ಬಸವರಾಜ ಹೊರಟ್ಟಿ ಕಾರು-ಬೈಕ್‌ ಡಿಕ್ಕಿ: ದ್ವಿಚಕ್ರ ವಾಹನ ಸವಾರನಿಗೆ ಗಾಯ

ಹುಬ್ಬಳ್ಳಿ:ನಗರದ ಬಿವಿಬಿ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಭಾನುವಾರ ನಡೆದ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಮುಗಿಸಿಕೊಂಡು ಹೋಗುತ್ತಿದ್ದ ವೇಳೆ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿಯವರ ಕಾರು ಅಪಘಾತಕ್ಕೀಡಾಗಿದೆ.

ಹೊರಟ್ಟಿಯವರ ಕಾರು ಎದುರಿಗೆ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಈ ವೇಳೆ ಬೈಕ್‌ ಸವಾರ ಕೆಂಚಪ್ಪ ಗೂಡಣ್ಣನವರ ಎಂಬವರಿಗೆ ಗಾಯವಾಗಿದೆ. ಸವದತ್ತಿ ‌ಮೂಲದ ಕೆಂಚಪ್ಪ  ಅವರು ಜೆಸಿಬಿ ಚಾಲಕ ಎಂದು ಹೇಳಲಾಗಿದೆ. ಗಾಯಾಳುವನ್ನು ಕಿಮ್ಸ್‌ಗೆ ರವಾನಿಸಲಾಗಿದೆ.
ಘಟನೆ ನಡೆದ ನಂತರ 10 ನಿಮಿಷ ಸ್ಥಳದಲ್ಲಿದ್ದ ಹೊರಟ್ಟಿ, ನಂತರ ಅಲ್ಲಿಂದ ಮತ್ತೊಂದು ವಾಹನದಲ್ಲಿ ತೆರಳಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ರಾಜ್ಯದ ಲೋಕಸಭೆ ಚುನಾವಣೆ 2ನೇ ಹಂತದಲ್ಲಿ ಶೇ.70.03 ಮತದಾನ; ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನ ? ಇಲ್ಲಿದೆ ವಿವರ..

ನಿಮ್ಮ ಕಾಮೆಂಟ್ ಬರೆಯಿರಿ

advertisement