ಬೆಲೆ ಏರಿಕೆ, ಅಗತ್ಯ ವಸ್ತುಗಳ ಮೇಲಿನ ಜಿಎಸ್‌ಟಿ ಹೆಚ್ಚಳ ವಿರೋಧಿಸಿ ಸಂಸತ್ತಿನ ಹೊರಗೆ ಕಾಂಗ್ರೆಸ್‌ ಧರಣಿ: ರಾಹುಲ್ ಗಾಂಧಿ, ಕಾಂಗ್ರೆಸ್ ನಾಯಕರ ಬಂಧನ

ನವದೆಹಲಿ: ಬೆಲೆ ಏರಿಕೆ, ನಿರುದ್ಯೋಗ ಮತ್ತು ಅಗತ್ಯ ವಸ್ತುಗಳ ಮೇಲಿನ ಜಿಎಸ್‌ಟಿ ಹೆಚ್ಚಳದ ವಿರುದ್ಧ ಕಾಂಗ್ರೆಸ್ ಪಕ್ಷದಿಂದ ಬೃಹತ್ ಪ್ರತಿಭಟನೆಯ ನಡುವೆಯೇ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆಯಲಾಯಿತು.
ಕಾಂಗ್ರೆಸ್ ಪ್ರಧಾನ ಕಚೇರಿಯ ಹೊರಗೆ ಪ್ರತಿಭಟನೆ ನಡೆಸುತ್ತಿದ್ದಾಗ ಪಕ್ಷದ ಮುಖಂಡರನ್ನು ದೆಹಲಿ ಪೊಲೀಸರು ತಡೆದರು. ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಸಂಸದರು ಇಂದು, ಶುಕ್ರವಾರ ಸಂಸತ್ತಿನಲ್ಲಿ ಕಪ್ಪು ಬಟ್ಟೆ ಧರಿಸಿ ಬೆಲೆ ಏರಿಕೆ ಮತ್ತು ನಿರುದ್ಯೋಗದ ವಿರುದ್ಧ ಪ್ರತಿಭಟಿಸಿದರು. ತನಿಖಾ ಸಂಸ್ಥೆಗಳನ್ನು ಸರ್ಕಾರ ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿ ಕಾಂಗ್ರೆಸ್ ಸದಸ್ಯರು ಕೋಲಾಹಲ ಸೃಷ್ಟಿಸಿದ್ದರಿಂದ ರಾಜ್ಯಸಭೆ ಕಲಾಪವನ್ನು ಮುಂದೂಡಲಾಯಿತು.
ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸದಸ್ಯರು ಮತ್ತು ಹಿರಿಯ ನಾಯಕರು “ಪಿಎಂ ಹೌಸ್ ಘೇರಾವ್” ನಲ್ಲಿ ಭಾಗವಹಿಸಲು ಯೋಜಿಸಿದ್ದರು ಮತ್ತು ಲೋಕಸಭೆ ಮತ್ತು ರಾಜ್ಯಸಭಾ ಸಂಸದರು ಸಂಸತ್ತಿನಿಂದ “ಚಲೋ ರಾಷ್ಟ್ರಪತಿ ಭವನ” ನಡೆಸಲಿದ್ದಾರೆ ಎಂದು ಪಕ್ಷವು ಹೇಳಿಕೆಯಲ್ಲಿ ತಿಳಿಸಿದೆ.

ಆಡಳಿತವು ಕಾಂಗ್ರೆಸ್ ಮೆರವಣಿಗೆಗೆ ಮುಂಚಿತವಾಗಿ ದೆಹಲಿಯ ಕೆಲವು ಭಾಗಗಳಲ್ಲಿ ದೊಡ್ಡ ಸಭೆಗಳಿಗೆ ನಿರ್ಬಂಧ ವಿಧಿಸಿತು ವಿಧಿಸಿತು. ನಿರ್ಬಂಧಗಳನ್ನು ಉಲ್ಲೇಖಿಸಿ, ದೆಹಲಿ ಪೊಲೀಸರು ರಾಷ್ಟ್ರ ರಾಜಧಾನಿಯಲ್ಲಿ ಪ್ರತಿಭಟನೆ ನಡೆಸಲು ಕಾಂಗ್ರೆಸ್‌ಗೆ ಅನುಮತಿ ನಿರಾಕರಿಸಿದ್ದರು. ಹಣದುಬ್ಬರ, ಬೆಲೆ ಏರಿಕೆ, ಜಿಎಸ್‌ಟಿ ಮತ್ತು ನಿರುದ್ಯೋಗ ಸಮಸ್ಯೆಗಳ ವಿರುದ್ಧ ತಮ್ಮ ಪ್ರತಿಭಟನೆಯನ್ನು ಗುರುತಿಸಲು ದೆಹಲಿ ಪೊಲೀಸರು ಪ್ರತಿಭಟನೆಗೆ ಅನುಮತಿ ನಿರಾಕರಿಸಿದ್ದರೂ ಸಹ ಕಾಂಗ್ರೆಸ್ ನಾಯಕರು ರಾಷ್ಟ್ರಪತಿ ಭವನಕ್ಕೆ ಮೆರವಣಿಗೆ ನಡೆಸುತ್ತಿದ್ದಾರೆ. ಅರೆಸೇನಾ ಪಡೆಗಳು ಮತ್ತು ದೆಹಲಿ ಪೊಲೀಸರು ವಿಜಯ್ ಚೌಕ್ ರಸ್ತೆ ಮತ್ತು ಸಂಸತ್ತಿನಿಂದ ರಾಷ್ಟ್ರಪತಿ ಭವನಕ್ಕೆ ಹೋಗುವ ಮಾರ್ಗವನ್ನು ಬ್ಯಾರಿಕೇಡ್‌ಗಳ ಮೂಲಕ ನಿರ್ಬಂಧಿಸಿದ್ದಾರೆ. ಕಾಂಗ್ರೆಸ್ ಸಂಸದರ ಪ್ರತಿಭಟನೆಯನ್ನು ತಡೆಯಲು ಬ್ಯಾರಿಕೇಡ್‌ಗಳ ಇನ್ನೊಂದು ಬದಿಯಲ್ಲಿ ಮಹಿಳಾ ಪ್ಯಾರಾ ಸಿಬ್ಬಂದಿಗಳು ಸರತಿ ಸಾಲಿನಲ್ಲಿ ನಿಂತಿದ್ದಾರೆ. ಕಾಂಗ್ರೆಸ್‌ ಪ್ರಧಾನಿ ಭವನವನ್ನು ಘೇರಾವ್ ಮಾಡಲು ಕೂಡ ಯೋಜಿಸಿದೆ.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ : 1ನೇ ಹಂತದಲ್ಲಿ 62.37%ರಷ್ಟು ಮತದಾನ ; 2019ರ ಮತದಾನದ ಪ್ರಮಾಣಕ್ಕಿಂತ ಕಡಿಮೆ

ರಾಹುಲ್ ಗಾಂಧಿ ಅವರು ಪಕ್ಷದ ಪ್ರಧಾನ ಕಚೇರಿಯ ಹೊರಗೆ ಇತರ ಕಾಂಗ್ರೆಸ್ ನಾಯಕರೊಂದಿಗೆ ಪ್ರತಿಭಟನೆ ನಡೆಸುತ್ತಿದ್ದಾಗ ದೆಹಲಿ ಪೊಲೀಸರು ಅವರನ್ನು ವಶಕ್ಕೆ ಪಡೆದರು.
ಇದೇ ವೇಳೆ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಈಗ ಪ್ರಜಾಪ್ರಭುತ್ವ ಇಲ್ಲ, ನಮ್ಮ ದೇಶ ನಾಲ್ಕು ಜನರ ಸರ್ವಾಧಿಕಾರದಲ್ಲಿದೆ. ನಾವು ಪ್ರಜಾಪ್ರಭುತ್ವದ ಸಾವಿಗೆ ಸಾಕ್ಷಿಯಾಗಿದ್ದೇವೆ. ಬೆಲೆ ಏರಿಕೆ, ನಿರುದ್ಯೋಗ ಮತ್ತು ಸಮಾಜದಲ್ಲಿ ಹಿಂಸಾಚಾರದಂತಹ ಜನರ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಬಾರದು ಎಂಬುದು ಸರ್ಕಾರದ ಏಕೈಕ ಅಜೆಂಡಾ ಎಂದು ರಾಹುಲ್‌ ಗಾಂಧಿ ಆರೋಪಿಸಿದರು.
ಇದೇವೇಳೆ ವಂಶಾಡಳಿತ ಪಕ್ಷ ಎಂಬ ಹಣೆಪಟ್ಟಿ ಹೊತ್ತಿರುವ ಕಾಂಗ್ರೆಸ್‌ನಲ್ಲಿ ಪ್ರಜಾಪ್ರಭುತ್ವ ಇದೆಯೇ ಎಂದು ಬಿಜೆಪಿ ತಿರುಗೇಟು ನೀಡಿದೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement