ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಸಹಾಯಕ ಆಯುಕ್ತರಿಂದ ಧ್ವಜಾರೋಹಣ; ಸಚಿವ ಅಶೋಕ

posted in: ರಾಜ್ಯ | 0

ಬೆಂಗಳೂರು: ದೇಶದ ಸ್ವಾತಂತ್ರ್ಯ ಅಮೃತಮಹೋತ್ಸವಕ್ಕೆ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ ನಡೆಯಲಿದೆ, ಬೇರೆ ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಕಂದಾಯ ಸಚಿವ ಅಶೋಕ್ ಪ್ರಕಟಿಸಿದ್ದಾರೆ.
ಚಾಮರಾಜಪೇಟೆ ಮೈದಾನದ ಸಂಬಂಧ ಕಂದಾಯ ಸಚಿವ ಅಶೋಕ್​ ನೇತೃತ್ವದ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಯಾವ ಸಂಘ-ಸಂಸ್ಥೆಗಳಿಗೂ ಧ್ವಜಾರೋಹಣಕ್ಕೆ ಅವಕಾಶವಿಲ್ಲ. ಸರ್ಕಾರದಿಂದಲೇ ಧ್ವಜಾರೋಹಣ ಮಾಡಲು ನಿರ್ಧರಿಸಲಾಗಿದೆ ಎಂದು ಕಂದಾಯ ಸಚಿವ ಅಶೋಕ್ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನ ಉತ್ತರ ತಾಲೂಕಿನ ಸಹಾಯಕ ಆಯುಕ್ತರು ರಾಷ್ಟ್ರ ಧ್ವಜಾರೋಹಣ ಮಾಡಲಿದ್ದಾರೆ. ರಾಷ್ಟ್ರಧ್ವಜದ ನೀತಿ ನಿಯಮಗಳಡಿ ಎಲ್ಲರೂ ಭಾಗವಹಿಸಬಹುದು. ವೇದಿಕೆ ಮೇಲೆ ಸಂಘಟನೆಯವರಿಗೆ ಅವಕಾಶವಿಲ್ಲ ಎಂದು ತಿಳಿಸಿದರು.

advertisement

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಇದೀಗ ಗದಗದಲ್ಲಿ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಈಗ ಧ್ವಜಾರೋಹಣ ಮಾಡುತ್ತೇವೆ. ಮುಂದೆ ಧಾರ್ಮಿಕ ಚಟುವಟಿಕೆಗಳಿಗೆ ಅವಕಾಶ ಕೊಡಬೇಕೇ ಅಥವಾ ಬೇಡವೇ ಎಂಬುದರ ಕುರಿತು ಮುಖ್ಯಮಂತ್ರಿಗಳ ಜೊತೆ ಮಾಡಲಾಗುವುದು. ವರ್ಷಕ್ಕೆ ಎರಡು ಬಾರಿ ಪ್ರಾರ್ಥನೆ ಮಾಡಲು ಅವಕಾಶ ನಿಡುವುದರ ಬಗ್ಗೆಯೂ ಚಿಂತಿಸಲಾಗುವುದು ಎಂದು ಸಚಿವ ಅಶೋಕ್ ಹೇಳಿದರು.

ಚಾಮರಾಜಪೇಟೆ ಈದ್ಗಾ ಮೈದಾನ ಕಂದಾಯ ಇಲಾಖೆಗೆ ಸೇರಿದ ಜಾಗವಾಗಿದೆ. ಹೀಗಾಗಿ ನಮ್ಮ ಇಲಾಖೆಯ ಸುಪರ್ದಿಯಲ್ಲೇ ಆಗಸ್ಟ್​ 15ರಂದು ಸಹಾಯಕ ಆಯುಕ್ತರಿಂದಲೇ ಧ್ವಜಾರೋಹಣ ನಡೆಯಲಿದೆ. ಶಿಷ್ಟಾಚಾರದ ಪ್ರಕಾರ ಸ್ಥಳೀಯ ಶಾಸಕ, ಸಂಸದರು ಬರಬಹುದು. ಅಲ್ಲಿ ಭಾರತ ಮಾತಾಕೀ ಜೈ, ವಂದೇ ಮಾತರಂ ಘೋಷಣೆ ಮಾತ್ರ ಕೇಳಿಬರುತ್ತದೆ. ಬೇರೆ ಯಾವುದೇ ಘೋಷಣೆಗೆ ಅವಕಾಶವಿಲ್ಲ ಎಂದು ಸಚಿವ ಅಶೋಕ್ ಸ್ಪಷ್ಟಪಡಿಸಿದ್ದಾರೆ.
ಚಾಮರಾಜಪೇಟೆ ಮೈದಾನದಲ್ಲಿ ಸಹಾಯಕ ಆಯುಕ್ತರಿಂದ ಧ್ವಜಾರೋಹಣ; ಸಚಿವ ಅಶೋಕ

ಓದಿರಿ :-   ಪ್ರವಾದಿ ಕುರಿತು ಪ್ರಬಂಧ ಸ್ಪರ್ಧೆ ಆಯೋಜನೆ: ಮುಖ್ಯಾಧ್ಯಾಪಕ ಅಮಾನತು

 

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

/ 5. ಒಟ್ಟು ವೋಟುಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement