ಶಿವಮೊಗ್ಗ: ಶಿವಮೊಗ್ಗದಲ್ಲಿ ಕೋಮು ಗಲಭೆಯ ಹಿನ್ನೆಲೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ನಗರ, ಭದ್ರಾವತಿ ಪಟ್ಟಣದ ಶಾಲಾ ಕಾಲೇಜಿಗೆ ನಾಳೆ, ಮಂಗಳವಾರ ರಜೆ ನೀಡಲಾಗಿದೆ. ಜಿಲ್ಲಾಧಿಕಾರಿ ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.
75ನೇ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಸಂದರ್ಭದಲ್ಲಿ ಶಿವಮೊಗ್ಗದಲ್ಲಿ ಕೋಮು ಗಲಭೆ ನಡೆದಿದೆ. ಶಿವಮೊಗ್ಗದ ಅಮೀರ್ ಅಹ್ಮದ್ ವೃತ್ತದಲ್ಲಿ ವೀರ್ ಸಾವರ್ಕರ ಮತ್ತು ಟಿಪ್ಪು ಸುಲ್ತಾನ್ ಫ್ಲೆಕ್ಸ್ ವಿಚಾರವಾಗಿ ಗಲಾಟೆ ನಡೆದು ಚೂರಿ ಇರಿತದ ಪ್ರಕರಣಗಳು ನಡೆದಿವೆ. ದುಷ್ಕರ್ಮಿಗಳು ಇಬ್ಬರಿಗೆ ಚಾಕು ಇರಿದಿದ್ದಾರೆ. ಸದ್ಯ ಪರಿಸ್ಥಿತಿ ಉದ್ವಿಗ್ನತೆಯಿಂದ ಕೂಡಿದ್ದು, ಶಿವಮೊಗ್ಗ ನಗರ, ಭದ್ರಾವತಿ ಪಟ್ಟಣದ ಶಾಲಾ ಕಾಲೇಜಿಗೆ ನಾಳೆ ರಜೆ ಘೋಷಿಸಿ ಡಿಸಿ ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ. ಹಾಗೂ ಶಿವಮೊಗ್ಗ, ಭದ್ರಾವತಿಯಲ್ಲಿ ಆಗಸ್ಟ್ 18ರ ವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ