ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಕೊರೊನಾ ಸೋಂಕು

ನವದೆಹಲಿ: ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೊರೊನಾ ಸೋಂಕು ತಗುಲಿದೆ. ಶನಿವಾರ ನಡೆಸಿದ ಪರೀಕ್ಷೆಯಲ್ಲಿ ಕೊರೊನಾಗೆ ಧನಾತ್ಮಕ ಫಲಿತಾಂಶ ಬಂದಿದೆ. ಈ ಹಿನ್ನೆಲೆಯಲ್ಲಿ ಅವರು ಸೋಮವಾರ ದೆಹಲಿಯಲ್ಲಿ ನಡೆಯಲಿರುವ 75ನೇ ಸ್ವಾತಂತ್ರ‍್ಯ ಮಹೋತ್ಸವದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದಿದ್ದಾರೆ.

ಭಾರತದ 75ನೇ ವರ್ಷದ ಸ್ವಾತಂತ್ರ‍್ಯೋತ್ಸವವು ನಮ್ಮಲ್ಲಿ ಪ್ರತಿಯೊಬ್ಬರಿಗೂ ಐತಿಹಾಸಿಕ ಸಂದರ್ಭ ಹಾಗೂ ಹೆಮ್ಮೆಯ ಕ್ಷಣವಾಗಿದೆ. ನಾನು ಆಗಸ್ಟ್ 15ರ ಧ್ವಜಾರೋಹಣ ಸಮಾರಂಭದಲ್ಲಿ ಭಾಗವಹಿಸಲು ಉತ್ಸುಕನಾಗಿದ್ದೆ. ಆದರೆ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದರಿಂದ ಸಮಾರಂಭದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಪತ್ರದಲ್ಲಿ ಹೇಳಿದ್ದಾರೆ.
ನಾನು ದೈಹಿಕವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಿಲ್ಲ. ಆದರೆ ಇಡೀ ರಾಷ್ಟ್ರದೊಂದಿಗೆ ನಾನೂ ಸ್ವಾತಂತ್ರ‍್ಯ ಸಂಭ್ರಮದಲ್ಲಿ ಸೇರಿಕೊಳ್ಳುತ್ತೇನೆ. ಈ ಶುಭ ಸಂದರ್ಭದಲ್ಲಿ ಎಲ್ಲರಿಗೂ ಸ್ವಾತಂತ್ರ್ಯ ದಿನದ ಶುಭಾಶಯಗಳನ್ನು ಕೋರುತ್ತೇನೆ ಎಂದು ಅವರು ಹೇಳಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement