ಪರೇಶ್ ಮೇಸ್ತ ಕೊಲೆ ಪ್ರಕರಣದ ಪ್ರಮುಖ ಆರೋಪಿಗೆ ವಕ್ಫ್ ಜಿಲ್ಲಾ ಸಲಹಾ ಸಮಿತಿ ಉಪಾಧ್ಯಕ್ಷ ಸ್ಥಾನ: ವ್ಯಾಪಕ ಆಕ್ರೋಶದ ಬಳಿಕ ಆದೇಶ ರದ್ದು

ಕಾರವಾರ: ಉತ್ತರಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿ ಜಿಲ್ಲಾ ಉಪಾಧ್ಯಕ್ಷ ಸ್ಥಾಕ್ಕೆ ಜಮಾಲ್ ಆಜಾದ್ ಸಯ್ಯದ್ ಅಣ್ಣಿಗೇರಿ ನೇಮಕ ಮಾಡಿದ್ದನ್ನು ಸರ್ಕಾರ ತಡೆ ಹಿಡಿದಿದೆ. ಪರೇಶ್ ಕೊಲೆ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾಗಿರುವ ಅಣ್ಣಿಗೇರಿ ನೇಮಕಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಆದೇಶವನ್ನು ಸರ್ಕಾರ ತಡೆ ಹಿಡಿದಿದೆ ಎಂದು ಹೇಳಲಾಗಿದೆ.
ಈ ನೇಮಕಕ್ಕೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರು ವ್ಯಾಪಕ ವಿರೋಧ ವ್ಯಕ್ತ ಪಡಿಸಿದ್ದರು. 2017ರ ಡಿಸೆಂಬರ್‌ನಲ್ಲಿ ಹೊನ್ನಾವರ ಪಟ್ಟಣದಲ್ಲಿ ಗಲಭೆ ಸಂದರ್ಭದಲ್ಲಿ ಪಟ್ಟಣದ ಪರೇಶ್ ಮೇಸ್ತ ಎಂಬ ಯುವಕ ನಾಪತ್ತೆಯಾಗಿ, ಎರಡು ದಿನಗಳ ನಂತರ ಹೊನ್ನಾವರ ಪಟ್ಟಣದ ಕೆರೆಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದ. ಮೇಸ್ತನನ್ನ ಕೋಮು ಗಲಭೆಯಲ್ಲಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಿ ಬಿಜೆಪಿ ವ್ಯಾಪಕ ಪ್ರತಿಭಟನೆ ನಡೆಸಿತ್ತು.

ಪ್ರಕರಣ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿ, ಜಮಾಲ್ ಅಜಾದ್ ಅಣ್ಣಿಗೇರಿ ಎಂಬಾತನನ್ನ ಪ್ರಮುಖ ಆರೋಪಿಯನ್ನಾಗಿ ಮಾಡಿ ಬಂಧಿಸಲಾಗಿತ್ತು. ನಂತರ ವ್ಯಾಪಕ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಈ ಪ್ರಕರಣವನ್ನ ಅಂದಿನ ಕಾಂಗ್ರೆಸ್ ಸರ್ಕಾರ ಸಿಬಿಐ ತನಿಖೆಗೆ ವಹಿಸಿತ್ತು.ಸಿಬಿಐ ಇನ್ನೂ ತನಿಖೆ ನಡೆಸುತ್ತಿದ್ದು, ಬಂಧಿತರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

ಕೆಲ ದಿನಗಳ ಹಿಂದೆ ಜಿಲ್ಲಾ ವಕ್ಫ್ ಬೋರ್ಡ್ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದ್ದು, ಇದರಲ್ಲಿ ಉಪಾಧ್ಯಕ್ಷ ಸ್ಥಾನವನ್ನ ಮೇಸ್ತ ಸಾವಿನ ಪ್ರಕಣದ ಆರೋಪಿ ಅಜಾದ್ ಅಣ್ಣಿಗೇರಿಗೆ ನೀಡಿರುವುದು ವ್ಯಾಪಕ ವಿರೋಧಕ್ಕೆ ಕಾರಣವಾಗಿತ್ತು. ಈಗ ಉತ್ತರ ಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿ ರಚನೆಗೆ ಸಂಬಂಧಿಸಿದಂತೆ ಹೊರಡಿಸಿರುವ ಆದೇಶಗಳನ್ನು ಮುಂದಿನ ಆದೇಶದವರೆಗೆ ತಡೆ ಹಿಡಿಯಲು ಶುಕ್ರವಾರ (ಆಗಸ್ಟ್ 12 ) ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಆದೇಶ ಹೊರಡಿಸಿದ್ದಾರೆ. ಈ ಆದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ತಡೆ ಹಿಡಿಯಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ ಎಂದು ವರದಿಯಾಗಿದೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement