ಖ್ಯಾತ ಟೇಬಲ್ ಟೆನ್ನಿಸ್ ಆಟಗಾರ್ತಿಗೆ ಸಾಮಾಜಿಕ ಜಾಲ ತಾಣದಲ್ಲಿ ಕಿರುಕುಳ: ಆರೋಪಿ ಬಂಧನ

ಹೈದರಾಬಾದ್: ಖ್ಯಾತ ಟೇಬಲ್​ ಟೆನ್ನಿಸ್​ ಆಟಗಾರ್ತಿ ನೈನಾ ಜೈಸ್ವಾಲ್​ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ಆರೋಪಿಯನ್ನು ಹೈದರಾಬಾದ್​ನ ಸೈಬರ್​ ಕ್ರೈಂ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಶ್ರೀಕಾಂತ್​ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಈತ ಟ್ವಿಟರ್‍ ಮತ್ತು ಇನ್‌ಸ್ಟಾಗ್ರಾಂನಲ್ಲಿ ನೈನಾ ಅವರಿಗೆ ಅಶ್ಲೀಲವಾಗಿ ಸಂದೇಶಗಳನ್ನು ಕಳುಹಿಸುತ್ತಿದ್ದ. ನೈನಾ ಹಲವು ಬಾರಿ ಈತನಿಗೆ ಎಚ್ಚರಿಕೆ ನೀಡಿದ ಹೊರತಾಗಿಯೂ ಆತ ಕಳುಹಿಸಿಉವುದನ್ನು ನಿಲ್ಲಿಸಿರಲಿಲ್ಲ. ಪೊಲೀಸರಿಂದಲೂ ಆತನಿಗೆ ಎಚ್ಚರಿಕೆ ನೀಡಲಾಗಿತ್ತು, ಆದರೂ ಆತ ಚಾಳಿಯನ್ನು ಆತ ಮುಂದುವರಿಸಿದ್ದ. ಹೀಗಾಗಿ ನೈನಾ ಅವರ ತಂದೆ ಅಶ್ವಿನ್​ ಅವರು ಸೈಬರ್​ ಕ್ರೈಂ ಪೊಲೀಸರಿಗೆ ದೂರು ನೀಡಿದ್ದರು.

ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆತನ ವಿರುದ್ಧ ಸಿಆರ್​ಪಿಸಿಯ ಸೆಕ್ಷನ್​ 14ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪ ಸಾಬೀತಾದಲ್ಲಿ ಶ್ರೀಕಾಂತ್​ 7 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ.
ನೈನಾ ಟೇಬಲ್ ಟೆನ್ನಿಸ್ ಆಟಗಾರ್ತಿಯಾಗಿ ಹಲವು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. 8ನೇ ವಯಸ್ಸಿಗೆ ಹತ್ತನೇ ತರಗತಿ ಮುಗಿಸಿ, 13ನೇ ವಯಸ್ಸಿನಲ್ಲಿ ಪದವಿ, 15ನೇ ವಯಸ್ಸಿಗೆ ಸ್ನಾತಕೋತ್ತರ ಪದವಿ ಮುಗಿಸಿದ ಪೂರ್ಣಗೊಳಿಸಿ ಅಪರೂಪದ ಸಾಧನೆ ಮಾಡಿದವರು. ಏಷ್ಯಾದಲ್ಲೇ ಅತ್ಯಂತ ಕಿರಿಯ ವಯಸ್ಸಿನಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಹೆಗ್ಗಳಿಕೆ ನೈನಾ ಅವರದ್ದು. ಮೋಟಿವೇಶನಲ್ ಸ್ಪೀಕರ್ ಆಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ತಾಯಿ ಭಾಗ್ಯಲಕ್ಷ್ಮಿ ಅವರೊಂದಿಗೆ ಎಲ್​ಎಲ್​ಬಿ ಓದಿ ಇತ್ತೀಚೆಗಷ್ಟೇ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ.

ಪ್ರಮುಖ ಸುದ್ದಿ :-   ಕಾಂಗ್ರೆಸ್ಸಿಗೆ ರಾಜೀನಾಮೆ ನೀಡಿದ 35 ವರ್ಷಗಳಿಂದ ಪಕ್ಷದಲ್ಲಿದ್ದ ಪ್ರಿಯಾಂಕಾ ಗಾಂಧಿ ಆಪ್ತ ತಜೀಂದರ್ ಸಿಂಗ್ ಬಿಟ್ಟು...!

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement