ಪ್ರವೀಣ ನೆಟ್ಟಾರು​ ​ಹತ್ಯೆ ಪ್ರಕರಣ: ಮೂವರು ಪ್ರಮುಖ ಆರೋಪಿಗಳ ಬಂಧನ…?

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದಲ್ಲಿ ತಲೆಮರೆಸಿಕೊಂಡಿದ್ದ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಪೊಲೀಸರು ಕೇರಳದಲ್ಲಿ ಆರೋಪಿಗಳನ್ನು ಬಂಧಿಸಿರುವ ಬಗ್ಗೆ ಮಾಹಿತಿ ಇದ್ದು, ಗೌಪ್ಯ ಸ್ಥಳದಲ್ಲಿರಿಸಿ ಮೂವರು ಆರೋಪಿಗಳನ್ನು ವಿಚಾರಣೆ ನಡೆಸುತ್ತಿದ್ದಾರೆ. ಪ್ರವೀಣ್ ಹತ್ಯೆಗೈದ ಪ್ರಮುಖ ಆರೋಪಿಗಳ ಬಂಧನದ ಬಗ್ಗೆ ಇಂದು ಮಧ್ಯಾಹ್ನ 12:30ಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.

ಬೆಳ್ಳಾರೆ ಆಸುಪಾಸಿನವರೇ ಈ ಕೃತ್ಯದಲ್ಲಿ ಭಾಗಿಯಾದವರು ಎಂದು ತಿಳಿದುಬಂದಿದೆ. ಹಂತಕರು ವ್ಯವಸ್ಥಿತ ತಯಾರಿ ನಡೆಸಿ ಸಂಚು ರೂಪಿಸಿ ಪ್ರವೀಣ್​​ ಹತ್ಯೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಹತ್ಯೆಗೆ ಬೈಕ್ ನೀಡಿದ್ದ ಆರೋಪಿ ಸುಳ್ಯದ ಕಬೀರ್​ ಎಂಬಾತನನ್ನು ಆಗಸ್ಟ್​ 9ರಂದು ಬಂಧಿಸಲಾಗಿದ್ದು, ತನ್ನ‌ ಪರಿಚಯಸ್ಥನ ಬೈಕ್ ಪಡೆದಿದ್ದ ಆತ​, ಅದನ್ನು ಹಂತಕರಿಗೆ ನೀಡಿದ್ದ ಎಂಬುದು ತನಿಖೆಯಲ್ಲಿ ಗೊತ್ತಾಗಿದೆ. ಕರಣ ಪ್ರಮುಖ ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದು, ಈ ಕುರಿತ ಮಧ್ಯಾಹ್ನ ದಕ್ಷಿಣ ಕನ್ನಡ ಎಸ್​ಪಿ ನಡೆಸಲಿರುವ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟತೆ ಸಿಗಬಹುದಾಗಿದೆ.

ಪ್ರಮುಖ ಸುದ್ದಿ :-   ಮಹಿಳೆ ಅಪಹರಣ ಪ್ರಕರಣ ; ಎಚ್‌.ಡಿ. ರೇವಣ್ಣ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿ ವಜಾ : ಬಂಧನದ ಭೀತಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement