ಬೀದರ್: ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದೇವರ ದರ್ಶನಕ್ಕೆ ಹೊರಟಿದ ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ ಹಾಗೂ ಐವರು ಗಾಯಗೊಂಡಿದ್ದಾರೆ.
ಬೀದರಿನ ತಾಲೂಕಿನ ಬಂಗೂರು ಬಳಿಯ ರಾಷ್ಟ್ರೀಯ ಹೆದ್ದಾರಿ ಬಳಿ ಎರ್ಟಿಗಾ ಕಾರು ಮತ್ತು ಕಂಟೇನರ್ ನಡುವೆ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಮಗು ಆಸ್ಪತ್ರೆಯಲ್ಲಿ ಸಾವಿಗೀಡಾಗಿದೆ.
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಮೃತರನ್ನು ಹೈದರಾಬಾದಿನ ಬೇಗಂಪೇಟ್ ನಿವಾಸಿಗಳಾದ ಗಿರಿಧರ (45), ಅನಿತಾ (30), ಪ್ರಿಯಾ (15), ಬಾಲಕ ಮಹೇಕ್ (2) ಹಾಗೂ ಮಹೇಶ (35) ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಐವರನ್ನು ಬೀದರ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಗಿರಿಧರ ಹೈದರಾಬಾದ್ನ ಠಾಣೆಯೊಂದರಲ್ಲಿ ಮುಖ್ಯಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕಲಬುರಗಿ ಜಿಲ್ಲೆಯ ಗಾಣಗಾಪುರನ ದತ್ತಾತ್ರೇಯ ದರ್ಶನಕ್ಕಾಗಿ ಹೈದರಾಬಾದ್ನ ಒಂದೇ ಕುಟುಂಬದ 10 ಸಂಬಂಧಿಕರು ಕಾರಿನಲ್ಲಿ ತೆರಳುತ್ತಿದ್ದರು ಎಂದು ಹೇಳಲಾಗಿದೆ. ಬೀದರ್ ತಾಲೂಕಿನ ಮನ್ನಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ