ಸಚಿವರ ಒತ್ತಡದಿಂದ ಕೊಳಕು ಹಾಸಿಗೆ ಮೇಲೆ ಮಲಗಿ ಅಪಮಾನಕ್ಕೊಳಗಾದ ಕುಲಪತಿ ರಾಜೀನಾಮೆ

ಚಂಡೀಗಡ: ಆರೋಗ್ಯ ಸಚಿವ ಚೇತನ್ ಸಿಂಗ್ ಜೌರಮಜ್ರಾ ಅವರ ಸೂಚನೆ ಮೇರೆಗೆ ಆಸ್ಪತ್ರೆಯ ಕೊಳಕು ಹಾಸಿಗೆಯ ಮೇಲೆ ಮಲಗಿ, ಅಪಮಾನಕ್ಕೀಡಾದ ‘ಬಾಬಾ ಫರೀದ್ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ’ದ ಕುಲಪತಿ ಡಾ ರಾಜ್ ಬಹದ್ದೂರ್ ಗುರುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ರಾಜೀನಾಮೆ ಪತ್ರವನ್ನು ಅವರು ಮುಖ್ಯಮಂತ್ರಿಗೆ ಭಗವಂತ ಸಿಂಗ್‌ ಮಾನ್‌ ಅವರಿಗೆ ನೀಡಿದ್ದು, ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಪತ್ರವನ್ನು ಅವರು ರಾಜ್ಯಪಾಲರಿಗೆ ರವಾನಿಸಿದ್ದಾರೆ.
ವಿಶ್ವವಿದ್ಯಾಲಯದ ಪರಿಶೀಲನೆಯ ವೇಳೆ ಕುಲಪತಿ ರಾಜ್‌ ಬಹುದ್ದೂರ್‌ ಅವರನ್ನು ಆರೋಗ್ಯ ಸಚಿವ ಚೇತನ್‌ ಸಿಂಗ್‌ ಅವರು ಕೊಳಕು ಹಾಸಿಗೆ ಮೇಲೆ ಬಲವಂತವಾಗಿ ಮಲಗಿಸಿದ್ದರು. ಈ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ವೈರಲ್‌ ಆಗಿತ್ತು. ಹೀಗಾಗಿ ಕುಲಪತಿ ಮುಜುಗರಕ್ಕೆ ಒಳಗಾಗಿದ್ದರು.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಸದ್ಯ ರಾಜ್‌ ಬಹುದ್ದೂರ್‌ ಅವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ರಾಜ್ಯ ಸರ್ಕಾರವು ಮಾಧ್ಯಮಿಕ ಶಿಕ್ಷಣ ಇಲಾಖೆಯ ನಿರ್ದೇಶಕರನ್ನು ಪ್ರಭಾರಿಯನ್ನಾಗಿ ನಿಯೋಜಿಸಿದೆ ಎಂದು ಅಧಿಕೃತ ಮೂಲಗಳು ಹೇಳಿವೆ.
ಜೌರಮಜ್ರಾ ವಿಶ್ವವಿದ್ಯಾಲಯದ ಅಡಿಯಲ್ಲಿ ಬರುವ ಫರೀದ್‌ಕೋಟ್‌ನ ಗುರು ಗೋಬಿಂದ್ ಸಿಂಗ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯನ್ನು ಸಚಿವ ಚೇತನ್ ಸಿಂಗ್ ಕಳೆದ ತಿಂಗಳು ಪರಿಶೀಲನೆ ನಡೆಸಿದ್ದರು.
ಘಟನೆಯ ನಂತರ, ಡಾ.ಬಹದ್ದೂರ್ ಅವರು ತಮಗಾದ ಅಪಮಾನವನ್ನು ಪಂಜಾಬ್ ಮುಖ್ಯಮಂತ್ರಿಗೆ ತಿಳಿಸಿದ್ದರು. ಕೆಲಸ ಮಾಡಲು ತಮ್ಮಿಂದ ಆಗುತ್ತಿಲ್ಲ ಎಂದಿದ್ದ ಅವರು, ತಮ್ಮನ್ನು ಸೇವೆಯಿಂದ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದರು.
ಕುಲಪತಿ ಡಾ. ಬಹದ್ದೂರ್‌ ಅವರನ್ನು ಸಚಿವರು ನಡೆಸಿಕೊಂಡ ರೀತಿಯ ಬಗ್ಗೆ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿತ್ತು. ಭಾರತೀಯ ವೈದ್ಯಕೀಯ ಸಂಘ ಸೇರಿದಂತೆ ವಿವಿಧ ವೈದ್ಯಕೀಯ ಸಂಘಟನೆಗಳು ಆರೋಗ್ಯ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ಒತ್ತಾಯಿಸಿದ್ದವು.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ಗ್ಯಾಂಬಿಯಾದಲ್ಲಿ 66 ಮಕ್ಕಳ ಸಾವಿನ ನಂತರ ಭಾರತೀಯ ಕೆಮ್ಮಿನ ಸಿರಪ್ ಅನ್ನು ಪರೀಕ್ಷಿಸಲಾಗುತ್ತಿದೆ: ಡಬ್ಲ್ಯುಎಚ್‌ಒ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement