ಖ್ಯಾತ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ ನಿಧನ

posted in: ರಾಜ್ಯ | 0

ಬೆಂಗಳೂರು: ಕನ್ನಡ ಸಿನೆಮಾಕ್ಕೆ ಮೊದಲ ರಾಷ್ಟ್ರಪ್ರಶಸ್ತಿ ತಂದುಕೊಟ್ಟ ಖ್ಯಾತ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ (83) ಗುರುವಾರ ರಾತ್ರಿ ನಿಧನರಾಗಿದ್ದಾರೆ.
ಅವರನ್ನು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾಗಿದ್ದಾರೆ ಎಂದು ಹೇಳಲಾಗಿದೆ. ಮಗಳು ‘ದಿ ಹಿಂದೂ’ ದಿನ ಪತ್ರಿಕೆಯ ಸ್ಥಾನಿಕ ಸಂಪಾದಕಿ ಭಾಗೇಶ್ರಿ, ಮಗ ಶ್ರೀರಂಗ, ಸೊಸೆ ಖ್ಯಾತ  ಸುಗಮ ಸಂಗೀತ ಗಾಯಕಿ ಅರ್ಚನಾ ಉಡುಪ ಮತ್ತು ಅಪಾರ ಅಭಿಮಾನಿಗಳನ್ನು  ಅಗಲಿದ್ದಾರೆ.
ಕಾಡು ಕುದುರೆ ಓಡಿ ಬಂದಿತ್ತಾ ಎಂಬ ಹಾಡಿನ ಮೂಲಕ ನಾಡಿನ ಮನೆಮಾತಾಗಿದ್ದ ಶಿವಮೊಗ್ಗ ಸುಬ್ಬಣ್ಣ ಆ ಹಾಡಿಗೆ ರಾಷ್ಟ್ರಪ್ರಶಸ್ತಿಯನ್ನೂ ಪಡೆದಿದ್ದರು. ಅದು ಹಾಡಿಗೆ ಕನ್ನಡಕ್ಕೆ ಸಿಕ್ಕ ಮೊದಲ ರಾಷ್ಟ್ರಪ್ರಶಸ್ತಿಯಾಗಿದೆ.
ಶಿವಮೊಗ್ಗ ಸುಬ್ಬಣ್ಣ ಎಂದೇ ಖ್ಯಾತರಾಗಿದ್ದ ಅವರು ಸುಬ್ಬಣ್ಣ ಅವರು ಶಿವಮೊಗ್ಗ ಜಿಲ್ಲೆಯ ನಗರ ಗ್ರಾಮದಲ್ಲಿ 1938ರಲ್ಲಿ ಜನಿಸಿದರು. ಅವರ ನಿಜ ನಾಮಧೇಯ “ಜಿ.ಸುಬ್ರಹ್ಮಣ್ಯ”. ಗಣೇಶ್ ರಾವ್ ಹಾಗೂ ರಂಗನಾಯಕಮ್ಮನವರ ಮಗನಾದ ಸುಬ್ಬಣ್ಣನವರ ತಾತ ಶಾಮಣ್ಣನವರು ಸಂಗೀತ ವಿದ್ವಾಂಸರು.ಆರಂಭದಲ್ಲಿ ಅವರ ಬಳಿಯಲ್ಲಿಯೇ ತಮ್ಮ ಸಂಗೀತಾಭ್ಯಾಸ ಮಾಡಿದ್ದರು. ನಂತರ ಕರ್ನಾಟಕ ಶಾಸ್ತ್ರೀಯ ಸಂಗೀತವನ್ನು ಎಂ. ಪ್ರಭಾಕರ್ ಅವರಿಂದ ಅಭ್ಯಾಸ ಮಾಡಿದರು.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಇಂದಿನ ಪ್ರಮುಖ ಸುದ್ದಿ :-   ಟಿಪ್ಪು ಎಕ್ಸ್ ಪ್ರೆಸ್’ ರೈಲು ಹೆಸರು ಬದಲಿಸಿ ‘ಒಡೆಯರ್ ಎಕ್ಸ್‌ಪ್ರೆಸ್’ ಎಂದು ಮರುನಾಮಕರಣ

ಅವರು ಬಿ.ಎ.,ಬಿ.ಕಾಂ.,ಎಲ್.ಎಲ್.ಬಿ.,ಪದವೀದರರು. ವಕೀಲರಾದ ನಂತರ ನೋಟರಿಯಾಗಿ ನೇಮಕಗೊಂಡಿದ್ದರು. ಕಾಲೇಜು ದಿನಗಳಲ್ಲಿ ಹೆಚ್ಚಾಗಿ ಹಿಂದಿ ಚಿತ್ರಗೀತೆಗಳನ್ನೇ ಹಾಡುತ್ತಿದ್ದರು. ಗಾಯನ ಸ್ಪರ್ಧೆಯಲ್ಲಿ ಅಡಿಗರ ‘ಮೋಹನ ಮುರಳಿ’ ಹಾಡಿಗೆ ಬಹುಮಾನ ಸಿಕ್ಕಿದ್ದು ಅವರ ಬದುಕಿನ ದಿಕ್ಕನ್ನೇ ಬದಲಿಸಿತು. ಸುಗಮ ಸಂಗೀತ ಕ್ಷೇತ್ರದಲ್ಲಿ ಹೆಸರು ಮಾಡಿದ 1963ರಲ್ಲಿ ಆಕಾಶವಾಣಿಯ ಗಾಯಕರಾಗಿಯೂ ಆಯ್ಕೆಯಾದರು. ಸಿನಿಮಾ ರಂಗಕ್ಕೆ ಸುಬ್ಬಣ್ಣ ಹಿನ್ನೆಲೆ ಗಾಯಕರಾಗಿ ಚಿತ್ರರಂಗ ಪ್ರವೇಶಿಸಿದ್ದು ನಾಟಕಕಾರ, ಚಿತ್ರ ನಿರ್ದೇಶಕ ಕವಿ ಚಂದ್ರಶೇಖರ ಕಂಬಾರರ ‘ಕರಿಮಾಯಿ’ ಮೂಲಕ ಹಿನ್ನೆಲೆ ಗಾಯಕರಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದರು. 1974ರಲ್ಲಿ ಪ್ರಥಮ ಬಾರಿಗೆ ಕನ್ನಡ ಸಿನೆಮಾದ ಹಿನ್ನೆಲೆ ಗಾಯನಕ್ಕೆ “ರಜತಕಮಲ್”ಪುರಸ್ಕಾರವನ್ನು ಪಡೆದ ಹೆಗ್ಗಳಿಕೆ ಇವರದು. ಕಾಡು ಕುದುರೆ ಚಿತ್ರದ ಕಾಡು ಕುದುರೆ ಓಡಿ ಬಂದಿತ್ತಾ ಹಾಡಿಗೆ ರಾಷ್ಟ್ರಪ್ರಶಸ್ತಿ ಪಡೆದರು.
ಅವರ ಅಳುವಾಗ ಅತ್ತು, ನುಗುವಾಗ ನಕ್ಕು, ಬಾಗಿಲೊಳು ಕೈಮುಗಿದು ಒಳಗೆ ಬಾ ಯಾತ್ರಿಕನೆ., ಆನಂದಮಯ ಈ ಜಗ ಹೃದಯ ಏತಕೆ ಭಯ ಮಾಣೋ……‘ಅಳಬೇಡಾ ತಂಗಿ ಅಳಬೇಡ…ಮೊದಲಾದ ಭಾವಗೀತೆಗಳು, ‘ಕೋಡಗನ ಕೋಳಿ ನುಂಗಿತ್ತಾ..’, ‘ಬಿದ್ದೀಯಬ್ಬೇ ಮುದುಕಿ..’ ಮೊದಲಾದ ಶಿಶುನಾಳ ಷರೀಫರ ಗೀತೆಗಳನ್ನು ಹಾಡಿದ ಸುಬ್ಬಣ್ಣ ಮನೆ ಮಾತಾದರು. ಕುವೆಂಪು, ದರಾ ಬೇಂದ್ರೆ, ಕೆ.ಎಸ್.ನಿಸಾರ್ ಅಹಮದ್, ಕೆ.ಎಸ್.ನರಸಿಂಹಸ್ವಾಮಿ, ಜಿ.ಎಸ್.ಶಿವರುದ್ರಪ್ಪ, ಲಕ್ಷ್ಮೀನಾರಾಯಣ ಭಟ್ಟರು ಸೇರಿದಂತೆ ಹಲವು ಪ್ರಮುಖ ಕವಿಗಳ ಕವನಗಳಿಗೆ ಧ್ವನಿಯಾದರು.
ಸುಗಮ ಸಂಗೀತದಲ್ಲಿ ಆಕಾಶವಾಣಿ ಹಾಗೂ ದೂರದರ್ಶನದ ಎ ಶ್ರೇಣಿ ಕಲಾವಿದರಾಗಿದ್ದರು. ಅವರಿಗೆ  1985ರಲ್ಲಿ ರಾಜ್ಯೋತ್ಸವ ಪುರಸ್ಕಾರ, 1988ರಲ್ಲಿ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಪುರಸ್ಕಾರ, 1999ರಲ್ಲಿ ಸಂತ ಶಿಶುನಾಳ ಷರೀಫ ಪ್ರಶಸ್ತಿ ಲಭಿಸಿದ್ದು, 2008ರಲ್ಲಿ ಕುವೆಂಪು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿಯನ್ನು ಸುಬ್ಬಣ್ಣ ಪಡೆದಿದ್ದರು. ಸಂಗೀತ ಅಕಾಡಮಿಯ ಕರ್ನಾಟಕ ಕಲಾ ತಿಲಕ ಪ್ರಶಸ್ತಿ ಸಂದಿದೆ. ಗೌರವಿಸಿದರೆ, ಅಭಿಮಾನಿಗಳು ನೂರಾರು ಪ್ರಶಸ್ತಿಗಳನ್ನು ನೀಡಿ ಸನ್ಮಾನಿಸಿದ್ದಾರೆ.

ಇಂದಿನ ಪ್ರಮುಖ ಸುದ್ದಿ :-   ಎಸ್.ಟಿ ಮೀಸಲಾತಿ ಪ್ರಮಾಣ ಹೆಚ್ಚಳ: ಬಿಜೆಪಿ ಕೋರ್‌ ಕಮಿಟಿ ಸಭೆಯಲ್ಲಿ ಒಮ್ಮತದ ಒಲವು - ಸಿ.ಟಿ. ರವಿ

 

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ

advertisement