ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ

ಬೆಂಗಳೂರು: ಮುಂದಿನ ಮುಂದಿನ 48 ಗಂಟೆಗಳಲ್ಲಿ ಕರಾವಳಿಯ ಎಲ್ಲ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.
ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಕಲಬುರಗಿ ಹಾಗೂ ದಕ್ಷಿಣ ಒಳನಾಡಿನ ಹಾಸನ, ಶಿವಮೊಗ್ಗ, ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಬೀದರ್, ಕಲಬುರಗಿ, ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೆ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಹಾಸನ, ಶಿವಮೊಗ್ಗ, ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಕೆಲವು ಸಲ ಮಳೆಯಾಗುವ ಸಾಧ್ಯತೆ ಇದ್ದು, ಒಮ್ಮೊಮ್ಮೆ ಭಾರೀ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.
ಮುಂದಿನ 48 ಗಂಟೆಗಳಲ್ಲಿ ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆಯಿದೆ. ಕರಾವಳಿ ತೀರದಲ್ಲಿ ಗಾಳಿಯ ವೇಗವು ಪ್ರತಿ ಗಂಟೆಗೆ 45-55 ಕಿ.ಮೀ. ಇರಲಿದ್ದು, 65 ಕಿಮೀ. ವರೆಗೂ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ.
ರಾಜ್ಯದ ಬಹುತೇಕ ಕಡೆಗಳಲ್ಲಿ ಉತ್ತಮ ಮಳೆಯಾಗಿದೆ. ಕೊಲ್ಲೂರು, ಭಾಗಮಂಡಲದಲ್ಲಿ ತಲಾ 16 ಸೆಂ.ಮೀ ಮಳೆಯಾಗಿದೆ. ಕಮ್ಮರಡಿ, ಉತ್ತರ ಕನ್ನಡ ಜೊಯಿಡಾದ ಕ್ಯಾಸಲ್‌ರಾಕ್, ಸಿದ್ದಾಪುರ , ಉಡುಪಿ ಹಾಗೂ ಮೂರ್ನಾಡುವಿನಲ್ಲಿ ತಲಾ 11 ಸೆಂ.ಮೀ ಮಳೆಯಾಗಿದ್ದು, ಉತ್ತರ ಕನ್ನಡ ಜಿಲ್ಲೆಯ ನಿಲ್ಕುಂದ, ಮಂಗಳೂರು ವಿಮಾನ, ನಿಲ್ದಾಣ, ಕೊಡಗಿನ ಸೋಮವಾರಪೇಟೆಯಲ್ಲಿ ತಲಾ 10 ಸೆಂಮೀ ಮಳೆ ದಾಖಲಾಗಿದೆ.

ಪ್ರಮುಖ ಸುದ್ದಿ :-   ಕುಮಟಾ : ಬಾಡದಲ್ಲಿ ಚಿರತೆ ದಾಳಿಗೆ ಇಬ್ಬರಿಗೆ ಗಾಯ ; ಮನೆಯೊಳಗೆ ನುಗ್ಗಿ ಅವಿತುಕೊಂಡ ಚಿರತೆ

 

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement