ರಾಜಸ್ಥಾನದ ಖಾಟು ಶ್ಯಾಮ್ ದೇವಸ್ಥಾನದಲ್ಲಿ ಕಾಲ್ತುಳಿತ: ಮೂವರ ಸಾವು, ಇಬ್ಬರಿಗೆ ಗಾಯ

ನವದೆಹಲಿ: ರಾಜಸ್ಥಾನದ ಸಿಕಾರ್‌ನಲ್ಲಿರುವ ಖಾಟು ಶ್ಯಾಮ್‌ ಜಿ ದೇವಸ್ಥಾನದಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಕಾಲ್ತುಳಿತದಲ್ಲಿ ಮೂವರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ.ಗಾಯಗೊಂಡ ಇಬ್ಬರನ್ನು ಚಿಕಿತ್ಸೆಗಾಗಿ ಜೈಪುರದ ಆಸ್ಪತ್ರೆಗೆ ರವಾನಿಸಲಾಗಿದೆ.
ದೇವಸ್ಥಾನದ ಪ್ರವೇಶ ದ್ವಾರದಲ್ಲಿ ಬೆಳಗ್ಗೆ 5 ಗಂಟೆ ಸುಮಾರಿಗೆ ಕಾಲ್ತುಳಿತ ಸಂಭವಿಸಿದೆ. ಇಂದು, ಸೋಮವಾರ ಚಂದ್ರನ ಕ್ಯಾಲೆಂಡರಿನ ವರ್ಷದ 11 ನೇ ದಿನ, ಭಗವಾನ್ ಕೃಷ್ಣನ ಅವತಾರವೆಂದು ನಂಬಲಾದ ಖಾಟು ಶ್ಯಾಮ್ ಜಿಯ ದರ್ಶನಕ್ಕೆ ಮಂಗಳಕರವೆಂದು ಪರಿಗಣಿಸಲಾಗಿದೆ.
ಪೊಲೀಸರ ಪ್ರಕಾರ, ದೇವಾಲಯದ ಹೊರಗೆ ದೊಡ್ಡ ಜನಸಮೂಹ ಜಮಾಯಿಸಿದ್ದು ಗೇಟ್ ತೆರೆಯುವವರೆಗೆ ಕಾಯುತ್ತಿತ್ತು. ಗೇಟ್‌ಗಳು ತೆರೆದಾಗ ಒಮ್ಮೆಲೇ ಜನರು ಒಳಗೆ ನುಗ್ಗಲು ಪ್ರಯತ್ನಿಸಿದಾಗ ಮಹಿಳೆಯೊಬ್ಬರು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ, ಇದರಿಂದಾಗಿ ಅವರ ಹಿಂದೆ ಇದ್ದವರು ಸಹ ಬಿದ್ದಿದ್ದಾರೆ. ನಂತರದ ಗೊಂದಲದಲ್ಲಿ, ಮೂವರು ಮಹಿಳೆಯರು ಪ್ರಾಣ ಕಳೆದುಕೊಂಡರು ಮತ್ತು ಇಬ್ಬರು ಗಾಯಗೊಂಡಿದ್ದಾರೆ.

ಕೂಡಲೇ ದೇವಸ್ಥಾನಕ್ಕೆ ಧಾವಿಸಿದ ಪೊಲೀಸ್ ಸಿಬ್ಬಂದಿ ಗುಂಪನ್ನು ನಿಯಂತ್ರಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು. ಪರಿಸ್ಥಿತಿ ನಿಯಂತ್ರಣದಲ್ಲಿದೆ ಮತ್ತು ಜನಸಂದಣಿಯನ್ನು ನಿಯಂತ್ರಿಸಲಾಗುತ್ತಿದೆ ಎಂದು ಸಿಕಾರ್‌ನ ಪೊಲೀಸ್ ಎಸ್ಪಿ ಕುನ್ವರ್ ರಾಷ್ಟ್ರದೀಪ್ ತಿಳಿಸಿದ್ದಾರೆ.
ರಾಜಸ್ಥಾನದ ಸಿಕಾರ್‌ನಲ್ಲಿರುವ ಖಾಟು ಶ್ಯಾಮ್‌ಜಿ ದೇವಾಲಯದ ಸಂಕೀರ್ಣದಲ್ಲಿ ಕಾಲ್ತುಳಿತದಿಂದಾಗಿ ಪ್ರಾಣಹಾನಿ ಆಗಿರುವುದರಿಂದ ದುಃಖವಾಗಿದೆ. ನನ್ನ ಆಲೋಚನೆಗಳು ದುಃಖಿತ ಕುಟುಂಬಗಳೊಂದಿಗೆ ಇವೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ” ಎಂದು ಪ್ರಧಾನಿ ಮೋದಿ ಸಂತಾಪದ ಸೂಚಿಸಿದ್ದಾರೆ.

ಪ್ರಮುಖ ಸುದ್ದಿ :-   ಕೆಲ ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದ ತಮಿಳುನಾಡು ಸಂಸದ ಹೃದಯಾಘಾತದಿಂದ ಸಾವು

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಸಂತ್ರಸ್ತರ ಕುಟುಂಬಗಳಿಗೆ ತಲಾ ₹ 5 ಲಕ್ಷ ಪರಿಹಾರ ಮತ್ತು ಕಾಲ್ತುಳಿತದಲ್ಲಿ ಗಾಯಗೊಂಡವರಿಗೆ ತಲಾ ₹ 20,000 ಸಹಾಯಧನ ಘೋಷಿಸಿದರು.
ಖಾಟು ಶ್ಯಾಮ್ ಜಿ ದೇವಸ್ಥಾನವು ರಾಜಸ್ಥಾನದ ಪ್ರಮುಖ ಯಾತ್ರಾ ಸ್ಥಳಗಳಲ್ಲಿ ಒಂದಾಗಿದೆ ಮತ್ತು ಹೆಚ್ಚಿನ ಜನಸಂದಣಿ ಇರುತ್ತದೆ.
ಗುಂಪು ಗುಂಪಾಗಿ ಜನರ ಉದ್ದನೆಯ ಸಾಲುಗಳಲ್ಲಿ ದೇವಾಲಯದ ಕಡೆಗೆ ಸಾಗುತ್ತಿರುವುದು ಇನ್ನೂ ಕಂಡುಬರುತ್ತದೆ. ಈ ಸಾಲುಗಳು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋಮೀಟರ್ ಉದ್ದದ ವರೆಗೆ ವ್ಯಾಪಿಸಿದೆ

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement