ಕ್ಯಾಂಟರ್‌-ಬೈಕ್‌ ಡಿಕ್ಕಿ: ಅಂತ್ಯಸಂಸ್ಕಾರಕ್ಕೆ ಹೊರಟಿದ್ದ ಒಂದೇ ಕುಟುಂಬದ ಮೂವರು ಸಾವು

posted in: ರಾಜ್ಯ | 0

ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಕ್ರಾಸ್ ಬಳಿ ಮಂಗಳವಾರ ಐಶರ್‌ ಕ್ಯಾಂಟರ್‌ ವಾಹನ ಮತ್ತು ಬೈಕ್ ನಡುಬೆ ಭೀಕರ ಅಪಘಾತ ಸಂಭವಿಸಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದ ವರದಿಯಾಗಿದೆ.
ಮೃತರನ್ನು ಬಸವರಾಜ ಮಾಸಳಿ(40), ಬಸವರಾಜ ಅವರ ಪುತ್ರ ನರೇಶ್(8) ಮತ್ತು ಚಿಕ್ಕಮ್ಮ ಭೀಮವ್ವ ಮಾಸಳಿ(50) ಎಂದು ಗುರುತಿಸಲಾಗಿದೆ.
ಇವರೆಲ್ಲರೂ ಸಂಬಂಧಿಕರೊಬ್ಬರ ಅಂತ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಒಂದೇ ಬೈಕ್​ನಲ್ಲಿ ಕಲ್ಲೂರಿನಿಂದ ಕುರ್ಡಿ ಗ್ರಾಮಕ್ಕೆ ಹೊರಟಿದ್ದರು ಎಂದು ಹೇಳಲಾಗಿದೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ರಾಯಚೂರು ಮಾರ್ಗವಾಗಿ ಹೊರಟಿದ್ದ ಐಶರ್‌ ಕ್ಯಾಂಟರ್‌ ವಾಹನ ನಿಯಂತ್ರಣ ತಪ್ಪಿದ ವಾಹನ ಬೈಕ್​ಗೆ ಡಿಕ್ಕಿ ಹೊಡೆದು ರಸ್ತೆಬದಿಯ ಜಮೀನಿನತ್ತ ನುಗ್ಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್​ನಲ್ಲಿದ್ದ ಮೂವರೂ ಸ್ಥಳದಲ್ಲೇ ಮೃತಪಟ್ಟಿದ್ದು, ಶವಗಳು ರಸ್ತೆ ಬದಿಯ ಜಮೀನಿನಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು.
ಅಪಘಾತ ಸಂಭವಿಸುತ್ತಿದ್ದಂತೆ ಕ್ಯಾಂಟರ್‌ ಚಾಲಕ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಸಿರವಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಓದಿರಿ :-   ಮನೆ ಗೋಡೆ ಕುಸಿದು 4 ವರ್ಷದ ಮಗು ಸೇರಿ ಮೂವರು ಸಾವು

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement