ಕರ್ನಾಟಕದಲ್ಲಿ ಈ ಬಾರಿ ಅದ್ಧೂರಿ ಗಣೇಶೋತ್ಸವ ಆಚರಣೆಗೆ ಯಾವುದೇ ನಿರ್ಬಂಧ ಇಲ್ಲ

ಬೆಂಗಳೂರು: ಈ ವರ್ಷದ ಗಣೇಶೋತ್ಸವವನ್ನು ಕೋವಿಡ್‌ ಪೂರ್ವದಲ್ಲಿ ಆಚರಣೆ ಮಾಡುತ್ತಿದ್ದ ರೀತಿಯಲ್ಲಿ ಆಚರಣೆ ಮಾಡಲು ಅನುಮತಿ ನೀಡಲಾಗುವುದು. ಯಾವುದೇ ನಿರ್ಬಂಧಗಳನ್ನು ವಿಧಿಸುವುದಿಲ್ಲ ಎಂದು ಕಂದಾಯ ಸಚಿವ ಆರ್‌.ಅಶೋಕ ಹೇಳಿದ್ದಾರೆ. ಈ ಮೂಲಕ ಅವರು ರಾಜ್ಯಾದ್ಯಂತ ಸಾರ್ವಜನಿಕ ಗಜಾನನೋತ್ಸವ ಸಮಿತಿಗಳಿ ಸಿಹಿ ಸುದ್ದಿ ನೀಡಿದ್ದಾರೆ.
ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆ ಚರ್ಚೆ ಮಾಡಿದ ನಂತರ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ತಿಳಿಸಿದರು.

ಕಳೆದ ಎರಡು ವರ್ಷ ಕೋವಿಡ್‌ನಿಂದಾಗಿ ಸಾರ್ವಜನಿಕ ಗಣೇಶೋತ್ಸವಗಳ ಮೇಲೆ ನಿರ್ಬಂಧಗಳನ್ನು ಹೇರಲಾಗಿತ್ತು. ಸಾರ್ವಜನಿಕರ ಜೀವಕ್ಕೆ ಅಪಾಯವಾಗದಂತೆ ಕ್ರಮ ಕೈಗೊಳ್ಳುವುದು ಮುಖ್ಯವಾಗಿತ್ತು. ಸರ್ಕಾರದ ಮನವಿಗೆ ಸಾರ್ವಜನಿಕರು ಸ್ಪಂದಿಸಿದ್ದರು. ಈ ಬಾರಿ ಯಾವುದೇ ರೀತಿಯ ಅಡೆತಡೆಗಳಿರುವುದಿಲ್ಲ. ಕೋವಿಡ್‌ ಪೂರ್ವದಲ್ಲಿ ಹೇಗಿತ್ತೋ ಆ ರೀತಿ ಆಚರಣೆ ನಡೆಸಬಹುದಾಗಿದೆ ಎಂದರು.
ಪರಿಸರ ಸ್ನೇಹಿ ಮಣ್ಣಿನಿಂದ ತಯಾರಿಸಿದ ಗಣಪತಿ ವಿಗ್ರಹಗಳನ್ನು ಮಾತ್ರ ಪ್ರತಿಷ್ಠಾಪಿಸಬೇಕು. ಯಾವುದೇ ಕಾರಣಕ್ಕೂ ಪರಿಸರ ಮಾಲಿನ್ಯಗೊಳಿಸುವ ಪ್ಲಾಸ್ಲರ್ ಆಫ್​ ಪ್ಯಾರಿಸ್ ಸೇರಿದಂತೆ ಪರಿಸರಕ್ಕೆ ಹಾನಿಯಾಗುವಂತಹ ಇತರ ವಸ್ತು ಬಳಸಿ ತಯಾರಿಸಿದ ಗಣೇಶ ವಿಗ್ರಹ ಸ್ಥಾಪಿಸುವಂತಿಲ್ಲ ಎಂದು ಅವರು ಹೇಳಿದರು.

ಪ್ರಮುಖ ಸುದ್ದಿ :-   ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಕಮಿಷನ್‌ ಜಾಹೀರಾತು: ಸಿಎಂ ಸಿದ್ದರಾಮಯ್ಯ, ಡಿಸಿಎಂಗೆ ಡಿಕೆಶಿಗೆ ಸಮನ್ಸ್‌ ಮರು ಜಾರಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement