ರಾಜಕುಮಾರ್ ಟಾಕಳೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾ

posted in: ರಾಜ್ಯ | 0

ಬೆಳಗಾವಿ: ತೋಟಗಾರಿಕಾ ಇಲಾಖೆಯ ಖಾನಾಪುರ ಸಸ್ಯಪಾಲನಾಲಯದ ಸಹಾಯಕ ನಿರ್ದೇಶಕ ರಾಜಕುಮಾರ ಟಾಕಳೆ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಳಗಾವಿಯ ಎಂಟನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ವಜಾ ಮಾಡಿದೆ.
ನವ್ಯಶ್ರೀ ಅವರು ದಾಖಲಿಸಿದ್ದ ಅತ್ಯಾಚಾರ, ಗರ್ಭಪಾತ ಹಾಗೂ ದೈಹಿಕ ಹಲ್ಲೆ ಸೇರಿ ಮೊದಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ರಾಜಕುಮಾರ್ ಟಾಕಳೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನನ್ನು ಬೆಳಗಾವಿಯ 8ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಅನಂತ್ ವಜಾಗೊಳಿಸಿದ್ದಾರೆ.

advertisement

ರಾಜಕುಮಾರ್ ಟಾಕಳೆ ವಿರುದ್ಧ ನವ್ಯಶ್ರೀ ರಾವ್ ದೂರಿನಡಿ ಬೆಳಗಾವಿಯ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಟಾಕಳೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಜಾಮೀನು ಅರ್ಜಿ ವಜಾಗೊಂಡಿದ್ದು, ಅಧಿಕಾರಿಗೆ ಸಂಕಷ್ಟ ಎದುರಾಗಿದೆ.
ಚನ್ನಪಟ್ಟಣ ಮೂಲದ ನವ್ಯಶ್ರೀ ರಾವ್ ವಿರುದ್ಧ ಜುಲೈ 18ರಂದು ರಾಜಕುಮಾರ್ ಟಾಕಳೆ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರಿನಲ್ಲಿ ಸುಳ್ಳು ಅತ್ಯಾಚಾರ ಕೇಸ್ ದಾಖಲಿಸುವುದಾಗಿ ಬೆದರಿಕೆ, ಸುಲಿಗೆ ಹಾಗೂ ಬ್ಲ್ಯಾಕ್‍ಮೇಲ್ ಬಗ್ಗೆ ಅವರು ಉಲ್ಲೇಖಿಸಿದ್ದರು. ಇದಕ್ಕೆ ಪ್ರತಿಯಾಗಿ ಜುಲೈ 23ರಂದು ರಾಜಕುಮಾರ ಟಾಕಳೆ ವಿರುದ್ಧ ನವ್ಯಶ್ರೀ, ಅತ್ಯಾಚಾರ, ಗರ್ಭಪಾತ, ಜೀವ ಬೆದರಿಕೆ ಹಾಗೂ ದೈಹಿಕ ಹಲ್ಲೆ ಸೇರಿ ಅನೇಕ ಅಂಶಗಳನ್ನು ಉಲ್ಲೇಖಿಸಿ ದೂರು ದಾಖಲಿಸಿದ್ದರು.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಓದಿರಿ :-   ಬೆಳಗಾವಿ ಐಟಿಬಿಪಿ ಶಿಬಿರದಲ್ಲಿ ಎಕೆ-47 ರೈಫಲ್​ಗಳ ಕಳ್ಳತನ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement