ಪ್ರವಾದಿ ಕುರಿತ ಹೇಳಿಕೆ: ನೂಪುರ್ ಶರ್ಮಾ ವಿರುದ್ಧದ ಎಫ್‌ಐಆರ್‌ಗಳನ್ನು ದೆಹಲಿಗೆ ವರ್ಗಾಯಿಸಿದ ಸುಪ್ರೀಂಕೋರ್ಟ್‌, ಬಂಧನದಿಂದ ರಕ್ಷಣೆ ಮುಂದುವರಿಕೆ

ನವದೆಹಲಿ: ಪ್ರವಾದಿ ಮೊಹಮ್ಮದ್ ಕುರಿತು ಹೇಳಿಕೆ ನೀಡಿದ್ದಕ್ಕಾಗಿ ನೂಪುರ್ ಶರ್ಮಾ ವಿರುದ್ಧ ದೇಶಾದ್ಯಂತ ದಾಖಲಾಗಿರುವ ಎಲ್ಲಾ 10 ಪ್ರಕರಣಗಳನ್ನು ದೆಹಲಿಗೆ ವರ್ಗಾಯಿಸಲಾಗುವುದು ಮತ್ತು ದೆಹಲಿ ಪೊಲೀಸರು ಪ್ರಕರಣದ ತನಿಖೆ ನಡೆಸಲಿದ್ದಾರೆ ಎಂದು ಸುಪ್ರೀಂ ಕೋರ್ಟ್ ಬುಧವಾರ ಆದೇಶ ನೀಡಿದೆ.
ಇದು ಅಮಾನತುಗೊಂಡಿರುವ ಬಿಜೆಪಿ ನಾಯಕರಿಗೆ ಭಾರಿ ನಿರಾಳತೆ ತಂದಿದೆ . ನೂಪುರ್ ಶರ್ಮಾ ಅವರು ಪ್ರವಾದಿ ಮೊಹಮ್ಮದ್ ಬಗ್ಗೆ ಮಾಡಿದ ಕಾಮೆಂಟ್‌ಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರೀ ವಿವಾದಕ್ಕೆ ಕಾರಣವಾಯಿತು.
ಪ್ರವಾದಿ ಕುರಿತು ನೂಪುರ ಶರ್ಮಾ ಅವರ ಹೇಳಿಕೆಗಳ ಮೇಲೆ ಹೆಚ್ಚಿನ ಎಫ್‌ಐಆರ್‌ಗಳನ್ನು ದಾಖಲಿಸಿದರೆ, ಅವುಗಳು ಸ್ವಯಂ ಆಗಿ ದೆಹಲಿ ಪೊಲೀಸರಿಗೆ ವರ್ಗಾವಣೆಯಾಗಲಿದೆ ಎಂದು ನ್ಯಾಯಾಲಯ ಹೇಳಿದೆ.
ಏತನ್ಮಧ್ಯೆ, ಜುಲೈ 19 ರಂದು ನೂಪುರ್ ಶರ್ಮಾಗೆ ನೀಡಲಾದ ಬಂಧನದಿಂದ ಮಧ್ಯಂತರ ರಕ್ಷಣೆ ಮುಂದುವರಿಯುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಶರ್ಮಾ ಅವರ ವಿರುದ್ಧ ಹಲವಾರು ರಾಜ್ಯಗಳಲ್ಲಿ ಅನೇಕ ಎಫ್‌ಐಆರ್‌ಗಳನ್ನು ಒಂದೇ ಕಡೆ ವರ್ಗಾಯಿಸುವಂತೆ ಕೋರಿ ಶರ್ಮಾ ಮಾಡಿದ ಮನವಿಯನ್ನು ನ್ಯಾಯಾಲಯವು ವಿಚಾರಣೆ ನಡೆಸುತ್ತಿದೆ, ಇದನ್ನು ಬಂಗಾಳ ಸರ್ಕಾರ ವಿರೋಧಿಸುತ್ತಿದೆ.
ಸುದ್ದಿ ವಾಹಿನಿಯೊಂದರಲ್ಲಿ ಪ್ರವಾದಿ ಮೊಹಮ್ಮದ್ ವಿರುದ್ಧ ಮಾಡಿದ ಟೀಕೆಗಳಿಗಾಗಿ ಶರ್ಮಾ ಅವರನ್ನು ಸುಪ್ರೀಂ ಕೋರ್ಟ್ ಈ ಹಿಂದೆ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು.
ನೂಪುರ್‌ ಶರ್ಮಾ ಹೇಳಿಕೆ ಜಾಗತಿಕವಾಗಿ ವಿವಾದಕ್ಕೆ ಕಾರಣವಾಯಿತು. ಭಾರತದಲ್ಲಿ ಮತ್ತು ಹಲವಾರು ಇತರ ದೇಶಗಳಲ್ಲಿ ಬೃಹತ್ ಪ್ರತಿಭಟನೆಗಳು ನಡೆಯಿತು, ಪ್ರತಿಭಟನೆಗಳು ಹಲವೆಡೆ ಹಿಂಸಾಚಾರಕ್ಕೂ ಕಾರಣವಾಯಿತು.
ಬಿಜೆಪಿಯು ವಿವಾದದಿಂದ ದೂರ ಸರಿಯಿತು ಮತ್ತು ನೂಪುರ್ ಶರ್ಮಾ ಅವರನ್ನು ಪಕ್ಷದಿಂದ ಮತ್ತು ಅದರ ವಕ್ತಾರ ಹುದ್ದೆಯಿಂದ ಅಮಾನತುಗೊಳಿಸಿತು.

ಪ್ರಮುಖ ಸುದ್ದಿ :-   ಸುಪ್ರೀಂ ಕೋರ್ಟ್ ತರಾಟೆ ನಂತರ ದೊಡ್ಡದಾಗಿ ಕ್ಷಮೆಯಾಚನೆ ಪ್ರಕಟಿಸಿದ ಪತಂಜಲಿ ಸಂಸ್ಥೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement