ಹುಬ್ಬಳ್ಳಿ: ದರ್ಗಾದ ಗೋಡೆಗೆ ಗುದ್ದಿದ ಕಾರ್, ಒಂದೇ ಕುಟುಂಬದ ಮೂವರ ಸಾವು

posted in: ರಾಜ್ಯ | 0

ಹುಬ್ಬಳ್ಳಿ: ಬೆಂಗಳೂರು-ಹುಬ್ಬಳ್ಳಿ ‘ರಾಷ್ಟ್ರೀಯ ಹೆದ್ದಾರಿ ಮೇಲೆ ಕುಂದಗೋಳ ತಾಲೂಕಿನ ಜಗಳೂರ ಗ್ರಾಮದ ಸಮೀಪ ರಸ್ತೆಯ ಪಕ್ಕದಲ್ಲಿರುವ ಹಜರತ್ ಸಯ್ಯದ್ ಪತೇಶಾವಲಿ ದರ್ಗಾಗೆ ಕಾರ್ ಗುದ್ದಿ ಒಂದೇ ಕುಟುಂಬದ ಮೂವರು ಸಾವಿಗೀಡಾಗಿ, ಓರ್ವ ಮಹಿಳೆ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.
ಕಾರಿನಲ್ಲಿದ್ದ ಹನಮಂತಪ್ಪ ಬೇವಿನಕಟ್ಟಿ ( 76 ವರ್ಷ), ಪತ್ನಿ ರೇಣುಕಾ (75 ವರ್ಷ) ಅಳಿಯ ರವೀಂದ್ರ (56 ವರ್ಷ)ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಅರುಂದತಿ ರವೀಂದ್ರ (48 ವರ್ಷ) ಅವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇವರು ಬೆಂಗಳೂರಿನಲ್ಲಿ ಗೃಹ ಪ್ರವೇಶ ಮುಗಿಸಿ ಹುಬ್ಬಳ್ಳಿಗೆ ಕಾರ್‌ನಲ್ಲಿ ವಾಪಸ್ಸಾಗುತ್ತಿದ್ದರು. ಶಣಿವಾರ ರಾತ್ರಿ 10-30 ಸುಮಾರಿಗೆ ಜಗಳೂರಿನ ರಸ್ತೆಯ ಪಕ್ಕದಲ್ಲಿದ್ದ ದರ್ಗಾಗೆ ಕಾರ್‌ ಗುದ್ದಿದೆ. ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟರೆ, ಗಂಭೀರ ಗಾಯಗೊಂಡ ಮಹಿಳೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಓದಿರಿ :-   ವಚನ ಸಾಹಿತ್ಯದ ಶಿಖರ ಶರಣ ಸಾಹಿತಿ ಡಾ.ಸಂಗಮೇಶ ಹಂಡಗಿ | ಭಾನುವಾರ ಸಂಗಮ ಸಿರಿ ಪ್ರಶಸ್ತಿ ಪ್ರದಾನ, ಆಧುನಿಕ ವಚನಗಳು ಸಂಪುಟ- ೧೦ ಬಿಡುಗಡೆ

/ 5. ಒಟ್ಟು ವೋಟುಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement