ಬೆಳಗಾವಿ ನಂತರ ಈಗ ಮೂಡಲಗಿಯ ಧರ್ಮಟ್ಟಿಯಲ್ಲೂ ಚಿರತೆ ಪ್ರತ್ಯಕ್ಷ

ಬೆಳಗಾವಿ : ಬೆಳಗಾವಿ ಮಹಾನಗರದಲ್ಲಿ ವಾರದ ಹಿಂದೆ ಚಿರತೆ ಪ್ರತ್ಯಕ್ಷವಾಗಿ ಜನರ ಆತಂಕಕ್ಕೆ ಕಾರಣವಾಗಿದೆ. ಅದನ್ನು ಹಿಡಿಯುವ ಪ್ರಯತ್ನದಲ್ಲಿ ಜಿಲ್ಲಾಡಳಿತ ನಿರತವಾಗಿರುವಾಗಲೇ ಜಿಲ್ಲೆಯ ಮೂಡಲಗಿ ತಾಲೂಕಿನ ಧರ್ಮಟ್ಟಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿ ಜನರಿಗೆ ಭೀತಿ ಮೂಡಿಸಿದೆ.
ಧರ್ಮಟ್ಟಿಯ ಅನಿಲ್ ಮಂದ್ರೋಳಿ ಎಂಬುವರಿಗೆ ಸೇರಿದ ಎಮ್ಮೆ ಕರುವಿನ ಮೇಲೆ ಚಿರತೆ ದಾಳಿ ನಡೆಸಿ ಅದರ ಕತ್ತಿಗೆ ಬಾಯಿ
ಹಾಕಿ ಎಳೆದೊಯ್ಯುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಎಮ್ಮೆ ಕರುವಿನ ಮೇಲೆ ದಾಳಿ ನಡೆಸಿದ್ದು, ಸ್ವಲ್ಪ ದೂರದಲ್ಲಿ ಎಮ್ಮೆ ಕರುವಿನ ಅರ್ಧಭಾಗ ದೇಹ ಪತ್ತೆಯಾಗಿದೆ. ಸುದ್ದಿ ತಿಳಿದ ಅರಣ್ಯ ಇಲಾಖೆ, ಪೋಲಿಸ್ ಸಿಬ್ಬಂದಿ ಹಾಗೂ ತಾಲೂಕಾಡಳಿತ ಇದೀಗ ಧರ್ಮಟ್ಟಿ ಗ್ರಾಮದಲ್ಲಿ ಚಿರತೆ ಹಿಡಿಯುವ ಕಾರ್ಯಾಚರಣೆಯಲ್ಲಿ ಭಾಗಿಯಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಧರ್ಮಟ್ಟಿ, ಪಟಗುಂದಿ, ಮಸಗುಪ್ಪಿ, ಕಮಲದಿನ್ನಿ, ರಂಗಾಪುರ ಮತ್ತು ಮೂಡಲಗಿ ತೋಟದ ಪ್ರದೇಶಗಳ ವ್ಯಾಪ್ತಿಯ ಶಾಲೆಗಳಿಗೆ 1 ದಿನದ ರಜೆ ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement