ಹರ್ ಘರ್ ತಿರಂಗಾ ಜಾಹೀರಾತಿನಲ್ಲಿ ನೆಹರೂ ಭಾವಚಿತ್ರ ಹಾಕದ ಸರ್ಕಾರ : ಬಿಜೆಪಿ ನಡೆಗೆ ಕಾಂಗ್ರೆಸ್ ಆಕ್ರೋಶ

ಬೆಂಗಳೂರು : ರಾಜ್ಯ ಸರ್ಕಾರದ ಹರ್ ಘರ್ ತಿರಂಗಾ ಜಾಹೀರಾತಿನಲ್ಲಿ ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರ ಭಾವಚಿತ್ರ ಹಾಕದಿರುವುದಕ್ಕೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರು, ಸಾರ್ವಜನಿಕರ ಹಣದಲ್ಲಿ ದ್ವೇಷ ತೀರಿಸಿಕೊಳ್ಳುವ ಚಾಳಿಯನ್ನು ಬಿಜೆಪಿ ಸರ್ಕಾರ ಮುಂದುವರಿಸಿದೆ ಎಂದು ಹೇಳಿದ್ದಾರೆ.

ಸ್ವಾತಂತ್ರ್ಯ ಚಳುವಳಿಯಲ್ಲಿ ಪಾಲ್ಗೊಂಡಿದ್ದಕ್ಕಾಗಿ ಪಂ. ಜವಾಹರ್‌ಲಾಲ್‌ ನೆಹರೂ ಅವರನ್ನು ಬ್ರಿಟಿಷರು 9 ಬಾರಿ ಬಂಧಿಸಿ 3259 ದಿನ ಜೈಲಿನಲ್ಲಿರಿಸಿದ್ದರು. ರಾಜಕೀಯ ದುರುದ್ದೇಶದಿಂದ ನೆಹರೂ ಅವರ ಹೆಸರನ್ನು ಜಾಹೀರಾತಿನಿಂದ ಕೈ ಬಿಟ್ಟಿರುವುದು ಅಕ್ಷಮ್ಯ ಎಂದು ಅವರು ಕಿಡಿಕಾರಿದ್ದಾರೆ.
ನೆಹರೂ ಅವರನ್ನು ಅಪಮಾನಿಸುವ ಹಾಗೂ ಸರ್ಕಾರಿ ಜಾಹೀರಾತಿನಿಂದ ಕೈಬಿಡುವುದರಿಂದ ದೇಶ ಎಂದಿಗೂ ಅವರನ್ನು ಮರೆಯುವುದಿಲ್ಲ. ಆದರೆ ಚರಿತ್ರೆಯು ನಿಮ್ಮ ಸಣ್ಣತನವನ್ನು ನೆನಪಿಡುತ್ತದೆ ಎಂದು ಅವರು ಹೇಳಿದ್ದಾರೆ.

ಬ್ರಿಟೀಷರಿಗೆ ಕ್ಷಮಾಪಣಾ ಪತ್ರ ಬರೆದು ಜೈಲಿನಿಂದ ಹೊರಬಂದ ಸಾವರ್ಕರ್‌ ಸ್ವಾತಂತ್ರ್ಯ ಹೋರಾಟಗಾರರಾದರೆ, ನಾಲ್ಕು ಆಂಗ್ಲೋ ಮೈಸೂರು ಯುದ್ಧ ಮಾಡಿ ತನ್ನ ಮಕ್ಕಳನ್ನು ಬ್ರಿಟಿಷರಿಗೆ ಒತ್ತೆ ಇಟ್ಟು ಸಮರದಲ್ಲಿ ಮಡಿದ ಟಿಪ್ಪು ಸುಲ್ತಾನ್ ಸ್ವಾತಂತ್ರ್ಯ ಹೋರಾಟಗಾರ ಯಾಕಲ್ಲ ಎಂದು ಪ್ರಶ್ನಿಸಿದ್ದಾರೆ.

ಪ್ರಮುಖ ಸುದ್ದಿ :-   ೯೦ ವರ್ಷಗಳಿಂದ ಕನ್ನಡ ಪುಸ್ತಕಗಳನ್ನು ಪ್ರಕಟಿಸುತ್ತಿರುವ ಸಾಹಿತ್ಯ ಭಂಡಾರ ಪುಸ್ತಕ ಮಳಿಗೆಗೆ ಈಗ ನವೀಕರಣದ ಸಂಭ್ರಮ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement