ಹೊರಗುತ್ತಿಗೆ ನೇಮಕಾತಿ: ಶೇ.33ರಷ್ಟು ಹುದ್ದೆ ಮಹಿಳೆಯರಿಗೆ ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಹೊರಗುತ್ತಿಗೆ ನೇಮಕಾತಿಯಲ್ಲಿ ಶೇ.33ರಷ್ಟು ಹುದ್ದೆಗಳನ್ನು ಮಹಿಳೆಯರಿಗೆ ಮೀಸಲಾತಿ ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಮೂಲಕ ಮಹಿಳಾ ಅಭ್ಯರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ.
ಈ ಕುರಿತು ಆರೋಗ್ಯ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ರಾಜ್ಯ ಸರ್ಕಾರದ ಕಚೇರಿಗಳಲ್ಲಿನ ವಾಹನ ಚಾಲಕರು, ಡಾಟಾ ಎಂಟ್ರಿ ಆಪರೇಟರ್, ಸ್ವಚ್ಛತಾ ಸಿಬ್ಬಂದಿ, ಗ್ರೂಪ್-ಡಿ ಹುದ್ದೆಗಳ್ನು ಹೊರಗುತ್ತಿಗೆ ಮೂಲಕ ನೇಮಕ ಮಾಡಿಕೊಳ್ಳುವ ಹುದ್ದೆಗಳಲ್ಲಿ ಶೇ.33ರಷ್ಟು ಹುದ್ದೆಗಳನ್ನು ಮಹಿಳಾ ಅಭ್ಯರ್ಥಿಗಳಿಗೆ ಕಡ್ಡಾಯವಾಗಿ ನಿಗದಿಪಡಿಸಿ ಭರ್ತಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.
ರಾಜ್ಯ ಸರ್ಕಾರದ ಆದೇಶದಂತೆ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ರಾಜ್ಯಗಳಲ್ಲಿ ಹೊರಗುತ್ತಿಗೆ ಮೂಲಕ ಪಡೆಯುವ ಟೆಂಡರ್ ಪ್ರಕಟಣೆಯಲ್ಲಿ ಮತ್ತು ಹೊರಗುತ್ತಿಗೆ ಏಜನ್ಸಿಗಳೊಂದಿಗೆ ಮಾಡಿಕೊಳ್ಳಲಾಗುವ ಒಪ್ಪಂದದಲ್ಲಿ ಶೇ.33ರಷ್ಟು ಹುದ್ದೆಗಳನ್ನು ಕಡ್ಡಾಯವಾಗಿ ಮಹಿಳಾ ಅಭ್ಯರ್ಥಿಗಳಿಂದ ಭರ್ತಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement