ಯಾದಗಿರಿಯಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ಆರು ಮಂದಿ ಸಾವು

ಯಾದಗಿರಿ: ಕಾರು ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ 1 ವರ್ಷದ ಹೆಣ್ಣುಮಗು ಸೇರಿ 6 ಜನ ಮೃತಪಟ್ಟ ಘಟನೆ ಯಾದಗಿರಿ ಜಿಲ್ಲೆಯ ಗುರಮಿಠಕಲ್ ತಾಲೂಕಿನ ಅರಕೇರಾ(ಕೆ) ಬಳಿ ನಿನ್ನೆ ತಡರಾತ್ರಿ ನಡೆದಿದೆ. ಡಿಕ್ಕಿಯ ರಭಸಕ್ಕೆ ಸ್ಥಳದಲ್ಲೇ ಮೂರು ಜನ ಮೃತಪಟ್ಟರೆ ಹಾಗೂ ಮತ್ತೆ ಮೂವರು ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ.
ಗಂಭೀರ ಗಾಯಗೊಂಡ ಬಾಲಕನನ್ನು ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮೃತರೆಲ್ಲರು ರಾಯಚೂರು ಜಿಲ್ಲೆಯ ಲಿಂಗಸೂಗೂರು ಹಟ್ಟಿಯವರು ಎಂದು ಹೇಳಲಾಗಿದೆ. ತೆಲಂಗಾಣದ ಕೊಡಂಗಲ್ ಸಮೀಪದ ದರ್ಗಾಕ್ಕೆ ಹುಂಡೈ ಸ್ಯಾಂಟ್ರೊ ಕಾರಿನಲ್ಲಿ ತೆರಳಿದ್ದರು. ದರ್ಗಾದಲ್ಲಿ ಜವಳ ಕಾರ್ಯಕ್ರಮ ಹಾಗೂ ಪೂಜೆ ಸಲ್ಲಿಸಿ ಗ್ರಾಮಕ್ಕೆ ವಾಪಸ್ ಬರುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ. ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಯಾದಗಿರಿ ಎಸ್ಪಿ ಡಾ.ಸಿ.ಬಿ.ವೇದಮೂರ್ತಿ‌ ಭೇಟಿ, ಪರಿಶೀಲನೆ ಮಾಡಿದ್ದಾರೆ. ಗುರಮಿಠಕಲ್ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನೆ ಕುರಿತು ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ. ಪರಾರಿಯಾದ ಚಾಲಕನ ಶೋಧ ನಡೆಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement