ಸ್ವಾತಂತ್ರ್ಯ ಅಮೃತ ಮಹೋತ್ಸವದ ಸವಿನೆನಪಿಗೆ ಹೊಸ ಯೋಜನೆಗಳನ್ನು ಘೋಷಣೆ ಮಾಡಿದ ಸಿಎಂ ಬೊಮ್ಮಾಯಿ

ಬೆಂಗಳೂರು : ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಮಾಣೆಕ್ ಶಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ.
ಇದೇ ಸಂದರ್ಭದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸವಿನೆನಪಿಗಾಗಿ ಅವರು ಹಲವು ಹೊಸ ಯೋಜನೆಗಳನ್ನು ಘೋಷಿಸಿದ್ದಾರೆ.
250 ಕೋಟಿ ರೂ. ವೆಚ್ಚದಲ್ಲಿ ರಾಜ್ಯದ ಎಲ್ಲ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ಸಂಪೂರ್ಣವಾಗಿ ಶೌಚಾಲಯಗಳ ನಿರ್ಮಾಣ ಮಾಡಲಾಗುವುದು ಎಂದು ಅವರು ಪ್ರಕಟಿಸಿದ್ದಾರೆ.

ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದಿಂದ ಕುಂಬಾರ, ಕಮ್ಮಾರ, ಬಡಗಿ, ಶಿಲ್ಪಿಗಳು, ಭಜಂತ್ರಿ ಬುಟ್ಟಿ ಹೆಣೆಯುವವರು, ವಿಶ್ವಕರ್ಮರು, ಮೇದರು ಸೇರಿದಂತೆ ಕುಶಲಕರ್ಮಿಗಳಿಗೆ ತಲಾ 50 ಸಾವಿರ ರೂ. ಸಾಲದ ಸಹಾಯಧನ ಯೋಜನೆ ಘೋಷಣೆ ಮಾಡಿದ್ದಾರೆ.
ಭೂ ರಹಿತ ಕೃಷಿ ಕಾರ್ಮಿಕರ ಮಕ್ಕಳಿಗೂ ರೈತರ ವಿದ್ಯಾನಿಧಿ ಯೋಜನೆ ವಿಸ್ತರಣೆ, ರಾಜ್ಯದಲ್ಲಿ ಹೊಸದಾಗಿ 4050 ಅಂಗನವಾಡಿ ತೆರೆಯಲಾಗುವುದು. 16 ಲಕ್ಷ ಕುಟುಂಬಗಳಿಗೆ ಪೌಷ್ಟಿಕ ಆಹಾರ ಒದಗಿಸುವ ನಿರ್ಧಾರ. ಇದರಿಂದ 8100 ಮಹಿಳೆಯರಿಗೂ ಇದರಿಂದ ಉದ್ಯೋಗವಕಾಶ ದೊರೆಯಲಿದೆ ಎಂದು ಅವರು ತಿಳಿಸಿದ್ದಾರೆ.
ಕರ್ತವ್ಯ ನಿರತ ಸೈನಿಕ ಮೃತಪಟ್ಟರೆ, ಆ ಕುಟುಂಬದ ಒಬ್ಬ ಸದಸ್ಯರಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ನೌಕರಿ, ₹ 25 ಲಕ್ಷ ಪರಿಹಾರ ಕೊಡುತ್ತೇವೆ ಎಂದು ಘೋಷಿಸಿದರು.

ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement