ಸ್ವಾತಂತ್ರ್ಯದ ನಡಿಗೆ ಕಾರ್ಯಕ್ರಮಕ್ಕೆ ಪ್ರಿಯಾಂಕಾ ಗಾಂಧಿಗೆ ಆಹ್ವಾನ: ಭರ್ಜರಿ ಪ್ರದರ್ಶನಕ್ಕೆ ಡಿಕೆಶಿಯೂ ಸಜ್ಜು

ಬೆಂಗಳೂರು: ಸಿದ್ದರಾಮಯ್ಯ ಅವರ ಅಮೃತ ಮಹೋತ್ಸವದ ಬೆನ್ನಲ್ಲೇ ಈಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರು ಭರ್ಜರಿ ಶೋ ನಡೆಸಲು ಸಿದ್ಧತೆ ನಡೆಸಿದ್ದಾರೆ. ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಆಯೋಜಿಸಿರುವ ಕಾರ್ಯಕ್ರಮಕ್ಕೆ ಪ್ರಿಯಾಂಕಾ ಗಾಂಧಿ ಅವರನ್ನು ಅವರು ಆಹ್ವಾನಿಸಿದ್ದಾರೆ.
ಸಿದ್ದರಾಮಯ್ಯ ಅವರ ಬಣಕ್ಕೆ ಕೌಂಟರ್‌ ಕೊಡಲು ಶಿವಕುಮಾರ್ ಅವರು ಪ್ರಿಯಾಂಕಾ ಗಾಂಧಿ ಕಾರ್ಡ್ ಪ್ಲೇ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆಗಸ್ಟ್ 15 ರಂದು ಸ್ವಾತಂತ್ರ್ಯ ನಡಿಗೆ ಎಂಬ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಡಿ.ಕೆ.ಶಿವಕುಮಾರ್ ಆಯೋಜಿಸಿದ್ದು, ಈ ಕಾರ್ಯಕ್ರಮಕ್ಕೆ ಒಂದು ಲಕ್ಷ ಜನರು ಭಾಗವಹಿಸಲಿದ್ದಾರೆ ಎಂದು ಹೇಳಲಾಗಿದೆ

. ಈ ಕಾರ್ಯಕ್ರಮದ ಉದ್ಘಾಟನೆಗೆ ಆಗಮಿಸುವಂತೆ ಡಿ.ಕೆ.ಶಿವಕುಮಾರ್ ಅವರು ಪ್ರಿಯಾಂಕಾ ಗಾಂಧಿಯವರಿಗೆ ಆಹ್ವಾನ ನೀಡಿದ್ದಾರೆ ಎಂದು ಹೇಳಲಾಗಿದೆ.ಇದು ಒಂದೆರಡು ದಿನಗಳಲ್ಲಿ ಅಧಿಕೃತಗೊಳ್ಳಲಿದ್ದು, ಪಕ್ಷದ ಅಧಿಕೃತ‌ ಕಾರ್ಯಕ್ರಮಕ್ಕೆ ಪ್ರಿಯಾಂಕಾ ಗಾಂಧಿ ಅವರನ್ನು ಆಹ್ವಾನಿಸುವ ಮೂಲಕ ತಮ್ಮದು ಪಕ್ಷಪೂಜೆ ಎಂಬ ಪಕ್ಷದೊಳಗಿನ ತಮ್ಮ ಪ್ರತಿಸ್ಪರ್ಧಿಗಳಿಗೆ ಸಂದೇಶ ನೀಡಲು ಮುಂದಾಗಿದ್ದಾರೆ ಎಂದು ಎನ್ನಲಾಗುತ್ತಿದೆ. ಪ್ರಿಯಾಂಕಾ ಗಾಂಧಿ ಬರಲು ಒಪ್ಪಿದರೆ ಈ ಕಾರಕ್ರಮವನ್ನು ಭರ್ಜರಿಯಾಗಿಯೇ ಸಂಘಟಿಸಲು ಶಿವಕುಮಾರ ತಯಾರಿ ನಡೆಸಿದ್ದಾರೆ ಎನ್ನಲಾಗಿದೆ.

ಪ್ರಮುಖ ಸುದ್ದಿ :-   ಹೊನ್ನಾವರದ ಪ್ರಕೃತಿಯ ‘ಮಾಯಾಲೋಕ’ಕ್ಕೆ ಆನಂದ ಮಹೀಂದ್ರಾ ಫಿದಾ ! ಕೇರಳದ ಹಿನ್ನೀರಿನಷ್ಟೇ ಸುಂದರ ಎಂದ ಉದ್ಯಮಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement