ಮಹಾರಾಷ್ಟ್ರ ಸರ್ಕಾರದ ಶೇ. 75ರಷ್ಟು ಸಚಿವರ ಮೇಲಿದೆ ಕ್ರಿಮಿನಲ್ ಪ್ರಕರಣಗಳು: ಎಡಿಆರ್‌

ಮುಂಬೈ: ಮಹಾರಾಷ್ಟ್ರದ ಶೇ. 75ರಷ್ಟು ಸಚಿವರು ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳಿವೆ ಎಂದು ಘೋಷಿಸಿಕೊಂಡಿದ್ದಾರೆ ಎಂದು ವರದಿಯೊಂದು ಹೇಳಿದೆ. ಮಹಾರಾಷ್ಟ್ರದ ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸೇರಿದಂತೆ 20 ಸಚಿವರಿದ್ದು, ಅವರಲ್ಲಿ 15 ಮಂದಿ ತಮ್ಮ ಚುನಾವಣಾ ಅಫಿಡವಿಟ್‌ನಲ್ಲಿ ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳಿವೆ ಎಂದು ಎಡಿಆರ್‌ ಸಂಸ್ಥೆ ಹೇಳಿದೆ.
ಮುಖ್ಯಮಂತ್ರಿ ಏಕನಾಥ್ ಶಿಂಧೆ ಕೆಲವೇ ದಿನಗಳ ಹಿಂದೆ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದರು. 2019ರ ವಿಧಾನಸಭೆ ಚುನಾವಣೆಗೂ ಮುನ್ನ ಸಚಿವರು ಸಲ್ಲಿಸಿದ್ದ ಚುನಾವಣಾ ಅಫಿಡವಿಟ್‌ಗಳನ್ನು ಎಡಿಆರ್ ಪರಿಶೀಲಿಸಿದೆ. ಮಹಾರಾಷ್ಟ್ರ ಸರ್ಕಾರದ 15 ಸಚಿವರು (ಶೇ. 75)ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ಘೋಷಿಸಿದ್ದಾರೆ. ಅವರಲ್ಲಿ 13 ಸಚಿವರು (ಶೇ. 65) ತಮ್ಮ ವಿರುದ್ಧ ಗಂಭೀರ ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸುತ್ತಿದ್ದಾರೆ ಎಂದು ಎಡಿಆರ್‌ ಹೇಳಿದೆ.

ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಸಂಪುಟದಲ್ಲಿರುವ ಎಲ್ಲ ಸಚಿವರು ಕೋಟ್ಯಾಧಿಪತಿಗಳಾಗಿದ್ದು, ಅವರ ಆಸ್ತಿಯ ಸರಾಸರಿ ಮೌಲ್ಯ 47.45 ಕೋಟಿ ರೂ. ಗಳಾಗಿದೆ. ಇವರಲ್ಲಿ ಮಲಬಾರ್ ಹಿಲ್ ಕ್ಷೇತ್ರದ ಶಾಸಕ ಮಂಗಲ್ ಪ್ರಭಾತ್ ಲೋಧಾ ಅವರು 441.65 ಕೋಟಿ ರೂ. ಆಸ್ತಿ ಹೊಂದಿರುವ ಅತ್ಯಧಿಕ ಶ್ರೀಮಂತ ಸಚಿವರಾಗಿದ್ದಾರೆ. ಅತಿ ಕಡಿಮೆ ಘೋಷಿತ ಒಟ್ಟು ಆಸ್ತಿ ಹೊಂದಿರುವ ಸಚಿವರೆಂದರೆ ಪೈಠಾಣ್ ಕ್ಷೇತ್ರದ ಭೂಮಾರೆ ಸಂದೀಪನರಾವ್ ಅಸಾರಾಂ. ಇವರು 2.92 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದ್ದಾರೆ.

ಪ್ರಮುಖ ಸುದ್ದಿ :-   ಅಮೆರಿಕ ಮಾದರಿಯಲ್ಲಿ ಭಾರತದಲ್ಲೂ 50% ಉತ್ತರಾಧಿಕಾರ ತೆರಿಗೆ : ಸ್ಯಾಮ್ ಪಿತ್ರೊಡಾ ಹೇಳಿಕೆಯಿಂದ ವಿವಾದ ; ಬಿಜೆಪಿ ವಾಗ್ದಾಳಿ, ಇದು ನಮ್ಮ ಕಲ್ಪನೆಯಲ್ಲ ಎಂದ ಕಾಂಗ್ರೆಸ್

ಮಹಾರಾಷ್ಟ್ರದ 8 ಸಚಿವರು ಎಸ್​ಎಸ್​ಎಲ್​ಸಿ- ಪಿಯುಸಿ ಶೈಕ್ಷಣಿಕ ಅರ್ಹತೆಯನ್ನು ಹೊಂದಿರುವುದಾಗಿ ಘೋಷಿಸಿದ್ದಾರೆ. ಆದರೆ 11 ಸಚಿವರು (ಶೇ. 55) ಡಿಗ್ರಿ ಅಥವಾ ಅದಕ್ಕಿಂತ ಹೆಚ್ಚಿನ ಶೈಕ್ಷಣಿಕ ಅರ್ಹತೆಯನ್ನು ಹೊಂದಿದ್ದಾಗಿ ಘೋಷಿಸಿಕೊಂಡಿದ್ದಾರೆ. ಒಬ್ಬರು ಸಚಿವರು ಡಿಪ್ಲೊಮಾ ಶಿಕ್ಷಣ ಪಡೆದಿದ್ದಾರೆ.
ಕಳೆದ ತಿಂಗಳು ಬಿಜೆಪಿ ಜೊತೆ ಮೈತ್ರಿಗೆ ಆಗ್ರಹಿಸಿ ಶಿವಸೇನೆಯ ಶಾಸಕರು ಬಂಡಾಯವೆದ್ದು ಉದ್ಧವ್ ಠಾಕ್ರೆ ಸರ್ಕಾರವನ್ನು ಉರುಳಿಸಿದ್ದರು. ನಂತರ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿದ್ದರು. ಶಿವಸೇನೆ ಪಕ್ಷದ ಅಧಿಕೃತ ಚಿಹ್ನೆಗಾಗಿ ಏಕನಾಥ್ ಶಿಂಧೆ ಮತ್ತು ಉದ್ಧವ್ ಠಾಕ್ರೆ ಇನ್ನೂ ಕಾನೂನು ಹೋರಾಟ ನಡೆಸುತ್ತಿದ್ದಾರೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement