿರಿ :-   ಸಮಯಕ್ಕೆ ದೊರಕದ ಬ್ರಿಟನ್‌ ವೀಸಾ: ಅಂತಾರಾಷ್ಟ್ರೀಯ ವಿದಾರ್ಥಿ ಕ್ರೀಡಾಕೂಟಕ್ಕೆ ತೆರಳಲಾಗದೆ ಬೆಂಗಳೂರು ವಿದ್ಯಾರ್ಥಿಗಳಿಗೆ ನಿರಾಸೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement