‘ಅಸಾಧಾರಣ’ ಗಾಯಕ, ಕನ್ನಡದ ಮನೆ ಮಾತಾಗಿದ್ದರು : ಶಿವಮೊಗ್ಗ ಸುಬ್ಬಣ್ಣ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ಬೆಂಗಳೂರು: ಕನ್ನಡ ಸಿನೆಮಾ ಹಾಡಿಗೆ ಹಿನ್ನೆಲೆ ಗಾಯನಕ್ಕಾಗಿ ರಾಷ್ಟ್ರ ಪ್ರಶಸ್ತಿ ಪಡೆದ ಸುಗಮ ಸಂಗೀತದ ಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ಸುಬ್ಬಣ್ಣ ಕನ್ನಡ ಹಾಡುಗಳ ಮೂಲಕ ಕನ್ನಡದ ಜನರ ಅವರು ಮನೆಮಾತಾಗಿದ್ದರು ಎಂದು ಉಲ್ಲೇಖಿಸಿದ್ದಾರೆ.
ಟ್ವೀಟ್‌ ಮೂಲಕ ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ, ಸುಬಣ್ಣ ಅವರ ಅಸಾಧಾರಣ ಪ್ರತಿಭೆ ಎಂದು ಶ್ಲಾಘಿಸಿದ್ದಾರೆ. ಅವರ ನಿಧನದಿಂದ ನನಗೆ ನೋವಾಗಿದೆ ಎಂದು ಹೇಳಿದ್ದಾರೆ. ಕನ್ನಡ ಕವಿ ರತ್ನಗಳ ಕಾವ್ಯಗಳನ್ನು ಇಂದಿನ ಪೀಳಿಗೆಯೊಂದಿಗೆ ಜೋಡಿಸುವ ಅವರ ಪ್ರಯತ್ನಗಳು ಶ್ಲಾಘನೀಯ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ” ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.

83 ವರ್ಷದ ಶಿವಮೊಗ್ಗ ಸುಬ್ಬಣ್ಣ ಗುರುವಾರ ರಾತ್ರಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರ. ಎದೆ ನೋವು ಕಾಣಿಸಿಕೊಂಡ ನಂತರ ಅವರನ್ನು ನಗರದ ಜಯದೇವ ಆಸ್ಪತ್ರೆಗೆ ದಾಖಲಿಸಲಾಯಿತು, ಅಲ್ಲಿ ಅವರು ನಿಧನರಾದರು.
ಸುಬ್ಬಣ್ಣ ಅವರು ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಅವರು ಸುಗಮ ಸಂಗೀತ ಕ್ಷೇತ್ರದಲ್ಲಿ ಅಪಾರ ಹೆಸರು ಗಳಿಸಿದ್ದರು. ಅವರು ಆಕಾಶವಾಣಿ ಮತ್ತು ದೂರದರ್ಶನದಲ್ಲಿ ಗಾಯಕರಾಗಿದ್ದರು ಮತ್ತು ವಕೀಲರಾಗಿ ಕೆಲಸ ಮಾಡಿದ್ದರು.

ಪ್ರಮುಖ ಸುದ್ದಿ :-   ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಕಮಿಷನ್‌ ಜಾಹೀರಾತು: ಸಿಎಂ ಸಿದ್ದರಾಮಯ್ಯ, ಡಿಸಿಎಂಗೆ ಡಿಕೆಶಿಗೆ ಸಮನ್ಸ್‌ ಮರು ಜಾರಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement