ಕೋರ್ಟ್ ಆವರಣದಲ್ಲೇ ಪತ್ನಿಯ ಕತ್ತು ಕುಯ್ದು ಕೊಂದ ಗಂಡ: ಎರಡೂ ಹೆಣ್ಣು ಮಕ್ಕಳಾಗಿದ್ದಕ್ಕೆ ಈ ನೀಚ ಕೃತ್ಯ

posted in: ರಾಜ್ಯ | 0

ಹಾಸನ: ಕೋರ್ಟ್ ಆವರಣದಲ್ಲೇ ವ್ಯಕ್ತಿಯೊಬ್ಬ ತನ್ನ ಪತ್ನಿಯ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿದ ಭಯಾನಕ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಶನಿವಾರ ಸಂಭವಿಸಿದೆ.
ಗಂಭೀರವಾಗಿ ಗಾಯಗೊಂಡ ಪತ್ನಿ ಚೈತ್ರಾ ಅವರನ್ನು ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಹೊಳೆನರಸೀಪುರದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಅಂಬ್ಯುಲೆನ್ಸ್‌ನಲ್ಲಿ ಹಾಸನ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿತ್ತು.
ಹೊಳೆನರಸೀಪುರ ತಾಲೂಕಿನ ತಟ್ಟೆಕೆರೆ ಗ್ರಾಮದ ಶಿವಕುಮಾರ ಎಂಬಾತನೇ ಕೊಲೆ ಮಾಡಿದವ ಎಂದು ಗುರುತಿಸಲಾಗಿದೆ. ತನ್ನ ಪತ್ನಿಗೆ ಅಮಾನುಷವಾಗಿ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸುತ್ತಿದ್ದ ಶಿವಕುಮಾರ​ನನ್ನು ಅಟ್ಟಿಸಿಕೊಂಡು ಹೋಗಿ ಹಿಡಿದ ಸಾರ್ವಜನಿಕರು ಪೊಲೀಸರಿಗೆ ಒಪ್ಪಿಸಿದ್ದಾರೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಹೊನಮಾರನಹಳ್ಳಿ ಗ್ರಾಮದ ಚೈತ್ರಾ ಎಂಬವರನ್ನು 7 ವರ್ಷದ ಹಿಂದೆ ಶಿವಕುಮಾರ ಎಂಬಾತನಿಗೆ ಮದುವೆ ಮಾಡಿಕೊಡಲಾಗಿತ್ತು.​ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಇಬ್ಬರು ಹೆಣ್ಣು ಮಕ್ಕಳನ್ನೇ ಹೆತ್ತಿದ್ದಾಳೆ ಎಂಬ ಮಾರಣಕ್ಕೆ ಪತ್ನಿಗೆ ಚಿತ್ರಹಿಂಸೆ ನೀಡುತ್ತಿದ್ದ ಎನ್ನಲಾಗಿದೆ. ಈ ಮೊದಲು ಸಹ ಚೈತ್ರಾಳ ಸರ, ಕಿವಿಯೋಲೆ ಕಿತ್ತುಕೊಂಡು ಹಲ್ಲೆ ಮಾಡಿದ್ದ. ಅವನ ಹಿಂಸೆ ತಾಳಲಾರದೆ ಚೈತ್ರಾ ತವರು ಮನೆಗೆ ಹೋಗಿದ್ದಳು. ಹಾಗೂ ವಿಚ್ಛೇದನಕ್ಕಾಗಿ ಕೋರ್ಟ್ ಮೊರೆ ಹೋಗಿದ್ದಳು. ಗಂಡನಿಂದ ಜೀವನಾಂಶ ಕೋರಿದ್ದಳು.. ಈ ವಿಚಾರವಾಗಿ ಇಂದು ಹೊಳೆನರಸೀಪುರ ಕೋರ್ಟ್​ಗೆ ಚೈತ್ರಾ ಆಗಮಿಸಿದ್ದರು. ಮಧ್ಯಾಹ್ನ 12ರ ಸುಮಾರಿನಲ್ಲಿ ಕೋರ್ಟ್ ಆವರಣದ ಶೌಚಗೃಹಕ್ಕೆ ಚೈತ್ರಾ ತೆರಳಿದ್ದಾಗ ಹೊಂಚುಹಾಕಿ ಕಾಯುತ್ತಿದ್ದ ಶಿವಕುಮಾರ​, ದಾಳಿ ಮಾಡಿ ಆಕೆಯ ಕತ್ತು ಕೊಯ್ದು ಪರಾರಿಯಾಗಲು ಯತ್ನಿಸಿದ್ದ. ನಂತರ ಮಗುವನ್ನು ಹತ್ಯೆ ಮಾಡಲು ಮುಂದಾದಾಗ ಸ್ಥಳದಲ್ಲಿದ್ದವರು ಮಗು ರಕ್ಷಣೆ ಮಾಡಿದ್ದಾರೆ. ನಂತರ ಎಲ್ಲರಿಗೂ ಚಾಕು ತೋರಿಸಿ ಎಲ್ಲರನ್ನು ಹೆದರಿಸಿ ಆರೋಪಿ ಶಿವಕುಮಾರ ಅಲ್ಲಿಂದ‌ ಪರಾರಿಯಾಗಲು ಯತ್ನಿಸಿದ್ದಾನೆ. ಆತನ ಬೆನ್ನಟ್ಟಿ ಹಿಡಿದ ಸಾರ್ವಜನಿಕರು ಪೊಲೀಸರಿಗೆ ಒಪ್ಪಿಸಿದ್ದಾರೆ. ಹೊಳೆನರಸೀಪುರ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಓದಿರಿ :-   ಬೆಳಗಾವಿ ಸುವರ್ಣಸೌಧದ ಎದುರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ : ಸಿಎಂ ಬೊಮ್ಮಾಯಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement