ಶಿವಮೊಗ್ಗದಲ್ಲಿ ಮತ್ತೆ ಭುಗಿಲೆದ್ದ ಫೋಟೋ ವಿವಾದ: ಇಬ್ಬರಿಗೆ ಚೂರಿ ಇರಿತ, ಉದ್ವಿಗ್ನ, ಶಿವಮೊಗ್ಗ ನಗರದಾದ್ಯಂತ ನಿಷೇಧಾಜ್ಞೆ ಜಾರಿ

ಶಿವಮೊಗ್ಗ: ವೀರ ಸಾವರ್ಕರ್ ಭಾವಚಿತ್ರ ವಿಚಾರದಲ್ಲಿ ಎರಡು ಕೋಮಿನ ನಡುವೆ ಜಟಾಪಟಿಯಾಗಿ  ಪ್ರಹಾರ ನಡೆದ ಘಟನೆ ಶಿವಮೊಗ್ಗದ ಅಮೀರ್ ಅಹಮದ್ ವೃತ್ತದಲ್ಲಿ ಸೋಮವಾರ ನಡೆದಿದೆ. ಪರಿಸ್ಥಿತಿ ಉದ್ವಿಗ್ನಗೊಂಡಿದ್ದು ಇಬ್ಬರಿಗೆ ಚಾಕುವಿನಿಂದ ಇರಿಯಲಾಗಿದೆ ಎಂದು ಹೇಳಲಾಗಿದೆ. ಇಲ್ಲಿನ ಅಮೀರ್ ಅಹಮದ್ ಸರ್ಕಲ್‌ನಲ್ಲಿ ಎರಡು ಕೋಮುಗಳ ನಡುವೆ ಗಲಾಟೆ ಹಿನ್ನೆಲೆಯಲ್ಲಿ ನಗರ ವ್ಯಾಪ್ತಿಯಲ್ಲಿ ಸೆಕ್ಷನ್ 144, ನಿಷೇದಾಜ್ಞೆ ಜಾರಿ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.

ಸಾವರ್ಕರ್ ಭಾವಚಿತ್ರ ಇಡುವ ವಿಚಾರದಲ್ಲಿ ಮತ್ತೆ ಗಲಾಟೆ ನಡೆದು, ಎರಡು ಕೋಮಿನ ನಡುವೆ ಜಟಾಪಟಿ ನಡೆದಿದೆ. ಸಾವರ್ಕರ್‌ ಫೋಟೊ ತೆಗೆದು ಟಿಪ್ಪು ಸುಲ್ತಾನ್‌ ಚಿತ್ರವನ್ನು ಇಡಲು ಗುಂಪು ಮುಂದಾಗಿತ್ತು. ಗಲಾಟೆ ಜೋರಾಗುತ್ತಿದ್ದಂತೆ ಸಾವರ್ಕರ್‌ ಫೋಟೊವನ್ನು ತೆಗೆಯಲಾಯಿತು. ಟಿಪ್ಪು ಚಿತ್ರ ಇಡಲು ಪೊಲೀಸರು ಅವಕಾಶ ನೀಡಲಿಲ್ಲ.
ಹಿಂದೂ ಸಂಘಟನೆ ಕೂಡ ಶಿವಮೊಗ್ಗದ ಅಮೀರ್ ಅಹ್ಮದ್ ವೃತ್ತದಲ್ಲಿ ಸಾವರ್ಕರ್ ಫ್ಲೆಕ್ಸ್ ಅಳವಡಿಸಲಾಗಿತ್ತು. ಸಾವರ್ಕರ್ ಫ್ಲೆಕ್ಸ್ ಅಳವಡಿಕೆಗೆ ಟಿಪ್ಪು ಸುಲ್ತಾನ್ ಸಂಘಟನೆ ವಿರೋಧಿಸಿ ಫ್ಲೆಕ್ಸ್ ತೆರವಿಗೆ ಮುಂದಾಗಿದೆ ಹಾಗೂ ಟಿಪ್ಪು ಫೋಟೋ ಇಡಲು ಹೊರಟಿದೆ. ಈ ಕಾರಣಕ್ಕಾಗಿ ಎರಡು ಗುಂಪುಗಳ ನಡುವೆ ಜಟಾಪಟಿ ಉಂಟಾಗಿದೆ. ಈ ವೇಳೆ ಫ್ಲೆಕ್ಸ್ ತೆರವಿಗೆ ಮುಂದಾದ ಕಾರ್ಯಕರ್ತರ ಮೇಲೆ ಲಾಠಿಚಾರ್ಜ್ ಆಗಿದೆ. ಇದೇವೇಳೆ ಪ್ರೇಮ್​ ಸಿಂಗ್​ ಎಂಬ ಯುವಕನಿಗೆ ಚಾಕುವಿನಿಂದ ಇರಿಯಲಾಗಿದೆ ಎಂದು ಹೇಳಲಾಗಿದೆ.ಬೈಕ್‍ನಲ್ಲಿ ಬಂದ ದುಷ್ಕರ್ಮಿಗಳು ಮನೆ ಮುಂದೆ ನಿಂತಿದ್ದ ಪ್ರೇಮ್ ಸಿಂಗ್ ಮೇಲೆ ದಾಳಿ ನಡೆಸಿ ಚಾಕು ಇರಿದಿದ್ದಾರೆ.  ಅವರನ್ನು ಇಲ್ಲಿಯ ಮೆಗ್ಗಾನ್​ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮತ್ತೊಂದು ಘಟನೆಯಲ್ಲಿ ಅಶೋಕ ನಗರದಲ್ಲಿ ಅಂಗಡಿ ಇಟ್ಟುಕೊಂಡು ಜೀವನ ನಡೆಸುತ್ತಿದ್ದಂತ ಪ್ರವೀಣ್ (27) ಎಂಬಾತನಿಗೆ ಚಾಕುವಿನಿಂದ ಇರಿಯಲಾಗಿದೆ. ಅಂಗಡಿ ಬಾಗಿಲು ಮುಚ್ಚಿ ಮನೆಗೆ ತೆರಳುತ್ತಿದ್ದ ವೇಳೆ ಪ್ರವೀಣ್ ಎಂಬವರಿಗೆಕಿಡಿಗೇಡಿಗಳು ಚಾಕುವಿನಿಂದ ಇರಿದಿದ್ದಾರೆ ಎಂದು ಹೇಳಲಾಗಿದೆ. ಅವರನ್ನು ಕೂಡ ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.,  ಗಲಾಟೆ ಹಿನ್ನೆಲೆಯಲ್ಲಿ ಗುಂಪು ಚದುರಿಸಲು ಪೊಲೀಸರು ಲಾಠಿ ಚಾರ್ಜ್​ ನಡೆಸಿದ್ದಾರೆ. ಶಿವಮೊಗ್ಗ ನಗರದಾದ್ಯಂತ ಸೆಕ್ಷನ್ 144 ಜಾರಿ ಮಾಡಲಾಗಿದೆ.

ಪ್ರಮುಖ ಸುದ್ದಿ :-   ವೀಡಿಯೊ...| ಎಲ್ಲರೆದುರು ಸರ್ಪಕ್ಕೆ ಮುತ್ತಿಕ್ಕಿದ ಭೂಪ...ಆದ್ರೆ ನಂತರ ಆದದ್ದೇ ಬೇರೆ

ಸ್ವಾತಂತ್ರ ಬಂದು 75 ವರ್ಷವಾದ ಹಿನ್ನೆಲೆಯಲ್ಲಿ‌ ಮಾಲ್​ನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರ ಹಾಕಿ ಅಲಂಕರಿಸಲಾಗಿತ್ತು. ಅವುಗಳಲ್ಲಿ ಸಾವರ್ಕರ್ ಭಾವಚಿತ್ರ ಇರುವುದನ್ನು ಕಂಡ ಎಸ್​ಡಿಪಿಐ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು. ಸಾವರ್ಕರ್ ಭಾವಚಿತ್ರ ತೆಗೆಯುವಂತೆ ಪ್ರತಿಭಟನೆ ನಡೆಸಿದ್ದರು. ಸಾವರ್ಕರ್ ಚಿತ್ರದ ಬದಲು ಸ್ವಾತಂತ್ರ್ಯಕ್ಕಾಗಿ ಜೀವಕೊಟ್ಟವರ ಭಾವಚಿತ್ರ ಹಾಕುವಂತೆ ಪಟ್ಟುಹಿಡಿದಿದ್ದರು. ನಂತರ ಆ ಜಾಗದಲ್ಲಿ ಟಿಪ್ಪು ಸುಲ್ತಾನ್​ ಫೋಟೋ ಇರಿಸಲು ಯತ್ನಿಸಲಾಗಿತ್ತು. ಇದರಿಂದ ಪರಿಸ್ಥಿತಿ ವಿಕೋಪಕ್ಕೆ ಹೋಗಿ ಪೊಲೀಸರು ಲಾಠಿ ಚಾರ್ಜ್‌ ನಡೆಸಿದರು.

ಸಾವರ್ಕರ್‌ ಫ್ಲೆಕ್ಸ್‌ ತೆರವು ಮಾಡಿದರು ಎನ್ನಲಾಗಿದೆ. ಇದೇ ವೇಳೆ ಫ್ಲೆಕ್ಸ್ ತೆರವು ಖಂಡಿಸಿ ಹಿಂದೂ ಪರ ಸಂಘಟನೆಗಳು ಧರಣಿ ನಡೆಸಿದ್ದಾರೆ. ಶಿವಮೊಗ್ಗದ ಅಮೀರ್ ಅಹ್ಮದ್ ವೃತ್ತದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದ್ದು ಶಿವಮೊಗ್ಗ ನಗರದಾದ್ಯಂತ ಸೆಕ್ಷನ್ 144 ಜಾರಿ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಎಸ್ಪಿ ಲಕ್ಷ್ಮಿ ಪ್ರಸಾದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪರಿಸ್ಥಿತಿ ನಿಯಂತ್ರಿಸಲು ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಸೆಕ್ಷನ್ 144 ನಿಷೇದಾಜ್ಞೆ ಜಾರಿಗೊಳಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.

ಪ್ರಮುಖ ಸುದ್ದಿ :-   ರಾಜ್ಯದಲ್ಲಿ ತಾಪಮಾನ ಏರಿಕೆ : ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement