ಭಟ್ಕಳ: ಭೂ ಕುಸಿತದಿಂದ ನಾಲ್ವರು ಮೃತಪಟ್ಟ ಮುಟ್ಟಳ್ಳಿ ಭಾಗದಲ್ಲಿ ಮತ್ತೆ ಗುಡ್ಡ ಕುಸಿತ, ಹತ್ತಕ್ಕೂ ಅಧಿಕ ಕುಟುಂಬಗಳ ಸ್ಥಳಾಂತರ

posted in: ರಾಜ್ಯ | 0

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಗುಡ್ಡ ಕುಸಿತ ಸಂಭವಿಸಿ ನಾಲ್ವರು ಮೃತಪಟ್ಟಿದ್ದ ಮುಟ್ಟಳ್ಳಿ ಭಾಗದಲ್ಲಿ ಕುಸಿತವಾಗಿದೆ ಎಂದು ವರದಿಯಾಗಿದ್ದು,ಆತಂಕಕ್ಕೆ ಕಾರಣವಾಗಿದೆ.
ಆಗಸ್ಟ್‌ 2 ರಂದು ಬೆಳಗಿನ ಜಾವ ಗುಡ್ಡ ಕುಸಿದು ಮನೆಯ ಮೇಲೆ ಬಿದ್ದ ಪರಿಣಾಮ ಮನೆ ಕುಸಿದು ನಾಲ್ವರು ಸಾವಿಗೀಡಾಗಿದ್ದರು. ಈಗ ಅದೇ ಊರಿನಲ್ಲಿ ಗುಡ್ಡದ ಭಾಗ ಮತ್ತೆ ಜಾರಿ ಕೆಳಕ್ಕೆ ಬಂದಿದೆ ಎಂದು ವರದಿಯಾಗಿದೆ.

advertisement

ಅಪಾಯ ಗಮನಿಸಿ, ಈಗಾಗಲೇ ಆರು ಮನೆಯವರಿಗೆ ನೋಟೀಸು ನೀಡಿ ಮನೆಯನ್ನು ಖಾಲಿ ಮಾಡಲು ಸೂಚನೆ ನೀಡಲಾಗಿತ್ತು. ಈಗ ಗುಡ್ಡ ಕುಸಿತ ಹಿನ್ನೆಲೆ ಗ್ರಾಮದ ಹತ್ತಕ್ಕೂ ಅಧಿಕ  ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದ್ದು, ಸ್ಥಳೀಯ ಆಡಳಿತ ಗುಡ್ಡದ ಭಾಗದಲ್ಲಿ ರಸ್ತೆ ಸಂಚಾರ ಬಂದ್ ಮಾಡಲಾಗಿದೆ ಎಂದು ಹೇಳಲಾಗಿದೆ.

ಮಳೆ ಕೂಡ ಸುರಿಯುತ್ತಿರುವ ಹಿನ್ನೆಲೆ ಗುಡ್ಡ ಕುಸಿತ ಹೆಚ್ಚಾಗುವ ಸಾಧ್ಯತೆಗಳಿರುವುದರಿಂದ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಗುಡ್ಡ ಕುಸಿತದಿಂದಾಗಿ ಗುಡ್ಡದ ಮೇಲ್ಭಾಗದಲ್ಲಿದ್ದ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಪರ್ಯಾಯ ಮಾರ್ಗಕ್ಕೆ ಬದಲಿಸಲಾಗಿದೆ. ಈ ಮಾರ್ಗದ ಮೂಲಕ ಸಬ್ಬತ್ತೆ, ಗೆಂಡೆಮೂಲೆ ಗ್ರಾಮಕ್ಕೆ ತೆರಳುತ್ತಿದ್ದವರಿಗೆ ರೈಲ್ವೇ ಬ್ರಿಡ್ಜ್ ಪಕ್ಕದ ರಸ್ತೆ ಮೂಲಕ ಸಂಚರಿಸುವಂತೆ ಸೂಚನೆ ನೀಡಲಾಗಿದೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಓದಿರಿ :-   ಬೆಳಗಾವಿ ನಂತರ ಈಗ ಮೂಡಲಗಿಯ ಧರ್ಮಟ್ಟಿಯಲ್ಲೂ ಚಿರತೆ ಪ್ರತ್ಯಕ್ಷ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 3

ನಿಮ್ಮ ಕಾಮೆಂಟ್ ಬರೆಯಿರಿ

advertisement