ಬಿಹಾರ ಸಿಎಂ ಆಗಿ ನಿತೀಶಕುಮಾರ್, ಡಿಸಿಎಂ ಆಗಿ ತೇಜಸ್ವಿ ಯಾದವ್ ಪ್ರಮಾಣ ವಚನ ಸ್ವೀಕಾರ

ಪಾಟ್ನಾ: ಬದಲಾದ ಸನ್ನಿವೇಶ ಹಾಗೂ ಹೊಸ ಮೈತ್ರಿ ಸರ್ಕಾರದಲ್ಲಿ ಜನತಾ ದಳ (ಸಂಯುಕ್ತ) ಮುಖ್ಯಸ್ಥ ನಿತೀಶ್ ಕುಮಾರ್ ಅವರು ಬಿಹಾರದ ಮುಖ್ಯಮಂತ್ರಿಯಾಗಿ ಹಾಗೂ ರಾಷ್ಟ್ರೀಯ ಜನತಾ ದಳದ ನಾಯಕ ತೇಜಸ್ವಿ ಯಾದವ್ ಉಪ ಮುಖ್ಯಮಂತ್ರಿಯಾಗಿ ಬುಧವಾರ, ಆಗಸ್ಟ್ 10 ರಂದು ಪ್ರಮಾಣ ವಚನ ಸ್ವೀಕರಿಸಿದರು.
ಜೆಡಿಯು ಮುಖ್ಯಸ್ಥ ನಿತೀಶ್‌ ಎಂಟನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣ ವಚನ ಸ್ವೀಕಾರದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ನಿತೀಶಕುಮಾರ್, ಬಿಜೆಪಿಯವರು ಏನು ಬೇಕಾದರೂ ಹೇಳಬಹುದು ಎಂದ ಅವರು ಹೊಸ ಸರ್ಕಾರವು ಪೂರ್ಣಾವಧಿಗೆ ಉಳಿಯುವುದಿಲ್ಲ ಎಂಬ ಬಿಜೆಪಿಯ ಹೇಳಿಕೆಯನ್ನು ತಳ್ಳಿಹಾಕಿದರು.
ಎನ್‌ಡಿಎ ಸಮ್ಮಿಶ್ರ ಸರ್ಕಾರದಿಂದ ಜೆಡಿಯು ಹೊರಬಿದ್ದ ಒಂದು ದಿನದ ನಂತರ ನಿತೀಶಕುಮಾರ್ ಮತ್ತೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು ಮತ್ತು ಜೆಡೊಯು ಹಾಗೂ ಆರ್‌ಜೆಡಿ ಪ್ರಧಾನ ಪಾಲುದಾರನಾಗಿ ಏಳು ಪಕ್ಷಗಳ ‘ಮಹಾಘಟಬಂಧನ್’ ಘೋಷಿಸಿತು.

ಏತನ್ಮಧ್ಯೆ, ಬುಧವಾರ ಬಿಜೆಪಿ ನಾಯಕ ಸುಶೀಲ್ ಮೋದಿ ಅವರು ಪತ್ರಿಕಾಗೋಷ್ಠಿ ನಡೆಸಿ, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು “ತುಂಬಾ ಮಹತ್ವಾಕಾಂಕ್ಷೆಯುಳ್ಳವರು ಮತ್ತು “ಆರ್‌ಜೆಡಿಗೂ ಕೈಕೊಡುತ್ತಾರೆ ಎಂದು ವಾಗ್ದಾಳಿ ನಡೆಸಿದರು.
ಅವರನ್ನು ಉಪರಾಷ್ಟ್ರಪತಿಯನ್ನಾಗಿ ಘೋಷಿಸಬೇಕೆಂದು ಅವರ ಪಕ್ಷದವರು ಬಯಸಿದ್ದರು ಮತ್ತು ಪ್ರಸ್ತಾವನೆಯೊಂದಿಗೆ ಬಿಜೆಪಿಯನ್ನು ಸಂಪರ್ಕಿಸಿದರು ಎಂದು ಮೋದಿ ಹೇಳಿದರು.

ಪ್ರಮುಖ ಸುದ್ದಿ :-   ಕೋಟಕ್‌ ಮಹೀಂದ್ರಾ ಬ್ಯಾಂಕಿಗೆ ಆರ್‌ಬಿಐ ನಿರ್ಬಂಧ : ಹೊಸ ಗ್ರಾಹಕರ ಆನ್‌ಲೈನ್‌ ಸೇರ್ಪಡೆ, ಹೊಸ ಕ್ರೆಡಿಟ್‌ ಕಾರ್ಡ್‌ ವಿತರಣೆಗೆ ಬ್ರೇಕ್‌

ನಿತೀಶ್ ಕುಮಾರ್ ಅವರು ಮಂಗಳವಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜೊತೆಗಿನ ಮೈತ್ರಿ ಕೊನೆಗೊಂಡಿದೆ.
ಪಾಟ್ನಾದಲ್ಲಿ ಪಕ್ಷದ ಮುಖಂಡರೊಂದಿಗೆ ನಡೆಸಿದ ಸಭೆಯಲ್ಲಿ ನಿತೀಶಕುಮಾರ್, ಜೆಡಿಯು ಒಡೆಯಲು ಬಿಜೆಪಿ ಪಿತೂರಿ ನಡೆಸುತ್ತಿದೆ ಎಂದು ಆರೋಪಿಸಿದರು ಮೂಲಗಳು ತಿಳಿಸಿವೆ. ಅವರು ತಮ್ಮ ರಾಜೀನಾಮೆಯನ್ನು ರಾಜ್ಯಪಾಲ ಫಾಗು ಚೌಹಾಣ್‌ಗೆ ಸಲ್ಲಿಸಿದ ನಂತರ, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಜೊತೆ ಸೇರಿ ನೂತನ ಸರ್ಕಾರಕ್ಕೆ ಹಕ್ಕು ಮಂಡಿಸಿದ್ದರು.
ನಂತರ ತೇಜಸ್ವಿ ಯಾದವ್ ಅವರೊಂದಿಗೆ ಪತ್ರಿಕಾಗೋಷ್ಠಿಯಲ್ಲಿ, ಮಹಾಘಟಬಂಧನ್‌ನಲ್ಲಿ 164 ಶಾಸಕರನ್ನು ಹೊಂದಿರುವ ಏಳು ಪಕ್ಷಗಳಿವೆ ಎಂದು ಹೇಳಿದರು.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement