ಅಪಘಾತಕ್ಕೀಡಾದ ಗೃಹ ಸಚಿವ ಆರಗ ಜ್ಞಾನೇಂದ್ರ ಬೆಂಗಾವಲು ವಾಹನ

ಶಿವಮೊಗ್ಗ: ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದೆ. ಭದ್ರಾವತಿ ಜಂಕ್ಷನ್ ಬಳಿ ಈ ಅಪಘಾತ ಸಂಭವಿಸಿದ್ದು, ಬೆಂಗಾವಲು ಜೀಪಿಗೆ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ.
ಗೃಹ ಸಚಿವರು ತುಮಕೂರಿನಿಂದ ತೀರ್ಥಹಳ್ಳಿಗೆ ಬರುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಕಾರು ಬೆಂಗಳೂರು ಕಡೆಗೆ ಹೋಗುತ್ತಿತ್ತು. ಈ ಪರಿಣಾಮ, ಬೆಂಗಾವಲು ವಾಹನ ಜಖಂಗೊಂಡಿದೆ. ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತವಾಗಿಲ್ಲ. ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ತುಮಕೂರಿನಿಂದ ತೀರ್ಥಹಳ್ಳಿಗೆ ತೆರಳುತ್ತಿದ್ದರು. ಈ ವೇಳೆಯಲ್ಲಿ ಎದುರುಗಡೆ ಬರುತ್ತಿದ್ದಂತ ಕಾರು ಮತ್ತು ಅವರ ಬೆಂಗಾವಲು ವಾಹನದ ಮಧ್ಯೆ ಡಿಕ್ಕಿ ಸಂಭವಿಸಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಚಾಮರಾಜನಗರ : ಇಂಡಿಗನತ್ತ ಮತಗಟ್ಟೆ ಮೇಲೆ ಕಲ್ಲು ತೂರಾಟ, ಗಲಾಟೆ, ಮತಯಂತ್ರಕ್ಕೆ ಹಾನಿ

ನಿಮ್ಮ ಕಾಮೆಂಟ್ ಬರೆಯಿರಿ

advertisement