ದಕ್ಷಣ ಕನ್ನಡ ಜಿಲ್ಲೆಯಲ್ಲಿ ನಿಷೇಧಾಜ್ಞೆ ಆಗಸ್ಟ್ 14ರ ವರೆಗೆ ವಿಸ್ತರಣೆ

ಮಂಗಳೂರು: ದಕ್ಷಿಣ ಕನ್ನಡದಲ್ಲಿ ನಡೆದ ಸರಣಿ ಕೊಲೆ ಹಾಗೂ ನಂತರ ಉಂಟಾದ ಪ್ರಕ್ಷುಬ್ದ ಪರಿಸ್ಥಿತಿಯ ನಂತರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಾರಿ ಮಾಡಲಾಗಿರುವ ನಿಷೇಧಾಜ್ಞೆಯನ್ನು ವಿಸ್ತರಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆಕ್ಷನ್ 144 ಅನ್ನು ಆಗಸ್ಟ್ 14ರ ವರೆಗೆ ಮುಂದುವರೆಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ಈ ಸಂದರ್ಭದಲ್ಲಿ ಗುಂಪು ಸೇರುವುದು, ಸಾರ್ವಜನಿಕ ಸಮಾರಂಭ, ಸಭೆಗಳನ್ನು ನಡೆಸುವುದಕ್ಕೆ ಅವಕಾಶವಿಲ್ಲ ಎಂದು ತಿಳಿಸಲಾಗಿದೆ.

ಘೋಷಣೆಗಳನ್ನು ಕೂಗುವುದು, ಪ್ರತಿಕೃತಿಗಳನ್ನು ಸುಡುವುದು, ಪ್ರತಿಭಟನೆ ನಡೆಸುವುದನ್ನು ನಿಷೇಧಿಸಲಾಗಿದೆ. ಶಸ್ತ್ರಗಳು, ಮಾರಕಾಯುಧಗಳು, ದೊಣ್ಣೆ ಸೇರಿದಂತೆ ಯಾವುದೇ ಆಯುಧ ಹಾಗೂ ಪರಿಕರಗಳನ್ನು ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ.

ಅಂಗಡಿಗಳ ಮುಚ್ಚುವಿಕೆಯ ಮೇಲಿನ ಎಲ್ಲಾ ನಿರ್ಬಂಧಗಳನ್ನು ಸಡಿಲಿಸಿದ್ದಾರೆ. ಮದ್ಯದಂಗಡಿಗಳು ಸೇರಿದಂತೆ ಎಲ್ಲಾ ಅಂಗಡಿಗಳು ಎಂದಿನಂತೆ ಕಾರ್ಯನಿರ್ವಹಿಸಬಹುದಾಗಿದೆ. ಅಂಗಡಿ ಮುಚ್ಚುವಿಕೆಯ ಎಲ್ಲಾ ನಿರ್ಬಂಧಗಳನ್ನು ತೆಗೆದುಹಾಕಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement