ಭಾರತದ 14ನೇ ಉಪರಾಷ್ಟ್ರಪತಿಯಾಗಿ ಎನ್‌ಡಿಎ ಅಭ್ಯರ್ಥಿ ಜಗದೀಪ್ ಧನಕರ್ ಆಯ್ಕೆ

ನವದೆಹಲಿ: ಪಶ್ಚಿಮ ಬಂಗಾಳದ ಮಾಜಿ ಗವರ್ನರ್ ಮತ್ತು ನ್ಯಾಷನಲ್ ಡೆಮಾಕ್ರಟಿಕ್ ಅಲಯನ್ಸ್ (ಎನ್‌ಡಿಎ) ಅಭ್ಯರ್ಥಿ ಜಗದೀಪ್ ಧನಕರ್ ಅವರು ಶನಿವಾರ ಭಾರತದ ಭಾರತದ 14ನೇ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ.
ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರನ್ನು ಒಳಗೊಂಡಿರುವ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಸ್ಪಷ್ಟ ಬಹುಮತವನ್ನು ಹೊಂದಿತ್ತು. ಜಗದೀಪ್ ಧನಕರ್‌ ಅವರು ಜಂಟಿ ವಿರೋಧ ಪಕ್ಷದ ಅಭ್ಯರ್ಥಿ ಮಾರ್ಗರೆಟ್ ಆಳ್ವಾ ವಿರುದ್ಧ ಅನುಕೂಲಕರ ಗೆಲುವಿಗೆ ಸಾಕ್ಷಿಯಾದರು. ಸಂಸತ್ತಿನ ಉಭಯ ಸದನಗಳು 788 ಸದಸ್ಯರನ್ನು ಒಳಗೊಂಡಿದೆ.
ಶನಿವಾರ ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಶೇ.93ರಷ್ಟು ಮತದಾನವಾಗಿದ್ದು, 50ಕ್ಕೂ ಹೆಚ್ಚು ಸಂಸದರು ತಮ್ಮ ಹಕ್ಕು ಚಲಾಯಿಸಲಿಲ್ಲ.ಒಟ್ಟು 780 ಸಂಸದರ ಪೈಕಿ 725 ಸಂಸದರು ಮತದಾನ ಮುಕ್ತಾಯವಾದಾಗ ಸಂಜೆ 5 ಗಂಟೆಯವರೆಗೆ ಮತ ಚಲಾಯಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 725 ಸಂಸದರು ಚಲಾಯಿಸಿದರು ಮತ್ತು ಇಂದು ಮುಂಜಾನೆ ನಡೆದ ಮತದಾನದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಅಭ್ಯರ್ಥಿ ಜಗದೀಪ ಧನಕರ್‌ ಅವರು 528 ಮತಗಳನ್ನು ಪಡೆದು ನಿರಾಯಾಸವಾಗಿ ಗೆದ್ದಿದ್ದಾರೆ. ಪ್ರತಿಪಕ್ಷಗಳ ಜಂಟಿ ಅಭ್ಯರ್ಥಿ ಮಾರ್ಗರೇಟ್‌ ಆಳ್ವ ಅವರು 182 ಮತಗಳನ್ನು ಪಡೆದರು. 15 ಮತಗಳು ಅಸಿಂಧುವಾಗಿವೆ. ಆಯ್ಕೆಯಾಗಲು 356 ಮತಗಳ ಅಗತ್ಯವಿತ್ತು. ಮಾನ್ಯವಾದ ಒಟ್ಟು ಮತಗಳಲ್ಲಿ, ಜಗದೀಪ್‌ ಧನಕರ್‌ ಅವರು ಶೇಕಡಾ 74.36 ಮತ ಪಡೆದರು.

1997 ರ ನಂತರ ನಡೆದ ಕೊನೆಯ ಆರು ಉಪರಾಷ್ಟ್ರಪತಿ ಚುನಾವಣೆಗಳಲ್ಲಿ ಧನಕರ್‌ ಅವರು ಅತಿ ಹೆಚ್ಚು ಗೆಲುವಿನ ಅಂತರವನ್ನು ಹೊಂದಿದ್ದಾರೆ. ಎನ್‌ಡಿಎಯೇತರ ಪಕ್ಷಗಳಾದ ನವೀನ್ ಪಟ್ನಾಯಕ್ ಅವರ ಬಿಜು ಜನತಾ ದಳ, ಜಗನ್ಮೋಹನ್ ರೆಡ್ಡಿ ಅವರ ವೈಎಸ್ಆರ್ ಕಾಂಗ್ರೆಸ್, ಮಾಯಾವತಿಯ ಬಹುಜನ ಸಮಾಜ ಪಕ್ಷ, ಚಂದ್ರಬಾಬು ನಾಯ್ಡು ಅವರ ತೆಲುಗು ದೇಶಂ ಪಕ್ಷ, ಜಾರ್ಖಂಡ್ ಮುಕ್ತಿ ಮೋರ್ಚಾ, ಅಕಾಲಿದಳ ಮತ್ತು ಶಿವಸೇನೆಯ ಏಕನಾಥ್ ಶಿಂಧೆ ಬಣ ಜಗದೀಪ್‌ ಧನಕರ್‌ ಅವರಿಗೆ ಬೆಂಬಲ ಸೂಚಿಸಿದ್ದವು. ಲೋಕಸಭೆಯಲ್ಲಿ 23 ಸಂಸದರು ಸೇರಿದಂತೆ ಒಟ್ಟು 36 ಸಂಸದರನ್ನು ಹೊಂದಿರುವ ತೃಣಮೂಲ ಕಾಂಗ್ರೆಸ್ ಚುನಾವಣೆಯಿಂದ ದೂರ ಉಳಿದಿತ್ತು. ಆದರೆ, ಅದರ ಇಬ್ಬರು ಸಂಸದರು ಮತ ಚಲಾಯಿಸಿದ್ದರು.

ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಉಪರಾಷ್ಟ್ರಪತಿಯಾಗಿ ಆಯ್ಕೆಯಾದ ಶ್ರೀ ಧಂಖರ್ ಅವರನ್ನು ಅಭಿನಂದಿಸಲು ತೆರಳಿದ್ದಾರೆ. ಪ್ರತಿಪಕ್ಷಗಳ ಅಭ್ಯರ್ಥಿ ಮಾರ್ಗರೆಟ್ ಆಳ್ವಾ ಅವರು ಜಗದೀಪ್‌ ಧನಕರ್‌ ಅವರನ್ನು ಅಭಿನಂದಿಸಿದ್ದಾರೆ. ಈ ಚುನಾವಣೆಯಲ್ಲಿ ತನಗೆ ಮತ ನೀಡಿದ ಪ್ರತಿಪಕ್ಷಗಳ ನಾಯಕರು ಮತ್ತು ವಿವಿಧ ಪಕ್ಷಗಳ ಸಂಸದರಿಗೆ ಅವರು ಧನ್ಯವಾದ ಅರ್ಪಿಸಿದರು. ಚುನಾವಣೆ ಮುಗಿದಿದೆ. ನಮ್ಮ ಸಂವಿಧಾನವನ್ನು ರಕ್ಷಿಸುವ, ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸುವ ಮತ್ತು ಸಂಸತ್ತಿನ ಘನತೆಯನ್ನು ಮರುಸ್ಥಾಪಿಸುವ ಹೋರಾಟವು ಮುಂದುವರಿಯುತ್ತದೆ” ಎಂದು ಅವರು ಹೇಳಿದ್ದಾರೆ.

ಜಗದೀಪ್ ಧನಕರ್‌  ಬಗ್ಗೆ…
ಜಗದೀಪ್ ಧನಕರ್‌ ಅವರು ರಾಜಸ್ಥಾನದ ಜುಂಜುನು ಜಿಲ್ಲೆಯ ದೂರದ ಹಳ್ಳಿಯಲ್ಲಿ ಕೃಷಿಕ ಕುಟುಂಬದಿಂದ ಬಂದವರು. ಚಿತ್ತೋರ್‌ಗಢದ ಸೈನಿಕ ಶಾಲೆಯಲ್ಲಿ ತಮ್ಮ ಶಾಲಾ ಶಿಕ್ಷಣವನ್ನು ಮುಗಿಸಿದ ನಂತರ, ಅವರು ಭೌತಶಾಸ್ತ್ರದಲ್ಲಿ ಪದವಿ ಪಡೆದು, ನಂತರ ರಾಜಸ್ಥಾನ ವಿಶ್ವವಿದ್ಯಾಲಯದಿಂದ LLB ಪಡೆದರು.
ಅವರು ರಾಜಸ್ಥಾನದ ಪ್ರಮುಖ ವಕೀಲರಲ್ಲಿ ಒಬ್ಬರಾದರು ಮತ್ತು ರಾಜಸ್ಥಾನ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಎರಡರಲ್ಲೂ ವಕೀಲಿ ವೃತ್ತಿ ಮಾಡಿದರು. ಅವರು ರಾಜಸ್ಥಾನ ಹೈಕೋರ್ಟ್ ವಕೀಲರ ಸಂಘದ ಅತ್ಯಂತ ಕಿರಿಯ ವಯಸ್ಸಿನ ಅಧ್ಯಕ್ಷರಾಗಿದ್ದರು.
ಅವರು 1989 ರಲ್ಲಿ ರಾಜಕೀಯಕ್ಕೆ ಪ್ರವೇಶಿಸಿದರು ಮತ್ತು ಅದೇ ವರ್ಷ ರಾಜಸ್ಥಾನದ ಜುಂಜುನುದಿಂದ ಲೋಕಸಭೆಗೆ ಆಯ್ಕೆಯಾದರು. ಚಂದ್ರಶೇಖರ್ ನೇತೃತ್ವದ ಜನತಾದಳ ಸರ್ಕಾರದಲ್ಲಿ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು.

ಪ್ರಮುಖ ಸುದ್ದಿ :-   ನಾಳೆ ಫಿಲಿಪ್ಪೀನ್ಸ್‌ಗೆ ʼಬ್ರಹ್ಮೋಸ್ ಕ್ಷಿಪಣಿʼಗಳ ಮೊದಲ ಸೆಟ್ ನೀಡಲಿದೆ ಭಾರತ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement