ರಾಜ್ಯ ‘ಸ್ಥಳೀಯ ಸಂಸ್ಥೆ’ಗಳ ನೌಕರರಿಗೆ ಗುಡ್ ನ್ಯೂಸ್ : ಕಾರ್ಮಿಕರ ಕನಿಷ್ಠ ವೇತನ ಹೆಚ್ಚಳ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪಂಚಾಯತ್‌ರಾಜ್‌ ಸಂಸ್ಥೆಗಳಲ್ಲಿ ಉದ್ಯೋಗದಲ್ಲಿರುವ ಹಾಗೂ ಆ ವ್ಯಾಪ್ತಿಯ ಉದ್ದಿಮೆಗಳಲ್ಲಿ ದುಡಿಯುವ ಕಾರ್ಮಿಕರ ನೀಡಲಾಗುವ ಕನಿಷ್ಠ ವೇತನವನ್ನು ರಾಜ್ಯ ಸರ್ಕಾರ ಪರಿಷ್ಕರಿಸಿದೆ.
ಕನಿಷ್ಠ ವೇತನ ಕಾಯ್ದೆ 1948ರ ಅಡಿ 2016ರಲ್ಲಿ ಕೊನೆಯದಾಗಿ ವೇತನ ಪರಿಷ್ಕರಿಸಲಾಗಿತ್ತು. ಸಾಮಾನ್ಯವಾಗಿ ಐದು ವರ್ಷಕ್ಕೊಮ್ಮೆ ಕನಿಷ್ಠ ವೇತನ ಪರಿಷ್ಕರಿಸಲಾಗುತ್ತದೆ.
ಕನಿಷ್ಠ ವೇತನ ದರಗಳನ್ನು ಪರಿಷ್ಕರಿಸಲು ಕರಡು ಪ್ರಸ್ತಾವನೆಯನ್ನು 2021ರ ಡಿಸೆಂಬರ್‌ 31ರಂದು ರಾಜ್ಯಪತ್ರದಲ್ಲಿ ಪ್ರಕಟಿಸಿ, ಸಲಹೆ, ಆಕ್ಷೇಪಣೆ ಸಲ್ಲಿಸಲು ಎರಡು ತಿಂಗಳ ಕಾಲಾವಕಾಶ ನೀಡಲಾಗಿತ್ತು. ಜೂನ್‌ 21ರಂದು ನಡೆದ ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿಯ ಸಭೆಯಲ್ಲಿ‌ ಚರ್ಚಿಸಿ, ವೇತನ ಪರಿಷ್ಕರಣೆ ಸಂಬಂಧ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿತ್ತು.

ಈ ಸಂಬಂಧ ಕಾರ್ಮಿಕ ಇಲಾಖೆಯ ಕನಿಷ್ಠ ವೇತನ ವಿಭಾಗದ ಪೀಠಾಧಿಕಾರಿಗಳು ಅಧಿಸೂಚನೆ ಹೊರಡಿಸಿದ್ದಾರೆ. ಈ ಅಧಿಸೂಚನೆಯಂತೆ ರಾಜ್ಯಾಧ್ಯಂತ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪಂಚಾಯತ್ ರಾಜ್ ಸಂಸ್ಥೆಗಳಲ್ಲಿ ಉದ್ಯೋಗ ಹಾಗೂ ಉದ್ದಿಮೆಯಲ್ಲಿ ಯಾವುದೇ ಕೆಲಸದಲ್ಲಿ ತೊಡಗಿರುವ ಕಾರ್ಮಿಕರಿಗೆ ಕನಿಷ್ಠ ವೇತನ ಕೋಷ್ಟಕದಲ್ಲಿ ನಿರ್ದಿಷ್ಟ ಪಡಿಸಿರುವಂತ ಕನಿಷ್ಠ ವೇತನ ದರಗಳನ್ನು ಪರಿಷ್ಕರಿಸಲು ರಾಜ್ಯ ಸರ್ಕಾರದ ಕರಡು ಪ್ರಸ್ತಾವನೆಯನ್ನು ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಿಸಿದೆ ಎಂದು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಕರ್ನಾಟಕದ ಈ ಜಿಲ್ಲೆಗಳಲ್ಲಿ 3-4 ದಿನ ಬಿಸಿಗಾಳಿ : ಹವಾಮಾನ ಇಲಾಖೆ ಎಚ್ಚರಿಕೆ

ಈಗಿನ ಗ್ರಾಹಕ ಬೆಲೆ ಸೂಚ್ಯಂಕದ ಪ್ರಕಾರ, ₹ 17,555 ಕನಿಷ್ಠ ವೇತನಕ್ಕೆ ₹ 900 ತುಟ್ಟಿಭತ್ಯೆ, ಪಿಎಫ್‌ ₹ 2,100, ಇಎಸ್‌ಐ ₹ 550 ಸೇರಿ ₹ 22,505 ಮಾಸಿಕ ವೇತನ ಆಗಲಿದೆ. 2016ಕ್ಕೆ ಹೋಲಿಸಿದರೆ ಪರಿಷ್ಕೃತ ಕನಿಷ್ಠ ವೇತನ ಸರಾಸರಿ ಶೇ 10ರಷ್ಟು ಹೆಚ್ಚಳವಾಗಿದೆ. ಪರಿಷ್ಕರಣೆಯ ಪ್ರಮಾಣವು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಇತರ ಮಹಾನಗರಪಾಲಿಕೆಗಳ ವ್ಯಾಪ್ತಿಯಲ್ಲಿ ಹೆಚ್ಚು, ನಗರಸಭೆ, ಪಟ್ಟಣ ಪಂಚಾಯತ, ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಕಡಿಮೆ ಇರುತ್ತದೆ.
ರಾಜ್ಯ ಕನಿಷ್ಠ ವೇತನಾ ಸಲಹಾ ಮಂಡಳಿಯಲ್ಲಿ ಚರ್ಚಿಸಿ, ಕನಿಷ್ಠ ವೇತನ ಬಗ್ಗೆ ಸರ್ಕಾರಕ್ಕೆ ವರದಿ ನೀಡಲಾಗಿತ್ತು. ಆಗಸ್ಟ್‌ ತಿಂಗಳಿನಿಂದಲೇ ಪರಿಷ್ಕೃತ ಕನಿಷ್ಠ ವೇತನ ಜಾರಿಗೆ ಬರಲಿದೆ.

 

3.2 / 5. 5

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement