ಧ್ವಜಾರೋಹಣದ ವೇಳೆ ಕುಸಿದು ಬಿದ್ದು ನಿವೃತ್ತ ಸೈನಿಕ ಸಾವು

ಮಂಗಳೂರು: ಸ್ವಾತಂತ್ರ್ಯ ದಿನೋತ್ಸವದ ಧ್ವಜಾರೋಹಣದ ವೇಳೆ ನಿವೃತ್ತ ಸೈನಿಕರೊಬ್ಬರು ಕುಸಿದು ಬಿದ್ದು ಬಳಿಕ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ವರದಿಯಾಗಿದೆ.
ಮೃತರನ್ನು ನಿವೃತ್ತ ಸೈನಿಕ ಗಂಗಾಧರ ಗೌಡ ಎಂದು ಗುರುತಿಸಲಾಗಿದೆ. ಕುಟ್ರುಪಾಡಿ ಗ್ರಾ.ಪಂ. ವತಿಯಿಂದ ಹಳೆ ಸ್ಟೇಷನ್ ಅಮೃತ ಸರೋವರದ ಬಳಿ ಹೊಸಮಠ ಸಿ.ಎ.ಬ್ಯಾಂಕಿನ ಮಾಜಿ ಅಧ್ಯಕ್ಷ ಎನ್. ಕರುಣಾಕರ ಗೋಗಟೆ ಧ್ವಜಾರೋಹಣ ಮಾಡಲು ಸಿದ್ಧತೆ ಮಾಡುತ್ತಿದ್ದಾಗ ಅವರಿಗೆ ನಿವೃತ್ತ ಸೈನಿಕ ಗಂಗಾಧರ ಗೌಡ ಅವರು ಧ್ವಜ ವಂದನೆಯ ಮಾಹಿತಿ ನೀಡಿ ಧ್ವಜಾರೋಹಣಕ್ಕೆ ಸಿದ್ಧರಾಗುತ್ತಿದ್ದಾಗ ಗಂಗಾಧರ ಗೌಡ ಕುಸಿದು ಬಿದ್ದು ಅಸ್ವಸ್ಥಗೊಂಡರು. ಕೂಡಲೇ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ವೇಳೆ ದಾರಿಯಲ್ಲಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್‌ ಆರು ದಿನ ಸಿಐಡಿ ಕಸ್ಟಡಿಗೆ

ನಿಮ್ಮ ಕಾಮೆಂಟ್ ಬರೆಯಿರಿ

advertisement