ಲಿಂಗನಮಕ್ಕಿ ಆಣೆಕಟ್ಟಿನಲ್ಲಿ ನೀರು ಹೆಚ್ಚಳ: ಶರಾವತಿ ನದಿ ತೀರ ಪ್ರದೇಶದ ಜನರಿಗೆ ಮುನ್ನೆಚ್ಚರಿಕೆ

ಹೊನ್ನಾವರ: ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಶರಾವತಿ ನದಿ ನೀರಿನ ಮಟ್ಟದಲ್ಲಿ ಗಣನೀಯ ಏರಿಕೆ ಕಂಡಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ವಿದ್ಯುತ್ ನಿಗಮದ ವತಿಯಿಂದ ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡಲಾಗಿದೆ.
ಲಿಂಗನಮಕ್ಕಿ ಜಲಾಶಯ ಭಾಗದ ಹಿನ್ನೀರಿನ ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು ಜಲಾಶಯಕ್ಕೆ 30,397 ಕ್ಯೂಸೆಕ್ ನೀರು ಹರಿದುಬರುತ್ತಿದೆ. ಕಳೆದ ತಿಂಗಳು ಸಹ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದುಬಂದು ಜಲಾಶಯದ ಒಳಹರಿವಿನಲ್ಲಿ ನೀರಿನ ಪ್ರಮಾಣ ಗಣನೀಯ ಏರಿಕೆ ಕಂಡಿತ್ತು.
ಲಿಂಗನಮಕ್ಕಿ ಜಲಾಶಯದ ನೀರಿನ ಸಂಗ್ರಹದ ಗರಿಷ್ಠ ಮಟ್ಟ 1,819 ಅಡಿ ಆಗಿದ್ದು, ಜಲಾಶಯದ ಭರ್ತಿಗೆ 17.65 ಅಡಿ ಮಾತ್ರ ಬಾಕಿ ಇದೆ. ಈಗ ಜಲಾಶಯದಲ್ಲಿ 1,801.35 ಅಡಿಯಷ್ಟು ನೀರು ಸಂಗ್ರಹವಾಗಿದೆ ಎಂದು ತಿಳಿಸಲಾಗಿದೆ.

ಜಲಾಶಯದ ನೀರಿನ ಮಟ್ಟ ಏರಿಕೆಯಾಗಲಿದ್ದು,, ಇನ್ನೂ ಹೆಚ್ಚಿನ ಮಳೆಯಾದರೆ ಯಾವುದೇ ಸಮಯದಲ್ಲಿಯೂ ಗರಿಷ್ಠ ಮಟ್ಟ ತಲುಪಬಹುದಾಗಿದೆ. ಹೀಗಾದರೆ ಆಣೆಕಟ್ಟಿನ ಸುರಕ್ಷತೆ ದೃಷ್ಟಿಯಿಂದ ಯಾವುದೇ ಕ್ಷಣದಲ್ಲಾದರೂ ನೀರನ್ನು ಹೊರಬಿಡಬಹುದಾಗಿದೆ. ಲಿಂಗನಮಕ್ಕಿ ಜಲಾಶಯದಿಂದ ಹೊರಬಿಟ್ಟ ಎಲ್ಲ ನೀರು ಗೇರುಸೊಪ್ಪ ಜಲಾಶಯಕ್ಕೆ ತಲುಪುತ್ತದೆ. ಆದರೆ ಗೇರುಸೊಪ್ಪ ಜಲಾಶಯವು ನೀರನ್ನು ಗರಿಷ್ಠ ಮಟ್ಟದಲ್ಲಿ ಕಾಪಾಡಿ ವಿದ್ಯುತ್‌ ಉತ್ಪಾದಿಸುವ ಜಲಾಶಯವಾಗಿದ್ದರಿಂದ ಹಾಗೂ ಸಂಗ್ರಹಣಾ ಸಾಮರ್ಥ್ಯವು ಕಡಿಮೆಯಿರುವುದರಿಂದ ಲಿಂಗನಮಕ್ಕಿ ಜಲಾಶಯದಿಂದ ಬಿಟ್ಟ ನೀರನ್ನು ಹೆಚ್ಚು ಸಂಗ್ರಹಿಸಲು ಗೇರುಸೊಪ್ಪ ಜಲಾಶಯದಲ್ಲಿ ಅವಕಾಶವಿರುವುದಿಲ್ಲ. ಹೀಗಾಗಿ ಆಣೆಕಟ್ಟಿನ ಕೆಳದಂಡೆ ಹಾಗೂ ನದಿ ಪಾತ್ರದಲ್ಲಿ ವಾಸವಿರುವ ಜನರು ತಮ್ಮ ಜಾನುವಾರುಗಳು ಹಾಗೂ ಇತರ ಸಾಮಗ್ರಿಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳುವಂತೆ ಕರ್ನಾಟಕ ವಿದ್ಯುತ್‌ ನಿಗಮ(ಕೆಪಿಸಿ)ದ ಪರವಾಗಿ ಕಾರ್ಯನಿರ್ವಾಹಕ ಇಂಜಿನಿಯರ್‌ ಶ್ರೀಲಕ್ಷ್ಮೀ ವಿ.ಶಂಕರ ಮುನ್ನೆಚ್ಚರಿಕೆ ನೀಡಿದ್ದಾರೆ.

ಪ್ರಮುಖ ಸುದ್ದಿ :-   ರಾಜ್ಯದ ಹಲವೆಡೆ ಮಳೆ : ವಿಜಯಪುರದಲ್ಲಿ ಐತಿಹಾಸಿಕ ಸ್ಮಾರಕ ಮೆಹತರ್ ಮಹಲಿನ ಮೀನಾರ್ ಮೇಲ್ತುದಿಗೆ ಹಾನಿ, ಕುಷ್ಟಗಿಯಲ್ಲಿ ಸಿಡಿಲಿಗೆ ರೈತ ಸಾವು

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement