ನಿರ್ಮಾಪಕನಿಗೆ ಜೀವ ಬೆದರಿಕೆ ಪ್ರಕರಣ: ನಟ ದರ್ಶನ್‌ ವಿರುದ್ಧ ದೂರು ದಾಖಲು

posted in: ರಾಜ್ಯ | 0

ಬೆಂಗಳೂರು: ಸಿನೆಮಾ ನಿರ್ಮಾಪಕ ಭರತ್‌ ಅವರಿಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಕೆಂಗೇರಿ ಪೊಲೀಸ್ ಠಾಣೆ ನಟ ದರ್ಶನ್‌ ವಿರುದ್ಧ ಎನ್‌ಸಿಆರ್ ದಾಖಲಾಗಿದೆ.
ಕೆಂಗೇರಿ ಠಾಣೆಯಲ್ಲಿ ದೂರು ದಾಖಲಾಗಿದ್ದು, ಎನ್‌ಸಿಆರ್ (ಗಂಭೀರವಲ್ಲದ ಪ್ರಕರಣ) ದಾಖಲಿಸಿಕೊಂಡು ಸ್ವೀಕೃತಿ ನೀಡಲಾಗಿದೆ. ಭರತ್‌ ಅವರು ದೂರು ದಾಖಲಿಸಿದ್ದಾರೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

‘ಭಗವಾನ್ ಶ್ರೀಕೃಷ್ಣ ಪರಮಾತ್ಮ’ ಹೆಸರಿನ ಸಿನಿಮಾವೊಂದನ್ನು ನಿರ್ಮಾಪಕ ಭರತ್ ಕಳೆದ ಎರಡು ವರ್ಷದ ಹಿಂದೆ ಮುಹೂರ್ತ ಮಾಡಿದ್ದರು, ಅನಿವಾರ್ಯ ಕಾರಣಗಳಿಂದ ಸಿನಿಮಾ ಚಿತ್ರೀಕರಣ ತಡವಾಗುತ್ತಾ ಸಾಗಿತ್ತು. ಆ ಸಿನಿಮಾಕ್ಕೆ ಧ್ರುವನ್ (ಸೂರಜ್) ನಾಯಕ ನಟರಾಗಿದ್ದರು. ಆದರೆ ಸಿನಿಮಾಕ್ಕೆ ಹಣಕಾಸಿನ ಸಮಸ್ಯೆ ಎದುರಾಗಿದ್ದಕ್ಕೆ ಚಿತ್ರೀಕರಣ ತಡವಾಗಿದೆ ಎಂದು ನಿರ್ಮಾಪಕ ಭರತ್ ಅವರು ನಟ ಧ್ರುವನ್ ಬಳಿ ತಿಳಿಸಿದ್ದರಂತೆ. ಇದನ್ನು ಪ್ರಶ್ನೆ ಮಾಡಿದ್ದ ಧ್ರುವನ್ ಅವರು ನಟ ದರ್ಶನ್ ತೂಗುದೀಪ ಅವರ ಬಳಿ ಹೇಳಿದ್ದರಂತೆ. ನಂತರ ನಿರ್ಮಾಪಕ ಭರತ್‌ ಅವರಿಗೆ ದರ್ಶನ್‌ ಕರೆ ಮಾಡಿದ್ದು, ಆ ಸಮಯದಲ್ಲಿ ದರ್ಶನ್ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

ಓದಿರಿ :-   ಭಾರತದ ಎಲ್ಲ ರಾಜ್ಯಗಳು, ಅನೇಕ ದೇಶಗಳನ್ನು ಹೆಸರನ್ನು ಭೂಪಟ-ಧ್ವಜ ನೋಡಿಯೇ ಹೇಳುವ 18 ತಿಂಗಳ ಪುಟ್ಟಪೋರ ಅನಿಕೇತ ಭಟ್‌...!

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

/ 5. ಒಟ್ಟು ವೋಟುಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement