ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣ : ತಲೆಮರೆಸಿಕೊಂಡಿರುವ ಆರೋಪಿಗಳ ಆಸ್ತಿ ಸೀಜ್‌ ಮಾಡಲು ಕ್ರಮ ಕೈಗೊಳ್ತೇವೆ

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಮುಖಂಡ ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಆಸ್ತಿ ಸೀಜ್ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಡಿಜಿಪಿ ಅಲೋಕಕುಮಾರ್ ತಿಳಿಸಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಾರಿಯಾದ ಆರೋಪಿಗಳನ್ನು ಪತ್ತೆಹಚ್ಚಲು ಕೋರ್ಟ್‌ ಮುಖಾಂತರ ವಾರೆಂಟ್‌ ಪಡೆದು ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕಲು ಕ್ರಮ ಕೈಗೊಳ್ಳುತ್ತೇವೆ. ಈ ಪ್ರಕರಣದಲ್ಲಿ ಪಿಎಫ್‌ಐ ಜೊತೆ ಶಂಕಿತರ ನಂಟು ಕಂಡು ಬಂದಿದೆ. ತನಿಖೆ ನಂತರ ಯಾರಿಗೆಲ್ಲಾ ಪಿಎಫ್‌ಐ ಜತೆ ನಂಟು ಇದೆ ಎನ್ನುವುದನ್ನು ಹೇಳಬಹುದು. ಬಾಯಿ ಮಾತಿನಲ್ಲಿ ಅದನ್ನು ಹೇಳಲು ಆಗುವುದಿಲ್ಲ ಎಂದರು.

ಪ್ರಕರಣದ ಸಂಬಂಧ ಈಗಾಗಲೇ 7 ಜನರನ್ನು ಬಂಧಿಸಲಾಗಿದೆ. ಇನ್ನುಳಿದ ಮೂವರು ಪ್ರಮುಖ ಆರೋಪಿಗಳನ್ನು ಪತ್ತೆ ಹಚ್ಚಲು ಬೇರೆ ಬೇರೆ ಜಿಲ್ಲೆಯ ಪೊಲೀಸ್‌ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದೇವೆ. ಪರಾರಿಯಾಗಿರುವ ಮೂವರು ಪ್ರಮುಖ ಆರೋಪಿಗಳ ಭಾವಚಿತ್ರ, ಮನೆ ವಿಳಾಸ, ಮನೆಯವರ ಬಗ್ಗೆ ತಿಳಿದಿದೆ. ಆದರೆ ಆರೋಪಿಗಳನ್ನು ಕೆಲವರು ಸೇರಿ ಬಚ್ಚಿಟ್ಟಿರುವುದರಿಂದ ಅವರನ್ನು ಯಾವ ರೀತಿ ಪತ್ತೆ ಹಚ್ಚಬೇಕು ಎಂದು ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ ಎಂದರು.
ಈ ಪ್ರಕರಣಕ್ಕೆ ಸಂಬಂಧಿಸಿ ಪ್ರಚೋದನೆ ನೀಡಿದವರು, ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದವರ ಮೇಲೂ ಕಾನೂನು ಕ್ರಮ ನಡೆಯುತ್ತದೆ. ಅವರೆಲ್ಲರ ಮೇಲೆ ರಾಜ್ಯ ಪೊಲೀಸರು ಹಾಗೂ ಎನ್‌ಐಎ ಮೂಲಕ ಕ್ರಮ ಜರುಗಿಸಲಾಗುತ್ತದೆ ಎಂದು ಹೇಳಿದರು.
.

ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement