ಕಾಮನ್ ವೆಲ್ತ್  ಕ್ರೀಡಾಕೂಟ : ಭಾರತದ ವನಿತೆಯರ ಕ್ರಿಕೆಟ್‌ ತಂಡ ಫೈನಲ್‌ಗೆ

ಬರ್ಮಿಂಗ್ ಹ್ಯಾಮ್ : ಇಂಗ್ಲೆಂಡ್‌ನ ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರು ಕಾಮನ್ ವೆಲ್ತ್  ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್ ತಂಡ ಫೈನಲ್ ಪ್ರವೇಶಿಸಿದೆ.
ಸೆಮಿಫೈನಲ್ ಪಂದ್ಯದಲ್ಲಿ ಬಲಾಢ್ಯ ಇಂಗ್ಲೆಂಡ್ ವಿರುದ್ಧ ಭಾರತ 4 ರನ್ ಗೆಲುವು ಸಾಧಿಸಿ ಫೈನಲ್‌ ಪ್ರವೇಶಿಸಿದೆ.
165 ರನ್ ಗುರಿ ಬೆನ್ನತ್ತಿದ್ದ ಇಂಗ್ಲೆಂಡ್ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 160 ರನ್ ಗಳಿಸಲಷ್ಟೇ ಶಕ್ತವಾಯಿತು. ಕೊನೆಯ 12 ಎಸೆತಗಳಲ್ಲಿ ಇಂಗ್ಲೆಂಡ್ ಗೆಲುವಿಗೆ 27 ರನ್ ಬೇಕಿತ್ತು. 19ನೇ ಓವರ್​​ನಲ್ಲಿ ಪೂಜಾ, 13 ರನ್ ಕೊಟ್ಟರು. ಕೊನೆಯ ಓವರ್​​ನಲ್ಲಿ ಸ್ನೇಹ 9 ರನ್ ನೀಡಿ, ಗೆಲುವು ತಂದುಕೊಟ್ಟರು.
ಇಂಗ್ಲೆಂಡ್ ತಂಡವನ್ನು ಸೋಲಿಸಿ ಫೈನಲ್ ಪಂದ್ಯಕ್ಕೆ ಲಗ್ಗೆ ಇಟ್ಟಿರುವ ಭಾರತ ವನಿತೆಯರ ತಂಡ ಆಗಸ್ಟ್‌ 7, ಭಾನುವಾರ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಎರಡನೇ ಸೆಮಿಫೈನಲ್ ಗೆದ್ದವರ ಜೊತೆ ಆಡಲಿದೆ. ಫೈನಲ್ ಪ್ರವೇಶ ಮಾಡಿ ಐತಿಹಾಸಿಕ ಸಾಧನೆ ಮಾಡಿರುವ ಭಾರತ ವನಿತೆಯ ತಂಡ ಫೈನಲ್ ಪಂದ್ಯದಲ್ಲಿ ಗೆದ್ದರೆ ಚಿನ್ನ ಅಥವಾ ಬೆಳ್ಳಿ ಪದಕವನ್ನು ಗೆಲ್ಲಲಿದೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

advertisement

ನಿಮ್ಮ ಕಾಮೆಂಟ್ ಬರೆಯಿರಿ

advertisement