ಮಂಗಳೂರು: ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಠಾಣೆ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಈವರೆಗೆ ಏಳು ಆರೋಪಿಗಳನ್ನು ಬಂಧಿಸಲಾಗಿದೆ.
ಸುಳ್ಯದ ಜಟ್ಟಿಪಳ್ಳ ನಿವಾಸಿ ಅಬ್ದುಲ್ ಕಬೀರ್ (33) ಬಂಧಿತ ಆರೋಪಿಯಾಗಿದ್ದಾನೆ. ಪ್ರವೀಣ್ ಹತ್ಯೆಯಲ್ಲಿ ಪ್ರಮುಖ ಆರೋಪಿಗಳಿಗೆ ನೆರವು ನೀಡಿದ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ ಎಂದು ಹೇಳಲಾಗಿದೆ.
ಜುಲೈ 28ರಂದು ಬೆಳ್ಳಾರೆಯ ಶಫೀಕ್ ಮತ್ತು ಸವಣೂರಿನ ಜಾಕೀರ್ನನ್ನು ಬಂಧಿಸಿಲಾಗಿತ್ತು. ನಂತರ ಆಗಸ್ಟ್ 1ರಂದು ಪಲ್ಲಿ ಮಜಲು ನಿವಾಸಿಗಳಾದ ಸದ್ದಾಂ ಮತ್ತು ಹ್ಯಾರಿಸ್ ಎಂಬವರನ್ನು ಬಂಧಿಸಲಾಯಿತು. ಆಗಸ್ಟ್ 7ರಂದು ಸುಳ್ಯದ ನಾವೂರು ನಿವಾಸಿ ಅಬೀದ್(22) ಎಂಬವರನ್ನು ಬಂಧಿಸಲಾಗಿತ್ತು. ನಂತರ ಬೆಳ್ಳಾರೆ ನಿವಾಸಿ ನೌಫಲ್(28) ನನ್ನು ಪೊಲೀಸರು ಬಂಧಿಸಿದ್ದು, ಈಗ ಅಬ್ದುಲ್ ಕಬೀರ್ ಸಿ.ಎ(33) ಎಂಬಾತನನ್ನು ಬಂಧಿಸಲಾಗಿದೆ. ಹತ್ಯೆಯಲ್ಲಿ ನೇರ ಭಾಗಿಯಾದ ಆರೋಪಿಗಳಿಗಾಗಿ ಹುಡುಕಾಟ ಮುಂದುವರಿದಿದೆ.
ಪ್ರವೀಣ್ ಅವರನ್ನು ಬೆಳ್ಳಾರಿಯಲ್ಲಿ ರಾತ್ರಿ ತಮ್ಮ ಕೋಳಿ ಅಂಗಡಿ ಬಾಗಿಲು ಮುಚ್ಚುತ್ತಿರುವ ಸಮಯದಲ್ಲಿ ಬೈಕ್‌ನಲ್ಲಿ ಬಂದವರು ಮಾರಕಾಸ್ತ್ರಗಳಿಂದ ಕೊಚ್ಚಿ ಪರಾರಿಯಾಗಿದ್ದರು.
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ