ಅಕ್ರಮ ಹಣ ವರ್ಗಾವಣೆ ಪ್ರಕರಣ: ಶಿವಸೇನಾ ಸಂಸದ ಸಂಜಯ್ ರಾವತ್‌ಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ಮುಂಬೈ ಕೋರ್ಟ್‌

ಮುಂಬೈ: ಮುಂಬೈನ ‘ಚಾಳ’ ಮರು ಅಭಿವೃದ್ಧಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶಿವಸೇನಾ ಸಂಸದ ಸಂಜಯ್ ರಾವತ್ ಅವರನ್ನು ಇಲ್ಲಿನ ವಿಶೇಷ ನ್ಯಾಯಾಲಯ ಸೋಮವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಮನೆಯ ಆಹಾರ ಮತ್ತು ಔಷಧಿಗಳಿಗಾಗಿ ರಾವತ್ ಮಾಡಿದ ಮನವಿಗೆ ನ್ಯಾಯಾಲಯವು ಅನುಮತಿ ನೀಡಿದೆ, ಆದರೆ ಬೆಡ್‌ಗಾಗಿ ಅವರ ಮನವಿಗೆ ಅನುಮತಿ ನೀಡಲು ನಿರಾಕರಿಸಿತು. ಜೈಲು ಕೈಪಿಡಿಯ ಪ್ರಕಾರ ಜೈಲು ಅಧಿಕಾರಿಗಳು ಸಾಕಷ್ಟು ಹಾಸಿಗೆ ವ್ಯವಸ್ಥೆ ಮಾಡುತ್ತಾರೆ ಎಂದು ನ್ಯಾಯಾಧೀಶರು ಹೇಳಿದರು.

ಗೋರೆಗಾಂವ್‌ನ ಉಪನಗರದಲ್ಲಿರುವ ಪತ್ರಾ ಚಾಳ (ಸಾಲು ವಠಾರ) ಮರುಅಭಿವೃದ್ಧಿಯಲ್ಲಿನ ಹಣಕಾಸಿನ ಅಕ್ರಮಗಳಿಗೆ ಸಂಬಂಧಿಸಿದಂತೆ 60 ವರ್ಷದ ರಾವತ್ ಅವರನ್ನು ಆಗಸ್ಟ್ 1 ರಂದು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು. ಸೋಮವಾರ ಇಡಿ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಅವರನ್ನು ವಿಶೇಷ ಪಿಎಂಎಲ್‌ಎ ನ್ಯಾಯಾಧೀಶ ಎಂಜಿ ದೇಶಪಾಂಡೆ ಅವರ ಮುಂದೆ ಹಾಜರುಪಡಿಸಲಾಯಿತು.
ಇ.ಡಿ ತನಿಖಾ ಸಂಸ್ಥೆಯು ಅವರ ಕಸ್ಟಡಿಯನ್ನು ಮತ್ತಷ್ಟು ವಿಸ್ತರಿಸಲು ಬಯಸಲಿಲ್ಲ. ನಂತರ ನ್ಯಾಯಾಧೀಶರು ರಾವತ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದರು.
ಇ.ಡಿ ತನಿಖೆಯು ಪತ್ರಾ ‘ಚಾಳʼದ ಮರುಅಭಿವೃದ್ಧಿಯಲ್ಲಿ ಹಣಕಾಸಿನ ಅಕ್ರಮಗಳು ಮತ್ತು ರಾವತ್ ಅವರ ಪತ್ನಿ ಮತ್ತು ಸಹಚರರನ್ನು ಒಳಗೊಂಡಿರುವ ಸಂಬಂಧಿತ ಹಣಕಾಸಿನ ವಹಿವಾಟುಗಳಿಗೆ ಸಂಬಂಧಿಸಿದೆ.

ಇಂದಿನ ಪ್ರಮುಖ ಸುದ್ದಿ :-   ಎನ್‌ಐಎ ದಾಳಿಯಲ್ಲಿ ಮೋಸ್ಟ್ ವಾಂಟೆಡ್ ಶಂಕಿತ ಐಸಿಸ್ ಭಯೋತ್ಪಾದಕ ದೆಹಲಿಯಲ್ಲಿ ಬಂಧನ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement