ತಮ್ಮ ಆಸ್ತಿ ಘೋಷಿಸಿದ ಪ್ರಧಾನಿ ಮೋದಿ, ₹ 26.13 ಲಕ್ಷ ಹೆಚ್ಚಳ, ತಮ್ಮ ಹೆಸರಿಗಿದ್ದ ಭೂಮಿ ದಾನ: ಈಗ ಮೋದಿ ಆಸ್ತಿ ಎಷ್ಟು ಗೊತ್ತಾ..?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ₹ 2.23 ಕೋಟಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ, ಬಹುತೇಕ ಬ್ಯಾಂಕ್ ಠೇವಣಿಗಳಾಗಿವೆ. ಆದರೆ ಅವರು ಗಾಂಧಿನಗರದ ಒಂದು ತುಂಡು ಭೂಮಿಯಲ್ಲಿನ ತಮ್ಮ ಪಾಲನ್ನು ದಾನ ಮಾಡಿರುವುದರಿಂದ ಯಾವುದೇ ಸ್ಥಿರ ಆಸ್ತಿಯನ್ನು ಹೊಂದಿಲ್ಲ ಎಂದು ಅವರು ತಮ್ಮ ಇತ್ತೀಚಿನ ಆಸ್ತಿಯನ್ನು ಬಹಿರಂಗಪಡಿಸಿದ್ದಾರೆ.
ಮಾರ್ಚ್ 31ರಂದು ನವೀಕರಿಸಿದ ಅವರ ಆಸ್ತಿ ಘೋಷಣೆಯಲ್ಲಿ ಉಲ್ಲೇಖಿಸಿದ ಪ್ರಕಾರ,ಅವರು ಯಾವುದೇ ಬಾಂಡ್, ಷೇರು ಅಥವಾ ಮ್ಯೂಚುವಲ್ ಫಂಡ್‌ಗಳಲ್ಲಿ ಯಾವುದೇ ಹೂಡಿಕೆಯನ್ನು ಮಾಡಿಲ್ಲ, ಯಾವುದೇ ವಾಹನವನ್ನು ಹೊಂದಿಲ್ಲ, ಆದರೆ ₹ 1.73 ಲಕ್ಷ ಮೌಲ್ಯದ ನಾಲ್ಕು ಚಿನ್ನದ ಉಂಗುರಗಳನ್ನು ಹೊಂದಿದ್ದಾರೆ.

ಪ್ರಧಾನಿ ಮೋದಿಯವರ ಚರ ಆಸ್ತಿಯು ಒಂದು ವರ್ಷದಲ್ಲಿ ₹ 26.13 ಲಕ್ಷ ಹೆಚ್ಚಾಗಿದೆ, ವರ್ಷದ ಹಿಂದೆ ಅವರ ಬಳಿ ₹ 1.1 ಕೋಟಿ ಮೌಲ್ಯದ ಸ್ಥಿರ ಆಸ್ತಿ ಇತ್ತು, ಆದರೆ ದಾನ ಮಾಡಿರುವುದರಿಂದ ಈಗ ಯಾವುದೇ ಸ್ಥಿರಾಸ್ತಿ ಇಲ್ಲ.
ಪ್ರಧಾನ ಮಂತ್ರಿಗಳ ಕಚೇರಿ (PMO) ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದ ವಿವರಗಳ ಪ್ರಕಾರ, ಮಾರ್ಚ್ 31, 2022 ರಂತೆ ಅವರ ಒಟ್ಟು ಆಸ್ತಿ ₹2,23,82,504. ಅವರು ಗುಜರಾತ್‌ ಮುಖ್ಯಮಂತ್ರಿಯಾಗಿದ್ದಾಗ ಅಕ್ಟೋಬರ್ 2002 ರಲ್ಲಿ ನಿವೇಶನ ಖರೀಸಿದ್ದರು. ಅದರಲ್ಲಿ ಜಂಟಿಯಾಗಿ ಇತರ ಮೂವರು ಸಮಾನ ಪಾಲುದಾರರಿದ್ದರು. “ಸ್ಥಿರ ಆಸ್ತಿ ಸರ್ವೆ ಸಂಖ್ಯೆ. 401/A ನಿವೇಶನವನ್ನು ದಾನ ಮಾಡಿರುವುದರಿಂದ ಈಗ ಅವರು ಮಾಲೀಕರಲ್ಲ ಎಂದು ತಿಳಿಸಲಾಗಿದೆ.

ಪ್ರಮುಖ ಸುದ್ದಿ :-   ಸರಿಯಾಗಿ ಅಡುಗೆ ಮಾಡಲಿಲ್ಲ ಎಂಬ ಕಾರಣಕ್ಕೆ ಅಜ್ಜಿಗೆ ಬರ್ಬರವಾಗಿ ಥಳಿಸಿದ ಮೊಮ್ಮಗ-ಆತನ ಪತ್ನಿ : ವೀಡಿಯೊ ವೈರಲ್‌, ಇಬ್ಬರ ಬಂಧನ

ಮಾರ್ಚ್ 31, 2022 ರಂತೆ ಪ್ರಧಾನ ಮಂತ್ರಿಯವರ ಕೈಯಲ್ಲಿ ನಗದು ₹ 35,250 ಮತ್ತು ಅಂಚೆ ಕಚೇರಿಯಲ್ಲಿ ಅವರ ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರಗಳು ₹ 9,05,105 ರೂ.ಗಳಿವೆ ಮತ್ತು ₹ 1,89,305 ಮೌಲ್ಯದ ಜೀವ ವಿಮಾ ಪಾಲಿಸಿಗಳನ್ನು ಹೊಂದಿದ್ದಾರೆ.
ತಮ್ಮ ಆಸ್ತಿಯನ್ನು ಘೋಷಿಸಿದ ಪ್ರಧಾನಿಯವರ ಸಂಪುಟ ಸಹೋದ್ಯೋಗಿಗಳ ಪೈಕಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮಾರ್ಚ್ 31, 2022 ರಂತೆ ₹ 2.54 ಕೋಟಿ ಮೌಲ್ಯದ ಚರ ಮತ್ತು 2.97 ಕೋಟಿ ಮೌಲ್ಯದ ಸ್ಥಿರ ಆಸ್ತಿಯನ್ನು ಹೊಂದಿದ್ದಾರೆ.
ಎಲ್ಲಾ 29 ಕ್ಯಾಬಿನೆಟ್ ಮಂತ್ರಿಗಳಲ್ಲಿ, ಕಳೆದ ಹಣಕಾಸು ವರ್ಷದಲ್ಲಿ ತಮ್ಮದೇ ಮತ್ತು ಅವರ ಅವಲಂಬಿತರ ಆಸ್ತಿಯನ್ನು ಘೋಷಿಸಿದವರಲ್ಲಿ ಧರ್ಮೇಂದ್ರ ಪ್ರಧಾನ್, ಜ್ಯೋತಿರಾದಿತ್ಯ ಸಿಂಧಿಯಾ, ಆರ್‌ಕೆ ಸಿಂಗ್, ಹರ್ದೀಪ್ ಸಿಂಗ್ ಪುರಿ, ಪರ್ಶೋತ್ತಮ್ ರೂಪಲಾ ಮತ್ತು ಜಿ ಕಿಶನ್ ರೆಡ್ಡಿ ಕೂಡ ಸೇರಿದ್ದಾರೆ.
ಕಳೆದ ಹಣಕಾಸು ವರ್ಷದಲ್ಲಿ ಕ್ಯಾಬಿನೆಟ್ ಸಚಿವರಾಗಿದ್ದ ಮುಖ್ತಾರ್ ಅಬ್ಬಾಸ್ ನಖ್ವಿ ಅವರು ಜುಲೈನಲ್ಲಿ ರಾಜೀನಾಮೆ ನೀಡಿದ್ದು, ತಮ್ಮ ಆಸ್ತಿಯನ್ನು ಘೋಷಿಸಿದ್ದಾರೆ.

ಪ್ರಮುಖ ಸುದ್ದಿ :-   ಅಕ್ರಮ ಹಣ ವರ್ಗಾವಣೆ ಪ್ರಕರಣ : ಕೇಜ್ರಿವಾಲಗೆ ದೆಹಲಿ ಹೈಕೋರ್ಟ್‌ ನಿಂದ ಸಿಗದ ಜಾಮೀನು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement