ನಾಳೆಯಿಂದ ದ್ವಿತೀಯ ಪಿಯು ಪೂರಕ ಪರೀಕ್ಷೆ ಆರಂಭ

ಬೆಂಗಳೂರು: : ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ಆಗಸ್ಟ್ 12ರಿಂದ 25ರ ವರೆಗೆ ನಡೆಯಲಿದ್ದು, ಕಟ್ಟುನಿಟ್ಟಾಗಿ ನಡೆಸಲು ಎಲ್ಲಾ ಕ್ರಮಗಳನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಕೈಗೊಂಡಿದೆ.
ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅವ್ಯವಹಾರಗಳು ನಡೆಯದಂತೆ ಮುಂಜಾಗರೂಕತಾ ಕ್ರಮಗಳ್ಳಲಾಗಿದ್ದು, ಪ್ರತಿ ಕೇಂದ್ರಗಳಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ನೇಮಿಸಲಾಗಿದೆ. ಮೊಬೈಲ್ ಮತ್ತಿತರ ಎಲೆಕ್ಟ್ರಾನಿಕ್ ವಸ್ತುಗಳನ್ನು ಪರೀಕ್ಷಾ ಕೇಂದ್ರದೊಳಗೆ ವಿದ್ಯಾರ್ಥಿಗಳು ಕೊಂಡೊಯ್ಯಲು ಅವಕಾಶವಿಲ್ಲ..

ಪರೀಕ್ಷಾ ಕೇಂದ್ರದ ಸುತ್ತಲಿನ 200ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಈ ವಲಯದ ಒಳಗೆ ಪರೀಕ್ಷಾರ್ಥಿಗಳು ಮತ್ತು ಸಂಬಂಧಪಟ್ಟವರನ್ನು ಹೊರತುಪಡಿಸಿ ಬೇರೆ ಯಾರಿಗೂ ಅವಕಾಶವಿಲ್ಲ.
ಪ್ರಶ್ನೆ ಪತ್ರಿಕೆಯನ್ನು ಪರೀಕ್ಷಾ ಕೇಂದ್ರಕ್ಕೆ ಕೊಂಡೊಯ್ಯುವ ವಾಹನಕ್ಕೆ ಕಡ್ಡಾಯವಾಗಿ ಜಿಪಿಎಸ್ ಅಳವಡಿಸಬೇಕು. ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳಿಗೆ ವಿದ್ಯುತ್ ವ್ಯತ್ಯಯ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಪ್ರಶ್ನೆ ಪತ್ರಿಕೆಯನ್ನು ಪರೀಕ್ಷಾ ಕೇಂದ್ರಕ್ಕೆ ಸಾಗಿಸುವ ವಾಹನದೊಂದಿಗೆ ಸೂಕ್ತ ಪೊಲೀಸ್ ಬಂದೋಬಸ್ತ್‌ ಕೈಗೊಳ್ಳುವಂತೆ ಸೂಚಿಸಲಾಗಿದೆ.

ಪ್ರಮುಖ ಸುದ್ದಿ :-   ಬೇಡ್ತಿ–ವರದಾ ನದಿ ಜೋಡಣೆ ಯೋಜನೆ ಜವಾಬ್ದಾರಿ ರಾಜ್ಯ ಸರ್ಕಾರದ್ದು ; ಡಿಪಿಆರ್‌ ರೂಪಿಸೋದು ಅಂದ್ರೆ ಯೋಜನೆ ಅಂತಿಮ ಎಂದಲ್ಲ : ಕೇಂದ್ರ ಸಚಿವ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement