ರಾಷ್ಟ್ರಧ್ವಜಕ್ಕಿಂತಲೂ ಎತ್ತರದಲ್ಲಿ ಹಾರಾಡಿದ ಎಬಿವಿಪಿ ಧ್ವಜ ; ಶಿಕ್ಷಣ ಸಚಿವರ ವಿರುದ್ಧ ದೂರು ದಾಖಲು

ತುಮಕೂರು: ರಾಷ್ಟ್ರಧ್ವಜಕ್ಕಿಂತಲೂ ಎತ್ತರದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಕೇಸರಿ ಧ್ವಜ ಹಾರಾಡಿದ ವಿಚಾರವಾಗಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ ಅವರ ವಿರುದ್ಧ ದೂರು ದಾಖಲಾಗಿದೆ.
ಈ ಸಂಬಂಧ ತುಮಕೂರು ಜಿಲ್ಲಾ ಪೊಲೀಸರಿಗೆ ದೂರು ನೀಡಲಾಗಿದ್ದು, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ.ವಿ ಹರಿಪ್ರಸಾದ ಅವರು ಸಚಿವ ನಾಗೇಶ್ ವಿರುದ್ಧ ತಿಪಟೂರು ಡಿವೈಎಸ್​ಪಿಯವರಿಗೆ ದೂರು ನೀಡಿದ್ದಾರೆ.

ಆಗಸ್ಟ್​ 10ರಂದು ತಿಪಟೂರು ನಗರದಲ್ಲಿ ಮೆರವಣಿಗೆ ಮೂಲಕ ರಾಷ್ಟ್ರಧ್ವಜದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಕೊಳ್ಳಲಾಗಿತ್ತು. ಆದರೆ ಈ ವೇಳೆ ತ್ರಿವರ್ಣ ಧ್ವಜಕ್ಕಿಂತಲೂ ಮೇಲೆ ಎಬಿವಿಪಿಯ ಧ್ವಜವನ್ನು ಹಾರಿಸಲಾಗಿತ್ತು ಎಂದು ಅವರು ದೂರಿನಲ್ಲಿ ಆರೋಪಿಸಿದ್ದಾರೆ. ಶಾಲಾ ಸಿಬ್ಬಂದಿ ವರ್ಗ ಹಾಗೂ ಮಕ್ಕಳನ್ನು ಬಳಸಿಕೊಂಡ ತ್ರಿವರ್ಣ ಧ್ವಜಕ್ಕಿಂತ ಮೇಲೆ ಎಬಿವಿಪಿ ಹಾರಿಸಿ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದಾರೆ. ಈ ಬಗ್ಗೆ ಕೂಡಲೇ ಸೂಕ್ತ ಕ್ರಮವನ್ನು ಕೈಗೊಳ್ಳುವಂತೆ ಅವರು ದೂರಿನಲ್ಲಿ ತಿಳಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement