ಕಾಶ್ಮೀರಿ ಪಂಡಿತ ರಾಹುಲ್ ಭಟ್‌ ಕೊಂದಿದ್ದ ಭಯೋತ್ಪಾದಕ ಸೇರಿ ಮೂವರು ಉಗ್ರರ ಹೊಡೆದುರಳಿಸಿದ ಭದ್ರತಾ ಪಡೆಗಳು

ಶ್ರೀನಗರ: ಕಾಶ್ಮೀರಿ ಪಂಡಿತ ರಾಹುಲ್ ಭಟ್, ಅಮರೀನ್ ಭಟ್ ಸೇರಿದಂತೆ ಹಲವು ನಾಗರಿಕ ಹತ್ಯೆಗಳಲ್ಲಿ ಭಾಗಿಯಾಗಿದ್ದ ಭಯೋತ್ಪಾದಕ ಲತೀಫ್ ರಾಥರ್‌ನನ್ನು ಭದ್ರತಾ ಪಡೆಗಳು ಎನ್‌ಕೌಂಟರ್ ಮಾಡಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಬದ್ಗಾಮ್ ಜಿಲ್ಲೆಯಲ್ಲಿ ಇಂದು, ಬುಧವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಲತೀಫ್ ರಾಥರ್ ಸೇರಿದಂತೆ ಮೂವರು ಲಷ್ಕರ್-ಎ-ತೊಯ್ಬಾ(ಎಲ್‌ಇಟಿ) ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಡಗಿಕೊಂಡದ್ದ ಎಲ್ಲಾ ಮೂವರು ಎಲ್‌ಇಟಿ ಭಯೋತ್ಪಾದಕರನ್ನು ಎನ್‌ಕೌಂಟರ್ ಮಾಡಲಾಗಿದೆ. ಸ್ಥಳದಿಂದ ಮೃತದೇಹಗಳನ್ನು ಪಡೆಯಲಾಗಿದ್ದು, ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಂದಿನ ಎನ್‌ಕೌಂಟರ್ ದೊಡ್ಡ ಯಶಸ್ಸನ್ನು ತಂದಿದೆ ಎಂದು ಕಾಶ್ಮೀರದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ವಿಜಯ್ ಕುಮಾರ್ ಹೇಳಿದ್ದಾರೆ.
ಮೇ ತಿಂಗಳಲ್ಲಿ, ಭಯೋತ್ಪಾದಕರು ಬದ್ಗಾಮ್‌ನಲ್ಲಿ ಕಂದಾಯ ಇಲಾಖೆಯ ಉದ್ಯೋಗಿಯಾಗಿದ್ದ ಕಾಶ್ಮೀರಿ ಪಂಡಿತ ರಾಹುಲ್ ಭಟ್ ಮೇಲೆ ಗುಂಡು ಹಾರಿಸಿ ಕೊಂದಿದ್ದರು. ಘಟನೆಯ ಬಳಿಕ ಕಾಶ್ಮೀರಿ ಪಂಡಿತ ಸಮುದಾಯದವರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು. ಬಳಿಕ ಕಾಶ್ಮೀರಿ ಪಂಡಿತ ರಾಹುಲ್ ಭಟ್ ಮೇಲಿನ ದಾಳಿಯಲ್ಲಿ ಭಾಗಿಯಾಗಿದ್ದ ಇಬ್ಬರು ಭಯೋತ್ಪಾದಕರನ್ನು ಎನ್‌ಕೌಂಟರ್‌ನಲ್ಲಿ ಕೊಲ್ಲಲಾಯಿತು.

ಇಂದಿನ ಪ್ರಮುಖ ಸುದ್ದಿ :-   ಮನ್ ಕಿ ಬಾತ್: ಜರ್ಮನ್‌ ಯುವತಿಯ ಭಾರತೀಯ ಸಂಗೀತ-ಸಂಸ್ಕೃತಿ ಪ್ರೀತಿಗೆ ಪ್ರಧಾನಿ ಮೋದಿ ಶ್ಲಾಘನೆ ; ಆಕೆ ಹಾಡಿದ ಕನ್ನಡ ಗೀತೆ-ಸಂಸ್ಕೃತ ಶ್ಲೋಕದ ಉಲ್ಲೇಖ | ವೀಕ್ಷಿಸಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement