ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ ನ್ಯೂಸ್: ಶಿಕ್ಷಕರ ನೇಮಕಾತಿ ವಯೋಮಿತಿ ಹೆಚ್ಚಳ, ‘ಕಟಾಫ್‌ ಅಂಕ’ ಇಳಿಸಿದ ಸರ್ಕಾರ

ಬೆಂಗಳೂರು: ಶಿಕ್ಷಕರ ನೇಮಕಾತಿಗೆ ವಯೋಮಿತಿ ಏರಿಕೆಗೆ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಶಿಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ನೀಡಿದ್ದು, ಶಿಕ್ಷಕರ ನೇಮಕಾತಿ ಹೊಸ ನಿಯಮಾವಳಿಗಳಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ, ಈ ಮೂಲಕ ಶಿಕ್ಷಕರ ನೇಮಕಾತಿಯಲ್ಲಿ ವಯೋಮಿತಿ ಸಡಿಲಿಕೆ ಸಿಕ್ಕಿದೆ.

ಸಚಿವ ಸಂಪುಟ ಸಭೆಯ ಬಳಿಕ ಮಾಹಿತಿ ನೀಡಿದ  ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ, ಶಿಕ್ಷಕರ ನೇಮಕಾತಿಯಲ್ಲಿ ವಯೋಮಿತಿ ಸಡಿಲಿಕೆಗೆ ಸರ್ಕಾರದ ನಿರ್ಧಾರ ಮಾಡಿದ್ದು, ಎಲ್ಲ ವರ್ಗಗಳಿಗೂ 2 ವರ್ಷಗಳ ವಯೋಮಿತಿ ಏರಿಕೆ ಮಾಡಲು ನಿರ್ಧಾರ ಮಾಡಲಾಗಿದೆ‌ ಎಂದು ತಿಳಿಸಿದರು.
ಎಸ್ಸಿ, ಎಸ್ಟಿ, ಪ್ರವರ್ಗ 1 ಮತ್ತು ವಿಕಲಚೇತನ‌ ಅಭ್ಯರ್ಥಿಗಳಿಗ ವಯೋಮಿತಿ 47 ವರ್ಷಕ್ಕೆ ಏರಿಕೆಯಾಗಿದೆ. ಪ್ರವರ್ಗ 2, 2 ಬಿ, 3 ಎ ಮತ್ತು 3 ಬಿ ಗಳಿಗೆ 45 ವರ್ಷ ಹಾಗೂ ಸಾಮಾನ್ಯ ವರ್ಗಗಳಿಗೆ 42 ವರ್ಷ ಮೀರಿರಬಾರದು ಎಂದು ವಯೋಮಿತಿ ನಿಗದಿ ಮಾಡಲಾಗಿದೆ. ಅಲ್ಲದೆ ಶಿಕ್ಷಕರ ಹುದ್ದೆಗೆ ಕೆಪಿಎಸ್‌ಸಿಯಿಂದ ಆಯ್ಕೆಯಾಗುವುದಕ್ಕೆ ಇದ್ದ ಕನಿಷ್ಠ ಅಂಕಗಳಲ್ಲೂ ಇಳಿಕೆ ಮಾಡಲಾಗಿದ್ದು, 60 ಅಂಕಗಳಿಂದ 50 ಅಂಕಗಳಿಗೆ ಇಳಿಕೆ ಮಾಡಲಾಗಿದೆ‌.

ಪ್ರಮುಖ ಸುದ್ದಿ :-   ಹತ್ಯೆಗೀಡಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ; ಕುಟುಂಬಸ್ಥರಿಗೆ ಸಾಂತ್ವನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement