ಕಾಶ್ಮೀರದ ರಾಜೌರಿಯ ಸೇನಾ ನೆಲೆ ಮೇಲೆ ಉಗ್ರರ ಆತ್ಮಾಹುತಿ ದಾಳಿ; ಇಬ್ಬರು ಉಗ್ರರ ಹತ್ಯೆ, ಮೂವರು ಸೈನಿಕರು ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜೌರಿಯಿಂದ 25 ಕಿ.ಮೀ ದೂರದಲ್ಲಿ ನಡೆದ ಇಬ್ಬರು ಉಗ್ರರು ಆರ್ಮಿ ಕಂಪನಿ ಕಾರ್ಯಾಚರಣಾ ನೆಲೆಯ ಮೇಲೆ ಆತ್ಮಾಹುತಿ ದಾಳಿ (Suicide Attack) ನಡೆಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿರುವ ಸೇನಾ ಶಿಬಿರದ ಮೇಲೆ ಆತ್ಮಹತ್ಯಾ ದಾಳಿಗೆ ಯತ್ನಿಸಿದ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಗುರುವಾರ ಹೊಡೆದುರುಳಿಸಿದೆ. ಈ ಕಾರ್ಯಾಚರಣೆ ವೇಳೆ ಮೂವರು ಸೇನಾ ಸಿಬ್ಬಂದಿ ಕೂಡ ಹುತಾತ್ಮರಾಗಿದ್ದಾರೆ.
ಗುಂಡಿನ ಚಕಮಕಿಯಲ್ಲಿ ಐವರು ಯೋಧರೂ ಗಾಯಗೊಂಡಿದ್ದಾರೆ. ಇದೀಗ ಕಾರ್ಯಾಚರಣೆ ಅಂತ್ಯಗೊಂಡಿದೆ ಎಂದು ಭಾರತೀಯ ಸೇನೆ ಖಚಿತಪಡಿಸಿದೆ.

“ರಾಜೌರಿಯ ದರ್ಹಾಲ್ ಪ್ರದೇಶದ ಪರ್ಗಲ್‌ನಲ್ಲಿರುವ ಸೇನಾ ಶಿಬಿರದ ಬೇಲಿಯನ್ನು ಯಾರೋ ದಾಟಲು ಪ್ರಯತ್ನಿಸಿದರು. ದರ್ಹಾಲ್ ಪಿಎಸ್‌ನಿಂದ 6 ಕಿ.ಮೀ ಗುಂಡಿನ ವಿನಿಮಯ ನಡೆಯಿತು. ಇಬ್ಬರು ಭಯೋತ್ಪಾದಕರ ಹತ್ಯೆ ಮಾಡಲಾಗಿದೆ. ರಜೌರಿಯಿಂದ 25 ಕಿ.ಮೀ ದೂರದಲ್ಲಿರುವ ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ಭಯೋತ್ಪಾದಕರು ಆರ್ಮಿ ಕಂಪನಿಯ ಕಾರ್ಯಾಚರಣಾ ನೆಲೆಯ ಮೇಲೆ ಆತ್ಮಾಹುತಿ ದಾಳಿ ನಡೆಸಿದರು. ಇಬ್ಬರೂ ಭಯೋತ್ಪಾದಕರು ಹತರಾಗಿದ್ದಾರೆ ಮತ್ತು ಮೂರು ಸೈನಿಕರು ಹುತಾತ್ಮರಾಗಿದ್ದಾರೆ ಎಂದು ಭಾರತೀಯ ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ. ಭದ್ರತಾ ಅಧಿಕಾರಿಗಳು ಆ ಪ್ರದೇಶವನ್ನು ಸುತ್ತುವರೆದಿದ್ದಾರೆ. ಹೆಚ್ಚುವರಿ ಪೊಲೀಸ್ ತಂಡಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಬುಧವಾರ, ಬುದ್ಗಾಮ್‌ನಲ್ಲಿ ಭದ್ರತಾ ಪಡೆಗಳು ಮೂವರು ಎಲ್‌ಇಟಿ ಭಯೋತ್ಪಾದಕರನ್ನು ಹೊಡೆದುರುಳಿದ್ದವು. ಹತ್ಯೆಗೀಡಾದ ಭಯೋತ್ಪಾದಕರಲ್ಲಿ ಒಬ್ಬರು ನಾಗರಿಕರಾದ ರಾಹುಲ್ ಭಟ್ ಮತ್ತು ಅಮ್ರೀನ್ ಭಟ್ ಅವರ ಹತ್ಯೆಯಲ್ಲಿ ಭಾಗಿಯಾಗಿದ್ದರು.
ಸ್ವಾತಂತ್ರ್ಯ ದಿನಾಚರಣೆಯ ಮುನ್ನವೇ ಈ ದಾಳಿ ನಡೆದಿದ್ದು, ಪೊಲೀಸರು ಮತ್ತು ಭದ್ರತಾ ಪಡೆಗಳು ಈಗಾಗಲೇ ಕಟ್ಟೆಚ್ಚರ ವಹಿಸಿವೆ.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ 2ನೇ ಹಂತದ ಮತದಾನ : ಶ್ರೀಮಂತ ಅಭ್ಯರ್ಥಿ ₹ 622 ಕೋಟಿ ಒಡೆಯ, ಅತ್ಯಂತ ಬಡ ಅಭ್ಯರ್ಥಿ ಬಳಿ ಇರುವುದು ಕೇವಲ...

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement