ಕಾಲು ಸಂಕ ದಾಟುವಾಗ ಆಯತಪ್ಪಿ ಬಿದ್ದ 2ನೇ ತರಗತಿ ಬಾಲಕಿ ನೀರುಪಾಲು

ಉಡುಪಿ: ಶಾಲೆಯಿಂದ ಮನೆಗೆ ಬರುವಾಗ ಕಾಲುಸಂಕ ದಾಟುವಾಗ ಆಯತಪ್ಪಿ ಬಿದ್ದು 2ನೇ ತರಗತಿಯ ವಿದ್ಯಾರ್ಥಿನಿ ನೀರುಪಾಲಾದ ಘಟನೆ ಜಿಲ್ಲೆಯ ಬೈಂದೂರಿನ ತಾಲೂಕಿನ ಕಾಲ್ತೋಡು ಗ್ರಾಮದಲ್ಲಿ ಇಂದು ನಡೆದಿದೆ.
ಬೊಳಂಬಳ್ಳಿಯ ಮಕ್ಕಿಮನೆ ಮನೆ ಪ್ರದೀಪ್ ಪೂಜಾರಿ ಹಾಗೂ ಸುಮಿತ್ರಾ ಅವರ ಪುತ್ರಿ 7ವರ್ಷದ ಸನ್ನಿಧಿ ನೀರಿನಲ್ಲಿ ಕೊಚ್ಚಿ ಹೋಗಿರುವ ಸಾಧ್ಯತೆ ಇದ್ದು,  ತೀವ್ರ ಹುಡುಕಾಡ ನಡೆದಿದೆ.

ಚಪ್ಪರಿಕೆ ಶಾಲೆಯಲ್ಲಿ 2ನೇ ತರಗತಿಯಲ್ಲಿ ಓದುತ್ತಿರುವ ಸನ್ನಿಧಿ ಸೋಮವಾರ ಸಂಜೆ ಶಾಲೆಬಿಟ್ಟು ಮನೆಗೆ ಬರುವಾಗ ಬೀಜಮಕ್ಕಿ ಎಂಬಲ್ಲಿ ಕಾಲು ಸಂಕ ದಾಟುವಾಗ ಬಾಲಕಿ ಆಯತಪ್ಪಿ ಹಳ್ಳಕ್ಕೆ ಬಿದ್ದಿದ್ದಾಳೆ. ಸಾರ್ವಜನಿಕರು ಹುಡುಕಾಟ ಆರಂಭಿಸಿದ್ದು, ಶೋಧ ಕಾರ್ಯ ಭರದಿಂದ ಸಾಗಿದೆ.
ಸ್ಥಳಕ್ಕೆ ಬೈಂದೂರು ಶಾಸಕರಾದ ಬಿ.ಎಂ. ಸುಕುಮಾರ ಶೆಟ್ಟಿ ಜಿಪಂ ಮಾಜಿ ಅಧ್ಯಕ್ಷರಾದ ರಾಜು ಪೂಜಾರಿ, ತಹಶೀಲ್ದಾರ್ ಕಿರಣ್ ಗೋರಯ್ಯ ಮೊದಲಾದವರು ಭೇಟಿ ನೀಡಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement